ಒಲಿಂಪಿಕ್ಸ್ ಬಹಿಷ್ಕಾರ: ಈಗ ಕೆನಡಾ ಸರದಿ
Team Udayavani, Dec 9, 2021, 11:00 PM IST
ಟೊರಾಂಟೊ: ಬೀಜಿಂಗ್ನಲ್ಲಿ ನಡೆಯಲಿರುವ ಮುಂದಿನ ವರ್ಷದ ಚಳಿಗಾಲದ ಒಲಿಂಪಿಕ್ಸ್ಗೆ “ರಾಜತಾಂತ್ರಿಕ ಬಹಿಷ್ಕಾರ’ ಹಾಕುವ ರಾಷ್ಟ್ರಗಳ ಸಾಲಿಗೆ ಈಗ ಕೆನಡಾ ಕೂಡ ಸೇರ್ಪಡೆಯಾಗಿದೆ. ಮಾನವ ಹಕ್ಕುಗಳ ದಮನದ ಕಾರಣ ಬಹಿಷ್ಕಾರ ನಿಲುವನ್ನು ಕೈಗೊಳ್ಳುವುದಾಗಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರಾಡೊ ತಿಳಿಸಿದ್ದಾರೆ.
ಚಳಿಗಾಲದ ಒಲಿಂಪಿಕ್ಸ್ ಮುಂದಿನ ವರ್ಷದ ಫೆಬ್ರವರಿ ಚೀನ ರಾಜಧಾನಿಯಲ್ಲಿ ನಡೆಯಲಿದೆ. ಬೀಜಿಂಗ್ ಕೂಟಕ್ಕೆ ರಾಜತಾಂತ್ರಿಕ ಅಧಿಕಾರಿಗಳನ್ನು ಕಳುಹಿಸುವುದಿಲ್ಲ ಎಂದು ಅಮೆರಿಕ, ಇಂಗ್ಲೆಂಡ್, ಆಸ್ಟ್ರೇಲಿಯ ಈಗಾಗಲೇ ಪ್ರಕಟಿಸಿವೆ. ಇದೀಗ ಕೆನಡಾ ಕೂಡ ಇದೇ ಹಾದಿ ಹಿಡಿದಿದೆ. ಇನ್ನೊಂದೆಡೆ “ಬಹಿಷ್ಕಾರ ಕ್ರಮಕ್ಕೆ ತಕ್ಕ ಉತ್ತರ ನೀಡಲಾಗುವುದು’ ಎಂದು ಚೀನ ಕೂಡ ಅಮೆರಿಕ ಬಣದ ರಾಷ್ಟ್ರಗಳಿಗೆ ಎಚ್ಚರಿಸಿದೆ.
“ಚೀನ ಸರಕಾರದಿಂದ ಪದೇಪದೆ ಮಾನವ ಹಕ್ಕುಗಳ ಉಲ್ಲಂಘನೆ ನಡೆಯುತ್ತಿರುವುದರಿಂದ ನಾವು ತೀವ್ರ ಕಳವಳಗೊಂಡಿದ್ದೇವೆ’ ಎಂದು ಕೆನಡಾ ಪ್ರಧಾನಿ ಟ್ರಾಡೊ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.