ಶಸ್ತ್ರಾಸ್ತ್ರ ತಯಾರಿಕೆಯಲ್ಲಿ ಆತ್ಮನಿರ್ಭರ್ ಆಗಬೇಕೆಂಬ ಬಿಪಿನ್ ರಾವತ್ ಹಂಬಲಿಸಿದ್ದರು: ಸಿಎಂ
Team Udayavani, Dec 9, 2021, 12:14 PM IST
ಬೆಂಗಳೂರು: ಭಾರತ ಶಸ್ತ್ರಾಸ್ತ್ರ ತಯಾರಿಕೆಯಲ್ಲಿ ಆತ್ಮನಿರ್ಭರ್ ಆಗಬೇಕೆಂಬ ಹಂಬಲವಿದ್ದ ಬಿಪಿನ್ ರಾವತ್ ಅವರು ಸ್ಥಳೀಯವಾಗಿ ರಕ್ಷಣಾ ಉಪಕರಣಗಳ ತಯಾರಿಕೆಯನ್ನು ಪ್ರಾರಂಭಿಸಿದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಆರ್ ಡಿಓ ಹಾಗೂ ಹಲವಾರು ಸಂಸ್ಥೆಗಳು ಉತ್ತಮವಾಗಿ ಕಾರ್ಯನಿರ್ವಹಿಸುವಲ್ಲಿ ಅವರ ಪ್ರೇರಣೆಯೂ ಇದೆ. ಹೊಸ ಆವಿಷ್ಕಾರ, ಉಪಕರಣಗಳನ್ನು ತಯಾರು ಮಾಡಿ ಸೇನೆಗಳಿಗೆ ಸರಬರಾಜು ಮಾಡುವುದಷ್ಟೇ ಅಲ್ಲ, ಖಾಸಗಿ ವಲಯದಲ್ಲಿಯೂ ಉತ್ಪಾದನೆ ಮಾಡಲು ಜ್ಞಾನವನ್ನು ವರ್ಗಾಯಿಸಿ ಬಹಳ ಪ್ರೋತ್ಸಾಹ ನೀಡಿದ್ದರು ಎಂದರು.
ಹೊಸ ವಿಧಾನಗಳ ಅನುಷ್ಠಾನ: ಮೂರು ಪಡೆಯ ಮುಖ್ಯಸ್ಥರಾದ ಬಿಪಿನ್ ರಾವತ್ ಅವರ ದುರ್ಮರಣದಿಂದ ಇಡೀ ದೇಶವೇ ದಿಗ್ಭ್ರಮೆಗೆ ಒಳಗಾಗಿದೆ. ಘಟನೆ ಹೇಗಾಯ್ತು ಎನ್ನುವುದು ಮುಖ್ಯವಾಗಿರುವುದರಿಂದ ವಾಯುಪಡೆ ತನಿಖೆಯನ್ನು ಕೈಗೊಂಡಿದೆ. ರಾವತ್ ಅವರು ಸೈನ್ಯವನ್ನು ಮುಂಚೂಣಿಯಲ್ಲಿ ನಿಂತು ಮುನ್ನಡೆಸಿದರು. ಯುದ್ಧಭೂಮಿಯಲ್ಲಿ ಹೊಸ ವಿಧಾನಗಳನ್ನು ಕಂಡುಕೊಂಡು ಅನುಷ್ಠಾನವನ್ನೂ ಮಾಡಿದರು ಎಂದು ಸ್ಮರಿಸಿದರು.
ಇದನ್ನೂ ಓದಿ:ವಿಡಿಯೋ: ಜನರಲ್ ಬಿಪಿನ್ ರಾವತ್ ಹೆಲಿಕಾಪ್ಟರ್ ಪತನದ ಕೊನೆಯ ಕ್ಷಣದ ದೃಶ್ಯ
ದಿಟ್ಟ ನಿಲುವು: ಭಾರತದ ಸುರಕ್ಷತೆಯ ಬಗ್ಗೆ ಹಿಂದೆಂದೂ ತೆಗೆದುಕೊಂಡಿರದ ಹಲವಾರು ದಿಟ್ಟ ನಿಲುವನ್ನು ಪ್ರದರ್ಶಿಸಿದ್ದ ಅವರು ಚೀನಾ, ಭಾರತದ ಗಡಿಯಲ್ಲಿ ನಡೆದ ಚಕಮಕಿಯಲ್ಲಿ ದೇಶವನ್ನು ಬಹಳ ಗಟ್ಟಿಯಾಗಿ ನಿಲ್ಲಿಸಿ, ಚೀನಾವನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾದರು. ಅವರ ನಾಯಕತ್ವ ಮುಂದಿನ ದಿನಗಳಲ್ಲಿ ನಮಗೆ ಬಹಳ ಅವಶ್ಯಕವಾಗಿತ್ತು ಎಂದರು.
ಜೀವನ ಚರಿತ್ರೆ ಪ್ರೇರಣಾದಾಯಕ: ಅವರ ಸೇವೆಯನ್ನು ಗುರುತಿಸಿಯೇ ನಮ್ಮ ಪ್ರಧಾನ ಮಂತ್ರಿಗಳು ಅವರನ್ನು ಸೇನಾ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಿದ್ದರು. ಇಡೀ ಭಾರತ ಒಬ್ಬ ನಾಯಕನನ್ನು ಕಳೆದುಕೊಂಡಿದೆ. ನಮ್ಮೆಲ್ಲರಿಗೂ ಅವರ ಜೀವನ ಚರಿತ್ರೆ ಪ್ರೇರಣಾದಾಯಕವಾಗಿದೆ. ಅವರ ತ್ಯಾಗ ಬಲಿದಾನಗಳ ಬಗ್ಗೆ ಮಕ್ಕಳಿಗೆ ತಿಳಿಸುವಂತಾಗಬೇಕು. ಮುಂದಿನ ಪೀಳಿಗೆ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಅವರ ಕಾರ್ಯಕ್ರಮಗಳನ್ನು ಮುಂದುವರೆಸಿ ನಿಜವಾದ ಶ್ರದ್ದಾಂಜಲಿಯನ್ನು ಸಲ್ಲಿಸಬೇಕು ಎಂದರು.
ಕರ್ನಾಟಕದೊಂದಿಗೆ ಸಂಬಂಧ: ಕರ್ನಾಟಕದೊಂದಿಗೆ ಅವರು ಅವಿನಾಭಾವ ಸಂಬಂಧ ಹೊಂದಿದ್ದರು. ಕೊಡಗಿನೊಂದಿಗೆ ವಿಶೇಷ ಸಂಬಂಧ ಅವರಿಗಿತ್ತು. ಜನರಲ್ ಕಾರಿಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ಬಗ್ಗೆ ಅಪಾರ ಗೌರವವಿತ್ತು. ಅವರ ಶೌರ್ಯವನ್ನು ಪದೇ ಪದೇ ಹೇಳುತ್ತಿದ್ದರು. ಇಲ್ಲಿನ ಜನರು ಹಾಗೂ ಸೈನಿಕರ ಬಗ್ಗೆ ಪ್ರೀತಿಯನ್ನು ಹೊಂದಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.