ಅಪಾಯಕಾರಿ ವಲಯದಲ್ಲಿದೆ ಈ ಸರ್ಕಾರಿ ಶಾಲೆ!

Team Udayavani, Dec 10, 2021, 2:34 PM IST

ಶಾಲೆ ದುರಸ್ಥಿ

ಕುದೂರು: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಂತಾ ಸರ್ಕಾರ ನೂರಾರು ಕೋಟಿ ಹಣ ಮೀಸಲಿಸಿರಿದೆ. ಆದರೆ, ಇಲ್ಲೊಂದು ಶಾಲೆ ಹಲವು ವರ್ಷಗಳಿಂದ ಶಿಥಿಲಾವಸ್ಥೆಯಲ್ಲಿದೆ. ಮಕ್ಕಳು ಶಾಲೆಯಲ್ಲಿ ಪ್ರಾಣ ಭಯದಿಂದಲೇ ಕಲಿಕೆಗೆ ಮುಂದಾಗಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ.

ಒಂದೆಡೆ ಮುರಿದು ಬಿದ್ದ ಛಾವಣಿ, ಮತ್ತೂಂದೆಡೆ ಈಗಲೋ ಆಗಲೋ ಬೀಳುವಂತಿರುವ ಶಾಲಾ ಕಟ್ಟಡ ಇದು ಮಾಗಡಿ ತಾಲೂಕಿನ ಕುದೂರು ಹೋಬಳಿಯ ಕನ್ನಸಂದ್ರ ಕಾಲೋನಿ ಸರ್ಕಾರಿ ಶಾಲೆಯ ದುಸ್ಥಿತಿ. ಸುಮಾರು ವರ್ಷಗಳಿಂದ ಈ ಶಾಲೆಯ ಕಟ್ಟಡದ ಮೇಲ್ಛಾವಣಿ ದುರಸ್ತಿಯಾಗದೇ ಕುಸಿಯುವ ಹಂತ ತಲುಪಿದೆ. ಹಾಗಾಗಿ ಪೋಷಕರು ಆತಂಕದಲ್ಲೇಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ಎಲ್ಲಿ ಯಾವಾಗ ಅನಾಹುತ ಸಂಭವಿಸುವುದೋ ಎಂಬ ಆತಂಕ ಶಿಕ್ಷಕ ವರ್ಗಕ್ಕೂ ಇದೆ.

ಮಳೆ ಬಂದರೇ ಸೋರುವ ಕಟ್ಟಡ: ಕನ್ನಸಂದ್ರ ಕಾಲೋನಿಯ ಸರ್ಕಾರಿ ಶಾಲೆಯಲ್ಲಿ 1 ರಿಂದ 5ನೇ ತರಗತಿವರೆಗೆ ಒಟ್ಟು 21 ವಿದ್ಯಾರ್ಥಿ ಗಳು ವಿದ್ಯಾಭ್ಯಾಸ ಮಾಡುತ್ತಿದ್ದು ಇಬ್ಬರು ಶಿಕ್ಷಕರಿದ್ದಾರೆ. ಮಳೆ ಬಂದರೆ ಒಂದು ಕೊಠಡಿ ಸೋರುವುದು. ಆಗ ಬೇರೆ ಕೊಠಡಿಯಲ್ಲಿ ಒಂದೇ 1 ರಿಂದ 5ನೇ ತರಗತಿಯ ಎಲ್ಲ ಮಕ್ಕಳನ್ನು ಸೇರಿಸಿ ಪಾಠ ಮಾಡಬೇಕಾದ ಅನಿವಾರ್ಯತೆ ಶಿಕ್ಷಕರಿಗಿದೆ.

ಶಿಕ್ಷಣ ಇಲಾಖೆ ಜಡ: ತುರ್ತಾಗಿ ಕಟ್ಟಡ ದುರಸ್ತಿ ಕುರಿತು ಶಾಲೆಯ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಸಲ್ಲಿಸಿದ ವರದಿಗೆ ಸರ್ಕಾರ ಶೀಘ್ರ ಅನುದಾನ ಬಿಡುಗಡೆಗೊಳಿಸಬೇಕಿದೆ. ಕಟ್ಟಡದ ಗೋಡೆ, ಚಾವಣೆ ಸಂಪೂರ್ಣ ಹಾಳಾಗಿದೆ. ವಿದ್ಯುತ್‌ ಸಂಪರ್ಕ ವ್ಯವಸ್ಥೆ ಸರಿಪಡಿಸಬೇಕಿದೆ.

ದುರಸ್ತಿಗೆ ಅಗ್ರಹ: ವಿದ್ಯಾರ್ಥಿಗಳಿಗೆ ಬೇಕಾಗಿರು ವ ಮೂಲ ಸೌಲಭ್ಯ ಸರ್ಕಾರ ಒದಗಿಸಿ ಶಾಲಾ ಅಭಿವೃದ್ಧಿಗೆ ಸಹಕರಿಸಿಬೇಕಿದೆ. ಕನ್ನಸಂದ್ರ ಶಾಲೆ ಪ್ರತಿ ವರ್ಷ 20ಕ್ಕೂ ಅಧಿಕ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲಾ ಅಭಿವೃದ್ಧಿಗೆ ಶಾಸಕ ಎ.ಮಂಜುನಾಥ್‌, ಶಿಕ್ಷಣ ಇಲಾಖೆ ಅಧಿಕಾರಿಗಳು ಗಮನ ಹರಿಸುತ್ತಾರಾ ಕಾದು ನೋಡಬೇಕಿದೆ.

ಇದನ್ನೂ ಓದಿ:- She said YES..! ಆ್ಯಶಸ್ ಪಂದ್ಯದಲ್ಲಿ ಹೀಗೊಂದು ಪ್ರೇಮ ಪ್ರಸಂಗ: ವಿಡಿಯೋ

“ಶಾಲೆಯ ಕೊಠಡಿಗಳ ಸಮಸ್ಯೆ ಕುರಿತಂತೆ ಈಗಾಗಲೇ ಹಲವು ಬಾರಿ ಶಿಕ್ಷಣ ಇಲಾಖೆ ಗಮನಕ್ಕೆ ತಂದಿದ್ದೇವೆ. ಇಲಾಖೆಯಲ್ಲಿ ಅನುದಾನ ಬಿಡುಗಡೆ ಯಾದ ಕೂಡಲೇ ಕೊಠಡಿ ದುರಸ್ತಿಗೊಳಿಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ.” ● ಸ್ವರ್ಣಗೌರಾಂಬಿಕೆ, ಶಿಕ್ಷಕಿ

“ಕನ್ನಸಂದ್ರ ಕಾಲೋನಿಯಲ್ಲಿರುವ ಶಾಲೆ ಕೊಠಡಿ ಹೊಸದಾಗಿ ನಿರ್ಮಿಸಿ. ಇಲ್ಲ ದುರಸ್ತಿಗೊಳಿಸಿ ಎಂದು 2015ರಿಂದಲೂ ಸಂಬಂಧಪಟ್ಟ ಶಿಕ್ಷಣ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನ ಆಗಿಲ್ಲ. ಮಕ್ಕಳಿಗೆ ಏನಾದರೂ ಆದರೆ ಶಿಕ್ಷಣ ಇಲಾಖೆಯೇ ಹೊಣೆ.” ● ರವಿಕುಮಾರ್‌, ಮಾಜಿ ಗ್ರಾಪಂ ಸದಸ್ಯ

– ಕೆ.ಎಸ್‌.ಮಂಜುನಾಥ್‌, ಕುದೂರು

ಟಾಪ್ ನ್ಯೂಸ್

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.