ವೃತ್ತಿಪರ ಕೋರ್ಸ್‌ನಲ್ಲಿ ಕಂಪ್ಯೂಟರ್ ಸೈನ್ಸ್ ಆಯ್ಕೆಯ ಟ್ರೆಂಡ್
ಸಿಎಸ್ ಈಗ ವಿದ್ಯಾರ್ಥಿಗಳಿಗೆ ಫೇವರಿಟ್ ; ಉದ್ಯೋಗಾವಕಾಶ ಹೆಚ್ಚಿರುವ ಹಿನ್ನೆಲೆ ಈ ವಿಷಯಕ್ಕೆ ಆಸಕ್ತಿ
Team Udayavani, Dec 8, 2021, 5:50 AM IST
ಬೆಂಗಳೂರು: ಈ ಬಾರಿ ವೃತ್ತಿಪರ ಕೋರ್ಸ್‌ಗಳ ಆಯ್ಕೆಯಲ್ಲಿ ಕಂಪ್ಯೂಟರ್ ಸೈನ್ಸ್ ಟ್ರೆಂಡ್ ಆಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಸುತ್ತಿರುವ ಈ ಕೋರ್ಸ್ ವಿದ್ಯಾರ್ಥಿಗಳ ಫೇವರಿಟ್ ಆಗಿ ಹೊರಹೊಮ್ಮಿದೆ.
ಸಿವಿಲ್, ಮೆಕ್ಯಾನಿಕಲ್ ಕೋರ್ಸ್‌ಗಳಿಗೆ ಇದ್ದ ಟ್ರೆಂಡ್ ಇತ್ತೀಚೆಗಿನ ದಿನಗಳಲ್ಲಿ ಕಡಿಮೆಯಾಗುತ್ತಿದೆ. ತಂತ್ರಜ್ಞಾನ ಆಧಾರಿತ ಕಂಪ್ಯೂಟರ್ ಸೈನ್ಸ್ ಕೋರ್ಸ್‌ಗೆ ಹೆಚ್ಚಿನ ಒಲವು ವ್ಯಕ್ತವಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ ಸಿಇಟಿ-2021 ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಮಂಗಳವಾರ ಮುಗಿದಿದ್ದು ಮೊದಲ ಸುತ್ತಿನಲ್ಲಿ 60 ಸಾವಿರ ಸೀಟುಗಳ ಪೈಕಿ 10 ಸಾವಿರ ಸೀಟುಗಳು ಹಂಚಿಕೆಯಾಗಿವೆ. ಈ ಪೈಕಿ ಮೊದಲ ಆದ್ಯತೆ ಕಂಪ್ಯೂಟರ್ ಸೈನ್ಸ್ ಇದ್ದರೆ, ಅನಂತರದ ಸ್ಥಾನದಲ್ಲಿ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ಸ್ ಆ್ಯಂಡ್ ಕಮ್ಯುನಿಕೇಶನ್, ಎಲೆಕ್ಟ್ರಿಕಲ್ಸ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಕೋರ್ಸ್‌ಗಳಿವೆ.
ಕಂಪ್ಯೂಟರ್ ಸೈನ್ಸ್ ಕೋರ್ಸ್‌ನಲ್ಲಿ ಒಟ್ಟಾರೆ 12,735 ಸೀಟುಗಳಿದ್ದು, ಈ ಪೈಕಿ 2,635 ಮಂದಿ ಮೊದಲ ಆಯ್ಕೆಯಾಗಿ ಪರಿಗಣಿಸಿದ್ದಾರೆ. ಅನಂತರದ ಸ್ಥಾನದಲ್ಲಿ ಸಿವಿಲ್ ಕೋರ್ಸ್ ಆಯ್ಕೆ ಮಾಡಿಕೊಂಡಿದ್ದಾರೆ. 6355 ಸೀಟುಗಳ ಪೈಕಿ 2,335 ಮಂದಿ ಇದನ್ನು ಆಯ್ಕೆ ಮಾಡಿದ್ದಾರೆ.
ಇದನ್ನೂ ಓದಿ:ಶಶಿಕಲಾ ಜೊಲ್ಲೆ ಅವರಿಗೆ ಜಿರೋ ಟ್ರಾಫಿಕ್:ಅರ್ಜಿ ವಜಾ.
ಕಂಪ್ಯೂಟರ್ ಸೈನ್ಸೇ ಏಕೆ?
ಇತ್ತೀಚೆಗಿನ ವರ್ಷಗಳಲ್ಲಿ ಆಧುನಿಕ ತಂತ್ರಜ್ಞಾನ ಆಧಾರಿತ ಕೋರ್ಸ್‌ಗಳಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗುತ್ತಿವೆ. ವಿದೇಶಿ ಕಂಪೆನಿಗಳಲ್ಲಿಯೂ ಈ ಕೋರ್ಸ್ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳಿಗೇ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಆದ್ದರಿಂದ ಕಂಪ್ಯೂಟರ್ ಸೈನ್ಸ್ ಆಯ್ಕೆ ಮಾಡಿಕೊಂಡಿದ್ದೇನೆ ಎಂದು ಮೊದಲ ಸುತ್ತಿನಲ್ಲಿ ಸೀಟು ಆಯ್ಕೆ ಮಾಡಿಕೊಂಡ ಅಭ್ಯರ್ಥಿ ಶಶಾಂಕ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಕನಿಷ್ಠ ಒಂದು ದಶಕ ಇದೇ ಹವಾ
ಕೇವಲ ಈ ವರ್ಷ ಮಾತ್ರವಲ್ಲ, ಕನಿಷ್ಠ ಮುಂದಿನ ಹತ್ತು ವರ್ಷ ಕಂಪ್ಯೂಟರ್ ಸೈನ್ಸ್ ಟ್ರೆಂಡ್ ಮುಂದುವರಿಯಲಿದೆ. ದಿನದಿಂದ ದಿನಕ್ಕೆ ತಂತ್ರಜ್ಞಾನ ಶರವೇಗದಲ್ಲಿ ಮುಂದುವರಿಯುತ್ತಿದೆ. ಕಾಲೇಜು ಕ್ಯಾಂಪಸ್‌ಗಳಲ್ಲಿಯೇ ಪ್ಲೇಸ್‌ಮೆಂಟ್ ಸಿಗುತ್ತಿರುವುದ ರಿಂದ ವಿದ್ಯಾರ್ಥಿಗಳು ಕೂಡ ಆಸಕ್ತರಾಗಿದ್ದಾರೆ ಎನ್ನುತ್ತಾರೆ ಪಿಇಎಸ್ ವಿಶ್ವವಿದ್ಯಾನಿಲಯ ಕುಲಾಧಿಪತಿ ಪ್ರೊ| ಎಂ.ಆರ್. ದೊರೆಸ್ವಾಮಿ.
ಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ ಹೆಚ್ಚಿನವರು ಕಂಪ್ಯೂಟರ್ ಸೈನ್ಸ್ ಕೋರ್ಸ್ ಅನ್ನು ಆಯ್ಕೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳ ಎರಡನೇ ಆಯ್ಕೆಯಾಗಿ ಸಿವಿಲ್ ಎಂಜಿನಿಯರಿಂಗ್ ಕೋರ್ಸ್ ಹೊರಹೊಮ್ಮಿದೆ.
– ರಮ್ಯಾ, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ
– ಎನ್.ಎಲ್. ಶಿವಮಾದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.