ನಿಗಮದ ಹೆಸರು ಬದಲಾಯಿಸಿದ್ರೆ ಹೋರಾಟ

Team Udayavani, Dec 7, 2021, 5:12 PM IST

chitradurga news

ಚಿತ್ರದುರ್ಗ: ಕಾಡುಗೊಲ್ಲ ಅಭಿವೃದ್ಧಿ ನಿಗಮದಹೆಸರನ್ನು ರಾಜಕೀಯ ಒತ್ತಡದ ಕಾರಣಕ್ಕೆಗೊಲ್ಲ-ಕಾಡುಗೊಲ್ಲ ಅಭಿವೃದ್ಧಿ ನಿಗಮ ಎಂದುಮರುನಾಮಕರಣ ಮಾಡಬಾರದು ಎಂದುನಾಡೋಜ ಸಿರಿಯಜ್ಜಿ ಸಾಂಸ್ಕೃತಿಕ ಪ್ರತಿಷ್ಠಾನದಅಧ್ಯಕ್ಷ ಡಾ| ಮಲ್ಲಿಕಾರ್ಜುನ ಕಲಮರಹಳ್ಳಿ ಹೇಳಿದರು.

ಪತ್ರಿಕಾ ಭವನದಲ್ಲಿ ಸೋಮವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರುಒತ್ತಡಕ್ಕೆ ಮಣಿದು ಕಾಡುಗೊಲ್ಲ ಅಭಿವೃದ್ಧಿನಿಗಮದ ಹೆಸರು ಬದಲಾವಣೆ ಮಾಡಿದರೆರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು.

ಹಿಂದಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು, ಶಿರಾ ಉಪ ಚುನಾವಣೆವೇಳೆ ಮಾಧ್ಯಮಗಳ ಮುಂದೆ ಸ್ಪಷ್ಟವಾಗಿಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸುತ್ತೇವೆಎಂದು ಹೇಳಿದ್ದರು.

ಆದರೆ ಶಾಸಕಿ ಪೂರ್ಣಿಮಾಶ್ರೀನಿವಾಸ್‌ ಒತ್ತಡಕ್ಕೆ ಮಣಿದು ಗೊಲ್ಲ ಅಭಿವೃದ್ಧಿನಿಗಮ ಎಂಬ ಹೆಸರಿನೊಂದಿಗೆ ಅ ಧಿಕೃತಆದೇಶ ಹೊರಡಿಸಿದ್ದರು. ಮುಖ್ಯಮಂತ್ರಿಗಳನಿರ್ಧಾರಿಂದ ಕಾಡುಗೊಲ್ಲ ಬುಡಕಟ್ಟುಸಮುದಾಯದ ಶತಮಾನಗಳ ಬೇಡಿಕೆಗೆ ತಣ್ಣೀರು ಎರಚಿದಂತಾಯಿತು.

ಈ ವೇಳೆ ಪ್ರತಿಭಟನೆ ಹಾದಿತುಳಿದಾಗ ಸರ್ಕಾರ ಎಚ್ಚೇತ್ತು ಪುನಃ ಕಾಡುಗೊಲ್ಲಅಭಿವೃದ್ಧಿ ನಿಗಮವನ್ನೇ ಮರುಸ್ಥಾಪಿಸಿ ಅ ಧಿಸೂಚನೆಹೊರಡಿಸಿತು. ಬಳಿಕ ನಿಗಮಕ್ಕೆ 5 ಕೋಟಿ ರೂ.ಅನುದಾನ ಮಂಜೂರು ಮಾಡಿ ಅ ಧಿಕಾರಿನೇಮಕ ಮಾಡಿದರೂ ಸಹ ಅಧ್ಯಕ್ಷರು ಮತ್ತುಸದಸ್ಯರನ್ನೊಳಗೊಂಡ ಕಾರ್ಯಕಾರಿ ಮಂಡಳಿಇನ್ನೂ ರಚನೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮತ್ತೆ ಮಧ್ಯ ಪ್ರವೇಶಿಸಿದ ಶಾಸಕಿಪೂರ್ಣಿಮಾ ಶ್ರೀನಿವಾಸ್‌ ಸಿಎಂ ಮೇಲೆ ಒತ್ತಡತಂದು ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆಗೊಲ್ಲ-ಕಾಡುಗೊಲ್ಲ ಅಭಿವೃದ್ಧಿ ನಿಗಮ ಎಂಬಹೆಸರು ಇಡಲು ಸಿದ್ಧತೆ ನಡೆಸಿದ್ದಾರೆ. ಇದಕ್ಕೆ ಸಿಎಂಬಸವರಾಜ ಬೊಮ್ಮಾಯಿ ಸಹ ಸಕಾರಾತ್ಮಕವಾಗಿಸ್ಪಂದಿಸಿರುವುದಾಗಿ ತಿಳಿದು ಬಂದಿದೆ.

ಇವರಉದ್ದೇಶ ಈಡೇರಿದರೆ ಕಾಡುಗೊಲ್ಲರ ತಲೆಯಮೇಲೆ ಚಪ್ಪಡಿ ಕಲ್ಲು ಎಳೆದಂತಾಗುತ್ತದೆ.ಆದ್ದರಿಂದ ಮುಖ್ಯಮಂತ್ರಿಗಳು ಕೂಡಲೇ ತಮ್ಮನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಆಗ್ರಹಿಸಿದರು.

ಯಾದವ ಪ್ರೇರಿತ ಗೊಲ್ಲರಿಗೂ(ಊರುಗೊಲ್ಲರು) ಕಾಡುಗೊಲ್ಲರಿಗೂ ಎಳ್ಳುಕಾಳಿನಷ್ಟೂ ಸಮಾಜೋ ಸಾಂಸ್ಕೃತಿಕ ಸಾಮ್ಯತೆ ಸಂಬಂಧಗಳಿಲ್ಲ. ಆಂಧ್ರ ಮೂಲದ ಊರುಗೊಲ್ಲರು ಒಂದು ಜಾತಿ ವರ್ಗವಾದರೆ, ಕನ್ನಡ ಮೂಲದಕಾಡುಗೊಲ್ಲರು ಬುಡಕಟ್ಟು ವರ್ಗ. ಕಾಡುಗೊಲ್ಲರು ಅಂಬು, ಕೊಂಬು, ಗುಡಿಕಟ್ಟು, ಕಟ್ಟೆಮನೆಹೊಂದಿರುವ ಸಂಪ್ರದಾಯದವರು. ಇದಾವುದೂಇಲ್ಲದ ಊರುಗೊಲ್ಲರು ಊರುಗಳಲ್ಲಿ ಮತ್ತುಪಟ್ಟಣಗಳಲ್ಲಿ ವಾಸಿಸುತ್ತಾರೆ. ಕಾಡುಗೊಲ್ಲರುಊರುಗಳಿಂದ ದೂರವಾಗಿ ಅಡವಿಗಳಲ್ಲಿ,ಹಟ್ಟಿಗಳಲ್ಲಿ ವಾಸಿಸುತ್ತಾರೆ ಎಂದು ತಿಳಿಸಿದರು.

ಪ್ರಧಾನ ಕಾರ್ಯದರ್ಶಿ ಪ್ರೊ|ಜಿ.ರಾಜಶೇಖರಯ್ಯ ಮಾತನಾಡಿ, ಕಾಡುಗೊಲ್ಲಬುಡಕಟ್ಟು ಸಮುದಾಯದೊಂದಿಗೆ ಯಾದವಊರುಗೊಲ್ಲ ಜಾತಿಯನ್ನು ಸಮೀಕರಣಮಾಡುವುದು ಅವೈಜ್ಞಾನಿಕ. ಊರುಗೊಲ್ಲಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮಸ್ಥಾಪಿಸಲು ಯಾತ ತಕರಾರೂ ಇಲ್ಲ ಎಂದು ಸ್ಟಷ್ಟಪಡಿಸಿದರು.

ಶಾಸಕಿ ಪೂರ್ಣಿಮಾ ಮತ್ತು ಅವರ ಪತಿರಾಜ್ಯ ಯಾದವ ಗೊಲ್ಲ ಸಂಘದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್‌ ಕಾಡುಗೊಲ್ಲರ ಅಭಿವೃದ್ಧಿ ನಿಗಮಹಾಗೂ ಎಸ್‌ಟಿ ಮೀಸಲಾತಿ ಬಗ್ಗೆ ತಳೆದಿರುವನಕಾರಾತ್ಮಕ ಧೋರಣೆ ಬದಲಾಯಿಸಿಕೊಳ್ಳಬೇಕು.ಇಲ್ಲವಾದಲ್ಲಿ ಕಾಡುಗೊಲ್ಲರ ತೀವ್ರಪ್ರತಿರೋಧವನ್ನು ಎದುರಿಸಬೇಕಾಗುತ್ತದೆ ಎಂದುತಾಕೀತು ಮಾಡಿದರು.ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷಸಿ. ಪಾತಲಿಂಗಪ್ಪ, ಉಪಾಧ್ಯಕ್ಷ ಜಿ. ವೆಂಕಟೇಶ್‌ಇತರರು ಇದ್ದರು.

ಟಾಪ್ ನ್ಯೂಸ್

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.