ಬಿಜೆಪಿ ಸೇರದ್ದಕ್ಕೆ ಜೈಲಿಗೆ ಹಾಕಿದರು: ಡಿ.ಕೆ. ಶಿವಕುಮಾರ್
Team Udayavani, Dec 7, 2021, 5:40 AM IST
ಬೆಳಗಾವಿ: ಬಿಜೆಪಿಗೆ ಸೇರುವುದಿಲ್ಲ ಎಂದಿದ್ದಕ್ಕೆ ನನ್ನನ್ನು ತಿಹಾರ್ ಜೈಲಿಗೆ ಕಳುಹಿಸಿದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಆರೋಪಿಸಿದರು.
ಸುದ್ದಿಗಾರರ ಜತೆ ಮಾತ ನಾಡಿದ ಅವರು, ನನ್ನನ್ನು ಜೈಲಿಗೆ ಹಾಕಿದ್ದಕ್ಕೆ ಕಾರಣ ಏನು ಎಂಬುದು ಎಲ್ಲರಿಗೂ ಗೊತ್ತಿದೆ. ಈ ಬಗ್ಗೆ ನಾನು ಮಾತನಾಡಿದ್ದು ದಾಖಲೆಯೇ ಇದೆ. ಡಿ.14ರಂದು ಡಿಕೆಶಿ ವಿರುದ್ಧ ಓಪನ್ ವಾರ್ ಆಗಲಿ ಎಂಬ ಜಾರಕಿಹೊಳಿ ಆರೋಪದ ಬಗ್ಗೆ ತಲೆಕೆಡಿಸಿ ಕೊಳ್ಳುವುದಿಲ್ಲ. ಇಂಥದ್ದೆಲ್ಲ ಎಷ್ಟೋ ನೋಡಿದ್ದೀವಿ. ಬೆಳ ಗಾವಿ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯದ ಹಣಾಹಣಿಯೇ ಹೊರತು ಲಕ್ಷ್ಮೀ ಹೆಬ್ಟಾಳ್ಕರ್ ಹಾಗೂ ರಮೇಶ ಜಾರಕಿಹೊಳಿ ಮಧ್ಯದ ಚುನಾವಣೆ ಅಲ್ಲ ಎಂದರು.
ಇದನ್ನೂ ಓದಿ:ಇಂಡೋ-ಅಮೆರಿಕನ್ ಸಿನಿಮಾಕ್ಕೆ ಬಾಲಿವುಡ್ ನಟಿ ಐಶ್ವರ್ಯ ನಾಯಕಿ
ಬಿಜೆಪಿ ನಾಯಕರಿಂದಲೇ ಸರಕಾರ ಅಸ್ಥಿರ ಯತ್ನ
ಬಿಜೆಪಿ ಸರಕಾರವನ್ನು ಅವರ ಪಕ್ಷದವರೇ ಅಸ್ಥಿರಗೊಳಿಸಲು ಶ್ರಮಿಸುತ್ತಿದ್ದಾರೆ. ರಾಷ್ಟ್ರೀಯ ನಾಯಕರಿಗೆ ರಾಜ್ಯದ ನಾಯಕರನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಆಗುತ್ತಿಲ್ಲ. ಇಡೀ ದೇಶದಲ್ಲಿಯೇ ಅತ್ಯಂತ ಭ್ರಷ್ಟ ಸರಕಾರ ರಾಜ್ಯದಲ್ಲಿದೆ. ಯಡಿಯೂರಪ್ಪ ಅವರು ತಮಗಾದ ನೋವಿನಿಂದ “ಕಾಂಗ್ರೆಸ್ ಉಸಿರು ನಿಲ್ಲಿಸುತ್ತೇವೆ’ ಎನ್ನುತ್ತಿದ್ದಾರೆ. ಬಿಜೆಪಿ ಮೇಲಿನ ದುಃಖ, ದುಮ್ಮಾನ, ಮಾನಸಿಕ ಹಿಂಸೆ, ರಾಜೀನಾಮೆ ಬಗೆಗಿನ ಸಿಟ್ಟನ್ನು ಕಾಂಗ್ರೆಸ್‌ನವರ ಮೇಲೆ ತೀರಿಸಿಕೊಳ್ಳುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.