“ವಿಶ್ವ ಕುಟುಂಬಿ ಬದುಕು ಮನುಕುಲದ ಸಂಕಲ್ಪವಾಗಲಿ’

ಎಲ್ಲರಲ್ಲಿ ಅಂತರಂಗದ ಕತ್ತಲೆ ನಿವಾರಿಸಿ ಅರಿವಿನ ಬೆಳಗನ್ನು ಮೂಡಿಸಲಿ

Team Udayavani, Dec 8, 2021, 2:22 PM IST

“ವಿಶ್ವ ಕುಟುಂಬಿ ಬದುಕು ಮನುಕುಲದ ಸಂಕಲ್ಪವಾಗಲಿ’

ಧಾರವಾಡ: ಶ್ರೇಣೀಕೃತ ಸಮಾಜ ವ್ಯವಸ್ಥೆಯ ಎಲ್ಲ ದ್ವಂದ್ವ-ವೈರುಧ್ಯಗಳನ್ನು ಮರೆತು ಸಹೋದರ ಪ್ರೀತಿಯ ವಿಶ್ವ ಕುಟುಂಬಿ ಬದುಕು ಮನುಕುಲದ ಸಂಕಲ್ಪವಾಗಲಿ ಎಂದು ಉಪ್ಪಿನಬೆಟಗೇರಿ ಮೂರುಸಾವಿರ ವಿರಕ್ತಮಠದ ಶ್ರೀಕುಮಾರ ವಿರೂಪಾಕ್ಷ ಸ್ವಾಮೀಜಿ ಹೇಳಿದರು.

ತಿಮ್ಮಾಪುರದ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದ ಕಾರ್ತಿಕ ದೀಪೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಬದುಕಿನ ತಾಪತ್ರಯಗಳನ್ನು ಅಳಿದು ಭಕ್ತಿಯ ಬದ್ಧತೆಯಿಂದ ಭಗವತ್‌ ಸಾನ್ನಿಧ್ಯದಲ್ಲಿ ಲಕ್ಷ್ಯವಹಿಸುವುದೇ ಲಕ್ಷ ದೀಪೋತ್ಸವವಾಗಿದೆ ಎಂದರು.

ಸಾನ್ನಿಧ್ಯ ವಹಿಸಿದ್ದ ಅಮ್ಮಿನಬಾವಿ ಪಂಚಗೃಹ ಹಿರೇಮಠದ ಕಿರಿಯ ಶ್ರೀ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸ್ವಾರ್ಥದ ಬದುಕಿನ ದ್ವೇಷ-ಅಸೂಯೆಗಳನ್ನು ಮರೆತು ಪರಸ್ಪರ ಪ್ರೀತಿ, ವಿಶ್ವಾಸ, ಭಾವೈಕ್ಯದ ಸ್ನೇಹ ಭಾವ ಹೊಂದುವ ಜೀವನ ವಿಧಾನವೇ ಎಲ್ಲಾ ಧರ್ಮ ಸಿದ್ಧಾಂತಗಳ ಮೂಲ ಆಶಯವಾಗಿದೆ. ಕಾರ್ತಿಕ ದೀಪೋತ್ಸವ ಎಲ್ಲರಲ್ಲಿ ಅಂತರಂಗದ ಕತ್ತಲೆ ನಿವಾರಿಸಿ ಅರಿವಿನ ಬೆಳಗನ್ನು ಮೂಡಿಸಲಿ ಎಂದು ಹೇಳಿದರು.

ನಯಾನಗರದ ಶ್ರೀ ಅಭಿನವ ಸಿದ್ಧಲಿಂಗ ಸ್ವಾಮೀಜಿ, ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ ಹಾಗೂ ಖ್ಯಾತ ಶಸ್ತ್ರಚಿಕಿತ್ಸಕ ಡಾ| ಎಸ್‌.ಆರ್‌. ರಾಮನಗೌಡರ ಮಾತನಾಡಿದರು. ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜ ಹೊಸೂರ, ಮರೇವಾಡ ಗ್ರಾಪಂ ಅಧ್ಯಕ್ಷೆ ನೀಲವ್ವ ವಗ್ಗರ ಅತಿಥಿಯಾಗಿದ್ದರು. ತಿಮ್ಮಾಪೂರ ರುದ್ರಸ್ವಾಮಿಮಠದ ಬಸಯ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.

ಪಟ್ಟಾ ಧಿಕಾರದ ದ್ವಿದಶಮಾನೋತ್ಸವ ನೆನಪಿನಲ್ಲಿ ಉಪ್ಪಿನಬೆಟಗೇರಿಯ ಶ್ರೀಕುಮಾರ ವಿರೂಪಾಕ್ಷ ಸ್ವಾಮೀಜಿ ಅವರನ್ನು, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಎಸ್‌.ಆರ್‌. ರಾಮನಗೌಡರ ಹಾಗೂ ಮಲ್ಲನಗೌಡ ಚಿಕ್ಕನಗೌಡರ ಅವರನ್ನು ಗೌರವಿಸಲಾಯಿತು. ಚಿತ್ರಕಲೆ ಮತ್ತು ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಿಸಲಾಯಿತು. ಬಸನಗೌಡ ಸೋಮನಗೌಡ್ರ, ಲವ-ಕುಶ ಹುಲಗೂರ, ಮಹಾದೇವಗೌಡ ದೊಡ್ಡಗೌಡ್ರ, ಮಂಜುಗೌಡ ಜಟ್ಟಿನಗೌಡ್ರ, ಫಕ್ಕೀರಪ್ಪ ಜಾಲಗಾರ, ಅಡೆಮ್ಮಾ ಜಟ್ಟಿನಗೌಡ್ರ ಇತರರು ಇದ್ದರು. ಡಾ| ಗುರುಮೂರ್ತಿ ಯರಗಂಬಳಿಮಠ ವಂದಿಸಿದರು.

ಟಾಪ್ ನ್ಯೂಸ್

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.