ಹೆಲಿಕಾಪ್ಟರ್ ದುರಂತ: ಸಾವಿನ ಸಂಖ್ಯೆ 13ಕ್ಕೇರಿಕೆ; DNA ಪರೀಕ್ಷೆ ಮೂಲಕ ದೇಹಗಳ ಗುರುತು ಪತ್ತೆ
Team Udayavani, Dec 8, 2021, 5:09 PM IST
ಚೆನ್ನೈ: ತಮಿಳುನಾಡಿನ ಕೂನುರು ಸಮೀಪ ಪತನಕ್ಕೀಡಾದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 13ಕ್ಕೇರಿದೆ. ದೇಶದ ಮೂರು ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನಕ್ಕೀಡಾಗಿದ್ದು, ಬಿಪಿನ್ ರಾವತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ.
ಬಿಪಿನ್ ರಾವತ್, ಅವರ ಪತ್ನಿ ಹಾಗೂ ಇತರ 12 ಮಂದಿ ಸೇನಾ ಅಧಿಕಾರಿಗಳು ಭಾರತೀಯ ವಾಯುಸೇನೆಯ MI-17 V5 ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದರು. ಅವರು ವೆಲ್ಲಿಂಗ್ಟನ್ ನ ಸೇನಾ ಕಾಲೇಜಿಗೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ.
ಇದನ್ನೂ ಓದಿ:2015 ರಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಪಾರಾಗಿದ್ದ ಬಿಪಿನ್ ರಾವತ್
ತಮಿಳುನಾಡಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಭಾಗಿಯಾಗಿದ್ದ 14 ಮಂದಿಯಲ್ಲಿ 13 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಡಿಎನ್‌ಎ ಪರೀಕ್ಷೆಯ ಮೂಲಕ ಮೃತದೇಹಗಳ ಗುರುತು ಪತ್ತೆ ಮಾಡಬೇಕಾಗಿದೆ ಎಂದು ಎಎನ್ ಐ ಸುದ್ದಿ ಮಾಡಿದೆ.
13 of the 14 personnel involved in the military chopper crash in Tamil Nadu have been confirmed dead. Identities of the bodies to be confirmed through DNA testing: Sources
— ANI (@ANI) December 8, 2021
ಅಪಘಾತದ ಕಾರಣ ತಿಳಿಯಲು ತನಿಖೆಗೆ ಆದೇಶ ನೀಡುರುವುದಾಗಿ ಭಾರತೀಯ ವಾಯುಸೇನೆ ಟ್ವಿಟ್ಟರ್ ನಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.