ಶಿಕ್ಷಕರ ನೇಮಕಕ್ಕೆ ಹೈಕೋರ್ಟ್‌ ನಿರ್ದೇಶನ

Team Udayavani, Dec 10, 2021, 2:54 PM IST

school teacher appointment

Representative Image image

ಬೆಂಗಳೂರು: ತುಮಕೂರು ಜಿಲ್ಲೆಯ ತುರುವೇ ಕೆರೆ ತಾಲೂಕಿನ ದಂಡಿನಶಿವರ ಹೋಬಳಿಯಲ್ಲಿ ರುವ ಕರ್ನಾಟಕ ಪಬ್ಲಿಕ್‌ ಶಾಲೆಯ 8, 9 ಹಾಗೂ 10ನೇ ತರಗತಿಗಳಿಗೆ ಶೀಘ್ರ ಇಂಗ್ಲಿಷ್‌ ಶಿಕ್ಷಕರನ್ನು ನೇಮಕ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿನ ನೀಡಿದೆ.

ಈ ವಿಚಾರವಾಗಿ ತುರುವೇಕೆರೆ ತಾಲೂಕಿನ ದುಂಡ ಗ್ರಾಮದ ನಿವಾಸಿ ಡಿ.ಟಿ. ಲಕ್ಷ್ಮೀ ನಾರಾಯಣ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಶಾಲೆಗೆ ಇಂಗ್ಲಿಷ್‌ ಶಿಕ್ಷಕರನ್ನು ನೇಮಕ ಮಾಡುವ ಕರ್ತವ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರದ್ದಾಗಿದೆ.

ಈ ಸಂಬಂಧ ಅರ್ಜಿದಾರರು ಸಲ್ಲಿಸಿರುವ ಮನವಿ ಬಗ್ಗೆ ಈವರೆಗೂ ಯಾವುದೇ ನಿರ್ಧಾರವನ್ನೂ ಕೈಗೊಳ್ಳಲಾಗಿಲ್ಲ. ಇದರಿಂದ, ಶಾಲೆಯ 166 ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ. ಆದ್ದರಿಂದ, ದಂಡಿನಶಿವರ ಕರ್ನಾಟಕ ಪಬ್ಲಿಕ್‌ ಶಾಲೆಗೆ ಇಂಗ್ಲಿಷ್‌ ಶಿಕ್ಷಕರನ್ನು ನೇಮಕ ಮಾಡಲು ಆಯುಕ್ತರು ತಕ್ಷಣವೇ ಕ್ರಮ ಕೈಗೊಂಡು, ವಿದ್ಯಾರ್ಥಿಗಳಿಗೆ ಸೂಕ್ತ ಶಿಕ್ಷಣ ಸಿಗುವಂತೆ ನೋಡಿಕೊಳ್ಳಬೇಕು.

ಇದನ್ನೂ ಓದಿ:- ಹುಬ್ಬಳ್ಳಿ-ಬೀದರ್‌ ಸ್ಲೀಪರ್‌ ಕೋಚ್‌ ಬಸ್‌ ಸೇವೆ ಆರಂಭ

ಈ ಆದೇಶದ ಅನುಪಾಲನಾ ವರದಿಯನ್ನು ಡಿ.22ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ದಂಡಿನಶಿವರ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ 8, 9 ಹಾಗೂ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು 166 ವಿದ್ಯಾರ್ಥಿಗಳಿದ್ದಾರೆ. ಆದರೆ, ಶಾಲೆಗೆ ಇಂಗ್ಲಿಷ್‌ ಭಾಷೆ ಬೋಧಿಸುವ ಶಿಕ್ಷಕರನ್ನೇ ನೇಮಕ ಮಾಡಲಾಗಿಲ್ಲ.

ಈ ಸಂಬಂಧ ಕಳೆದ ಅ.10ರಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಎಸ್‌ಎಸ್‌ಎಲ್‌ಸಿ ಬೋರ್ಡ್‌ ಪರೀಕ್ಷೆಗಳಲ್ಲಿ ಇಂಗ್ಲಿಷ್‌ ಕಡ್ಡಾಯ ವಿಷಯವಾಗಿದೆ. ಒಂದು ವೇಳೆ ಶಾಲೆಗೆ ಆಂಗ್ಲ ಭಾಷೆ ಬೋಧಿಸುವ ಶಿಕ್ಷಕರನ್ನು ನೇಮಕ ಮಾಡದಿದ್ದರೆ, 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಸಮಸ್ಯೆಯಾಗಲಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಇದನ್ನು ಪರಿಗಣಿಸಿ ನ್ಯಾಯಾಲಯ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿತು.

ಟಾಪ್ ನ್ಯೂಸ್

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.