ರೈತರನ್ನು ಸಾಲಮುಕ್ತಗೊಳಿಸಲು ಆಗ್ರಹ
Team Udayavani, Dec 9, 2021, 2:28 PM IST
ಶಿವಮೊಗ್ಗ: ರೈತರನ್ನು ಸಾಲದಿಂದ ಮುಕ್ತಗೊಳಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಕಿಸಾನ್ ಸಂಘದಿಂದ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿಗೆಮನವಿ ಸಲ್ಲಿಸಲಾಯಿತು.ರಾಜ್ಯದಲ್ಲಿ 3.5 ಕೋಟಿ ರೈತರು ಕೃಷಿಯನ್ನೇ ನಂಬಿ ಬದುಕುತಿದ್ದಾರೆ.
ಉತ್ಪಾದನಾ ವೆಚ್ಚ ಅತಿಯಾಗಿದ್ದು, ವೈಜ್ಞಾನಿಕಬೆಲೆ ಸಿಗದೇ ಸಂಕಷ್ಟದಲ್ಲಿದ್ದಾರೆ. ಸರ್ಕಾರ ತಕ್ಷಣವೇ ಬೆಂಬಲಬೆಲೆಯನ್ನು ನೀಡಬೇಕು. ರೈತರ ಎಲ್ಲಾ ಸಾಲಗಳನ್ನು ಮನ್ನಾಮಾಡಬೇಕು. ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಬೆಳೆವಿಮೆ ಸರಿಯಾದ ರೀತಿಯಲ್ಲಿ ಅನುಷ್ಠಾನಗೊಳ್ಳಬೇಕು.
ಬೀಜ,ಗೊಬ್ಬರ, ಯಂತ್ರಗಳ ಖರೀದಿಗೆ ಸಹಾಯಧನ ನೀಡಬೇಕು.ವೈಜ್ಞಾನಿಕ ಬೆಲೆ ನಿಗದಿ ಮಾಡಿ ಖರೀದಿ ಕೇಂದ್ರಗಳನ್ನುಸ್ಥಾಪಿಸಬೇಕು. 60 ವರ್ಷ ವಯಸ್ಸಾದ ಎಲ್ಲಾ ರೈತರಿಗೂ ಕೃಷಿನಿವೃತ್ತಿ ವೇತನ ನೀಡಬೇಕು. ರೈತರ ಮಕ್ಕಳಿಗೆ ಉಚಿತ ಶಿಕ್ಷಣನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ರಾಷ್ಟ್ರೀಯ ಕಿಸಾನ್ ಸಂಘದ ರಾಜ್ಯಾಧ್ಯಕ್ಷವಿ. ನಾಗಭೂಷಣ ರೆಡ್ಡಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೊಂಚೆ ಶಿವರುದ್ರಪ್ಪ, ಸಹ ಸಂಚಾಲಕಿ ಎಸ್.ವಿ. ರಾಜಮ್ಮ, ಪ್ರಮುಖರಾದಲತಾ, ಜಯಮ್ಮ, ನಾರಾಯಣ ಗೌಡ, ಹೊನ್ನಮ್ಮ, ಚಂದ್ರು,ಶ್ರುತಿ, ರಾಜು, ಬೇಬಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.