ಪರಿಷತ್ ಚುನಾವಣೆ : ನಾಳೆ 228 ಮತಗಟೆಗಳಲ್ಲಿ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ನಡೆಯಲಿದೆ ಮತದಾನ
Team Udayavani, Dec 9, 2021, 12:34 PM IST
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆ-2021ರ ಪ್ರಯುಕ್ತ ಒಟ್ಟು 228 ಮತಗಟ್ಟೆಗಳನ್ನು ತೆರೆಯಲಾಗಿದೆ. ಡಿ.10 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿ ಕೆ.ಶ್ರೀನಿವಾಸ್ ಹೇಳಿದರು.
ಹೊಸಕೋಟೆ ತಾಲೂಕಿನಲ್ಲಿ 29 ಮತಗಟ್ಟೆ, ದೇವನಹಳ್ಳಿ ತಾಲೂಕಿನಲ್ಲಿ 24 ಮತಗಟ್ಟೆ, ದೊಡ್ಡಬಳ್ಳಾಪುರ ತಾಲೂಕಿನಲ್ಲಿ 28 ಮತಗಟ್ಟೆ ಹಾಗೂ ನೆಲಮಂಗಲ ತಾಲೂಕಿನಲ್ಲಿ 21 ಮತಗಟ್ಟೆ
ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 102 ಮತಗಟ್ಟೆಗಳಲ್ಲಿ ಮತದಾನದ ದಿನದಂದು ಕಾರ್ಯನಿರ್ವಹಿಸಲು 116 ಪಿಆರ್‌ಒಗಳು, 116 ಪಿಒಗಳು, 102 ಎಂಒಗಳು, 102 ವಿಡಿಯೋ ಗ್ರಾಫರ್ ಗಳನ್ನು ನಿಯೋಜಿಸಲಾಗಿದೆ ಎಂದರು.
ರಾಮನಗರ ಜಿಲ್ಲೆಯಲ್ಲಿ ಒಟ್ಟು 126 ಮತಗಟ್ಟೆ:
ಮಾಗಡಿ ತಾಲೂಕಿನಲ್ಲಿ 33 ಮತಗಟ್ಟೆ, ರಾಮನಗರ ತಾಲೂಕಿನಲ್ಲಿ 21 ಮತಗಟ್ಟೆ, ಕನಕಪುರ ತಾಲೂಕಿನಲ್ಲಿ 39 ಮತಗಟ್ಟೆ ಹಾಗೂ ಚನ್ನಪಟ್ಟಣ ತಾಲೂಕಿನಲ್ಲಿ 33 ಮತಗಟ್ಟೆ ಸೇರಿದಂತೆ ರಾಮನಗರ ಜಿಲ್ಲೆಯಲ್ಲಿ ಒಟ್ಟು 126 ಮತಗಟ್ಟೆಗಳಲ್ಲಿ ಮತದಾನದ ದಿನದಂದು ಕಾರ್ಯನಿರ್ವಹಿಸಲು 145 ಪಿ.ಆರ್.ಓ.ಗಳು, 145 ಪಿ.ಓ.ಗಳು, 126 ಎಂ.ಓ.ಗಳು, 126 ವಿಡಿಯೋ ಗ್ರಾಫರ್‌ಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.
ಒಟ್ಟಾರೆ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಗಾಗಿ ತೆರೆಯಲಾದ ಒಟ್ಟು 228 ಮತಗಟ್ಟೆಗಳಲ್ಲಿ 264 ಪಿ.ಆರ್.ಓ.ಗಳು, 264 ಪಿ.ಓ.ಗಳು, 228 ಎಂ.ಓ.ಗಳು, 228 ವಿಡಿಯೋ ಗ್ರಾಫರ್‌ಗಳನ್ನು ನಿಯೋಜಿಸಲಾಗಿದೆ.
ಇದನ್ನೂ ಓದಿ : ಜರ್ಮನಿಯಿಂದ ಬೆಂಗಳೂರಿಗೆ ಬಂದ ಕೋವಿಡ್ ಸೋಂಕಿತ ಪರಾರಿ : ಸೋಂಕಿತ ನಾಪತ್ತೆಯಿಂದ ಆತಂಕ ಸೃಷ್ಟಿ
ಮತದಾರರ ವಿವರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 902 ಪುರುಷ ಮತದಾರರು, 962 ಮಹಿಳಾ ಮತದಾರರು ಸೇರಿದಂತೆ ಒಟ್ಟು 1864 ಮತದಾರರಿದ್ದು, ಈ ಪೈಕಿ, ದೊಡ್ಡಬಳ್ಳಾಪುರ
ತಾಲೂಕಿನಲ್ಲಿ 250 ಪುರುಷ ಮತದಾರರು, 265 ಮಹಿಳಾ ಮತದಾರರು ಸೇರಿದಂತೆ ಒಟ್ಟು 515 ಮತದಾರರಿದ್ದಾರೆ. ದೇವನಹಳ್ಳಿ ತಾಲೂಕಿನಲ್ಲಿ 194 ಪುರುಷ ಮತದಾರರು, 202 ಮಹಿಳಾ ಮತದಾರರು ಸೇರಿ ದಂತೆ ಒಟ್ಟು 396 ಮತದಾರರಿದ್ದಾರೆ. ಹೊಸಕೋಟೆ ತಾಲೂಕಿನಲ್ಲಿ 282 ಪುರುಷ ಮತದಾರರು, 300 ಮಹಿಳಾ ಮತದಾರರು ಸೇರಿದಂತೆ ಒಟ್ಟು 582 ಮತದಾರರಿದ್ದಾರೆ. ನೆಲಮಂಗಲ ತಾಲೂಕಿನಲ್ಲಿ 176 ಪುರುಷ ಮತದಾರರು, 195 ಮಹಿಳಾ ಮತದಾರರು ಸೇರಿದಂತೆ ಒಟ್ಟು 371 ಮತದಾರರಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ 960 ಪುರುಷ ಮತದಾರರು, 1099 ಮಹಿಳಾ ಮತದಾರರು ಸೇರಿದಂತೆ ಒಟ್ಟು 2059 ಮತದಾರರಿದ್ದು, ಈ ಪೈಕಿ, ಮಾಗಡಿ ತಾಲೂಕಿನಲ್ಲಿ 221 ಪುರುಷ ಮತದಾರರು,
258 ಮಹಿಳಾ ಮತದಾರರು ಸೇರಿದಂತೆ ಒಟ್ಟು 479 ಮತದಾರರಿದ್ದಾರೆ. ಚನ್ನಪಟ್ಟಣ ತಾಲೂಕಿನಲ್ಲಿ 233 ಪುರುಷ ಮತದಾರರು, 280 ಮಹಿಳಾ ಮತದಾರರು ಸೇರಿದಂತೆ ಒಟ್ಟು 513 ಮತದಾರರಿದ್ದಾರೆ. ರಾಮನಗರ ತಾಲೂಕಿನಲ್ಲಿ 181 ಪುರುಷ ಮತದಾರರು, 209 ಮಹಿಳಾ ಮತದಾರರು ಸೇರಿದಂತೆ ಒಟ್ಟು 390 ಮತದಾರರಿದ್ದಾರೆ. ಕನಕಪುರ ತಾಲೂಕಿನಲ್ಲಿ 325 ಪುರುಷ ಮತದಾರರು, 352 ಮಹಿಳಾ ಮತದಾರರು ಸೇರಿದಂತೆ ಒಟ್ಟು 677 ಮತದಾರರಿದ್ದಾರೆ ಎಂದು ಮಾಹಿತಿ ನೀಡಿದರು.
ಒಟ್ಟು 3923 ಮತದಾರರು: ಒಟ್ಟಾರೆ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಯಲ್ಲಿ 1862 ಪುರುಷ ಮತದಾರರು, 2061 ಮಹಿಳಾ ಮತದಾರರು ಸೇರಿದಂತೆ ಒಟ್ಟು 3923 ಮತದಾರರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.