ಕನ್ನಡ ಭವನಕ್ಕೆ ಹಾರಕೂಡ ಶ್ರೀಗಳ ಭೇಟಿ
Team Udayavani, Dec 9, 2021, 11:44 AM IST
ಕಲಬುರಗಿ: ನಗರದ ಕನ್ನಡ ಭವನಕ್ಕೆ ಭೇಟಿ ನೀಡಿದ ಹಾರಕೂಡದ ಶ್ರೀ ಡಾ| ಚನ್ನವೀರ ಶಿವಾಚಾರ್ಯ ಮಹಾ ಸ್ವಾಮೀಜಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ಗೆ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರನ್ನು ಸತ್ಕರಿಸಿ, ಆಶೀರ್ವದಿಸಿದರು.
ನಂತರ ಮಾತನಾಡಿದ ಡಾ| ಚನ್ನವೀರ ಶಿವಾಚಾರ್ಯರು, ಯಾವುದೇ ಪಕ್ಷ, ಜಾತಿ, ಧರ್ಮ ಮರೆತು ಎಲ್ಲರನ್ನೂ ಒಗ್ಗೂಡಿಸುವ ಸಾಮರ್ಥ್ಯ ಕನ್ನಡ ಭಾಷೆಗಿದೆ. ಕನ್ನಡ ಸಾಹಿತ್ಯ ಪರಿಷತ್ ನವರು ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳವಣಿಗೆಗೆ ಶ್ರಮಿಸಬೇಕು ಎಂದು ಹಾರೈಸಿದರು.
ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಕನ್ನಡ ನಾಡು-ನುಡಿ, ನೆಲ-ಜಲದ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ ಆಗಿದೆ. ಹೀಗಾಗಿ, ಪರಿಷತ್ ಘನತೆ ಉಳಿಸುವ ಮತ್ತು ಬೆಳೆಸುವ ಕಾರ್ಯವನ್ನು ಸದಾ ಕಾಲ ಮಾಡುತ್ತೇವೆ. ಇದಕ್ಕೆ ಸಾಹಿತಿಗಳು, ಕವಿ-ಕಲಾವಿದರು, ಶಿಕ್ಷಕರ ಸಹಕಾರ ಅಗತ್ಯವಿದೆ ಎಂದರು.
ಗೌರವ ಕಾರ್ಯದರ್ಶಿಗಳಾದ ಸುರೇಶ ಬಡಿಗೇರ, ಶಿವರಾಜ ಅಂಡಗಿ, ಗೌರವ ಕೋಶಾಧ್ಯಕ್ಷ ಡಾ| ಶರಣರಾಜ್ ಛಪ್ಪರಬಂದಿ, ಪ್ರಮುಖರಾದ ಪ್ರಭುಲಿಂಗ ಮೂಲಗೆ, ರವೀಂದ್ರ ಕುಮಾರ ಭಂಟನಳ್ಳಿ, ಜಗದೀಶ ಮರಪಳ್ಳಿ, ರಾಜೇಂದ್ರ ಮಾಡಬೂಳಕರ್, ವಿಶ್ವನಾಥ ತೊಟ್ನಳ್ಳಿ, ಬಸವರಜ ತೋಟದ, ವಿನೋದ ಜೇನವೇರಿ, ಎಂ.ಎಸ್.ಪಾಟೀಲ ನರಿಬೋಳ, ಡಾ| ಬಾಬುರಾವ ಶೇರಿಕಾರ, ಮಂಜುನಾಥ ಕಂಬಾಳಿಮಠ, ಸಂತೋಷ ಕುಡಳ್ಳಿ, ಧರ್ಮಣ್ಣ ಧನ್ನಿ, ವಿದ್ಯಾಸಾಗರ ದೇಶಮುಖ, ಈರಣ್ಣಾ ನಾವಿ, ಹೆಚ್. ಎಸ್.ಬರಗಾಲಿ, ಬಿ.ಎಂ.ಪಾಟೀಲ ಕಲ್ಲೂರ, ಶ್ರೀಕಾಂತ ಪಾಟೀಲ ತಿಳಗೂಳ, ನಾಗೇಂದ್ರಪ್ಪ ಮಾಡ್ಯಾಳೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.