ಗೋವಾ: ಮಾಜಿ ಮುಖ್ಯಮಂತ್ರಿ,ಕಾಂಗ್ರೆಸ್ ಶಾಸಕ ರವಿ ನಾಯ್ಕ್ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ
Team Udayavani, Dec 7, 2021, 7:42 PM IST
ಪಣಜಿ: ಗೋವಾ ಮಾಜಿಮುಖ್ಯಮಂತ್ರಿ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ರವಿ ನಾಯ್ಕ್ ಮಂಗಳವಾರ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಮಂಗಳವಾರ ಶಾಸಕ ರವಿ ನಾಯ್ಕ್ ರವರು ಗೋವಾ ವಿಧಾನಸಭೆಯ ಸಭಾಪತಿ ರಾಜೇಶ್ ಪಾಟ್ನೇಕರ್ ರವರಿಗೆ ರಾಜೀನಾಮೆ ಸಲ್ಲಿಸಿದರು.
ಮಂಗಳವಾರ(7 ಡಿಸೆಂಬರ್) ಸಂಜೆ ಪೊಂಡಾದಲ್ಲಿ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇದರಿಂದಾಗಿ ರಾಜ್ಯ ಕಾಂಗ್ರೆಸ್ ಪಕ್ಷದ ಶಾಸಕರ ಸಂಖ್ಯೆ 3 ಕ್ಕೆ ಇಳಿಕೆಯಾದಂತಾಗಿದೆ.
ಈ ಕುರಿತು ಮಾಧ್ಯಮ ವರದಿಗಾರರಿಗೆ ಪ್ರತಿಕ್ರಿಯೆ ನೀಡಿದ ಶಾಸಕ ರವಿ ನಾಯ್ಕ- ನಾನು ಕಾಂಗ್ರೇಸ್ ಪಕ್ಷದ ಶಾಸಕ ಸ್ಥಾನಕ್ಕೆ ಇಂದು ಸಭಾಪತಿಗಳ ಬಳಿ ರಾಜೀನಾಮೆ ಸಲ್ಲಿಸಿದ್ದೇನೆ. ನಾನು ಬಿಜೆಪಿ ಪಕ್ಷ ಸೇರುತ್ತಿದ್ದೇನೆ. ನಾನು ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಪ್ರತಿಕ್ರಿಯೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.