ಚುನಾವಣಾ ಸೂಕ್ಷ್ಮ ವೀಕ್ಷಕರಿಗೆ ತರಬೇತಿ
Team Udayavani, Dec 7, 2021, 12:20 PM IST
ಬೀದರ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಜಿಲ್ಲೆಯಲ್ಲಿ ನೇಮಕಗೊಂಡಿರುವ 225 ಚುನಾವಣಾ ಸೂಕ್ಷ್ಮ ವೀಕ್ಷಕರಿಗೆ ಚುನಾವಣಾ ತರಬೇತಿ ನಗರದ ಜಿಲ್ಲಾ ರಂಗಮಂದಿರದಲ್ಲಿ ಸೋಮವಾರ ನಡೆಯಿತು.
ಚುನಾವಣಾ ವೀಕ್ಷಕರಾದ ಕಾವೇರಿ ಡಿ.ಬಿ. ಹಾಗೂ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರ ಸಮ್ಮುಖದಲ್ಲಿ ತರಬೇತಿ ನಡೆಯಿತು. ಈ ವೇಳೆ ಜಿಲ್ಲಾಧಿಕಾರಿಗಳು ಮಾತನಾಡಿ, ಚುನಾವಣೆಯಲ್ಲಿ ಚುನಾವಣಾ ಸೂಕ್ಷ್ಮ ವೀಕ್ಷಕರೆಲ್ಲರೂ ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು. ಮತದಾನ ದಿನದಂದು ಸಮಯಕ್ಕೆ ಸರಿಯಾಗಿ ಹಾಜರಿದ್ದು, ಮತದಾನ ಪ್ರಕ್ರಿಯೆ ಸುಸೂತ್ರವಾಗಿ, ಕಾನೂನುಬದ್ಧವಾಗಿ ನಡೆಯುವಂತೆ ನಿಗಾ ವಹಿಸಬೇಕು ಎಂದು ತಿಳಿಸಿದರು.
ಈ ವೇಳೆ ರಾಜ್ಯ ಮಾಸ್ಟರ್ ಟ್ರೇನರ್ ಡಾ| ಗೌತಮ ಅರಳಿ ಮಾತನಾಡಿ, ಚುನಾವಣಾ ವೀಕ್ಷಕರ ಪ್ರತಿನಿಧಿಗಳಾಗಿ ತಾವು ಮತದಾನ ದಿನದಂದು ಮತಗಟ್ಟೆಯಲ್ಲಿ ಕುಳಿತು ಪ್ರತಿಯೊಂದನ್ನು ಸೂಕ್ಷ್ಮವಾಗಿ ಗಮನಿಸಬೇಕು. ಬೆಳಗ್ಗೆ 8ರಿಂದ ಸಂಜೆ 4.30ರವರೆಗೂ ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುವವರ ಮತ್ತು ಮತದಾನ ಮಾಡಲು ಬರುವವರ ನಡವಳಿಕೆ ಹೇಗಿತ್ತು ಎಂಬುದನ್ನು ಸರಿಯಾಗಿ ಗಮನಿಸಬೇಕು. ಮತಗಟ್ಟೆಗಳಲ್ಲಿ ಕಡ್ಡಾಯ ವಿಡಿಯೋಗ್ರಫಿ ಆಗುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಮತದಾನ ಮಾಡಲು ಬರುವವರು ಮತದಾನದ ಗೌಪ್ಯತೆ ಕಾಪಾಡಿಕೊಂಡಿದ್ದಾರೋ ಇಲ್ಲವೋ ಎಂಬುದರ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದರು. ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಚುನಾವಣಾ ಶಾಖೆಯ ಸತ್ಯದೀಪ ಮನಗೊಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.