ಯಾವ ಪುರುಷಾರ್ಥಕ್ಕೆ ರಸ್ತೆಗೆ ತಡೆಗೋಡೆ- ಇದರಿಂದ ಅರಣ್ಯ ಇಲಾಖೆ ಸಾಧಿಸುವುದಾದರೂ ಏನು?

Team Udayavani, Dec 8, 2021, 12:46 PM IST

ಯಾವ ಪುರುಷಾರ್ಥಕ್ಕೆ ರಸ್ತೆಗೆ ತಡೆಗೋಡೆ- ಇದರಿಂದ ಅರಣ್ಯ ಇಲಾಖೆ ಸಾಧಿಸುವುದಾದರೂ ಏನು?

ದಾಂಡೇಲಿ: ತಾವು ಮಾಡಿದ್ದೆ ಸರಿ ಎಂಬಂತೆ ಸರ್ವಾಧಿಕಾರಿ ಧೋರಣೆಯ ಮೂಲಕ  ಹಳೆದಾಂಡೇಲಿ ಭಾಗದ ಜನತೆಯ ನಿದ್ದೆಗೆಡಿಸಿದ ಅರಣ್ಯ ಇಲಾಖೆ ಯಾವ ಪುರುಷಾರ್ಥಕ್ಕಾಗಿ ರಸ್ತೆಗೆ ತಡೆಗೋಡೆ ನಿರ್ಮಿಸಿತು ಎನ್ನುವುದೇ ಯಕ್ಷಪ್ರಶ್ನೆ.

ಅರಣ್ಯ ಇಲಾಖೆಯವರು ಅವರು ಸಹ  ಎಲ್ಲರಂತೆ ಮನುಷ್ಯರು ಎನ್ನುವುದನ್ನು ತಿಳಿದು ಕೊಳ್ಳಬೇಕಾಗಿದೆ. ಅದು ಬಿಟ್ಟು ಶತಮಾನಗಳಿಂದ ಸ್ಥಳೀಯ ಜನರ ದೈನಂದಿನ ಬದುಕಿನ ಜೊತೆಗೆ ನಂಟನ್ನು ಹೊಂದಿರುವ ಹಳೆ ದಾಂಡೇಲಿಯ ಸ್ವಾಮಿಲ್ ಹತ್ತಿರದ ರಸ್ತೆಗೆ ಏಕಾಏಕಿ ತಡೆಗೋಡೆ ನಿರ್ಮಿಸಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಬೇಕಾದ ಸ್ಥಿತಿ ಯಾಕೆ ಬೇಕಿತ್ತು.

ಅರಣ್ಯ ಇಲಾಖೆಯವರ ಪ್ರತಿಯೊಂದು ಕಾರ್ಯಕ್ರಮಗಳಿಗೆ ಇದೇ ಜನ ಬೇಕಲ್ಲವೆ, ವನ್ಯಜೀವಿ ಸಪ್ತಾಹದ ಮೆರವಣಿಗೆಗೂ ಇದೇ ಜನ ಬೇಕಲ್ಲವೆ, ಜನವಸತಿ ಪ್ರದೇಶಕ್ಕೆ ಬರುವ ವನ್ಯಪ್ರಾಣಿಗಳ ಬಗ್ಗೆ ತಕ್ಷಣ ಮಾಹಿತಿ ನೀಡಿ ಅವುಗಳ ರಕ್ಷಣೆಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಎಂಬಂತೆ ಸಹಕಾರಿಯಾಗಲು ಇದೇ ಜನ ಬೇಕಲ್ಲವೆ. ಇವೆಲ್ಲವುಗಳನ್ನು ಅರಣ್ಯ ಇಲಾಖೆಯವರು ಮರೆತರೇ?. ಹೀಗೆ ನೂರೆಂಟು ಪ್ರಶ್ನೆಗಳು ಅರಣ್ಯ ಇಲಾಖೆಯವರ ಮೇಲಿದೆ.

ಇದೇ ರಸ್ತೆಯಲ್ಲಿರುವ ನಿವಾಸಿಗಳ ಯಾರ್ದಾದರೂ ಮನೆಯೊಂದರಲ್ಲಿ ಯಾರಿಗಾದರೂ ಹೆರಿಗೆ ನೋವು ಸಂಭವಿಸಿದರೇ, ತೀವ್ರ ಅನಾರೋಗ್ಯಕ್ಕೆ ತುತ್ತಾದರೇ ತಕ್ಷಣಕ್ಕೆ ಆಸ್ಪತ್ರೆಗೆ ಎತ್ತಿಕೊಂಡು ಹೋಗಬೇಕಾದ ಸ್ಥಿತಿ ತಂದಿಟ್ಟರಲ್ವಾ.?. ಒಂದು ವೇಳೆ ಇದೇ ರಸ್ತೆಯಲ್ಲಿ ಅರಣ್ಯ ಅಧಿಕಾರಿಗಳ ಸ್ವಂತ ಮನೆಯಿರುತ್ತಿದ್ದರೇ ತಡೆಗೋಡೆ ನಿರ್ಮಿಸುತ್ತಿದ್ದರೇ ಹೀಗೆಲ್ಲ ಪ್ರಶ್ನೆಗಳು ಅರಣ್ಯ ಇಲಾಖೆಯವರ ಮೇಲಿದೆ.

ಮೇಲಾಧಿಕಾರಿಗಳ ಆದೇಶವಿರಬಹುದು. ಅದು ಏನೇ ಇದ್ದರೂ ಸ್ಥಳೀಯ ಜನತೆ ವಿಶ್ವಾಸಗಳಿಸಿಕೊಂಡು,ಸ್ಥಳೀಯ ಜನತೆಯ ಬದುಕಿಗೆ ಅಡ್ಡಿಯಾಗದೆ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಲು ಅಸಾದ್ಯವಾದಾಗ ಈ ರೀತಿಯ ಸಮಸ್ಯೆಗಳು ಉದ್ಭವವಾಗಲು ಸಾಧ್ಯ. ಸ್ಥಳೀಯವಾಗಿ ಇರುವ ವಾಸ್ತವ ಸ್ಥಿತಿಯನ್ನು ಮೇಲಾಧಿಕಾರಿಗಳ ಗಮನಕ್ಕೆ ಮೊದಲೆ ತರುತ್ತಿದ್ದಲ್ಲಿ ಹೀಗಾಗುತ್ತಿತ್ತೆ ಎಂಬ ಪ್ರಶ್ನೆ ಸ್ಥಳೀಯ ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.