ಭಾರತೀಯ ಸೇನಾ ಕಾರ್ಯ ಸದಾ ಸ್ಮರಣೀಯ: ರಮೇಶ್ ಕಳಸದ
Team Udayavani, Dec 10, 2021, 4:12 PM IST
ವಿಜಯಪುರ: ಸಶಸ್ತ್ರ ಪಡೆಗಳು ಹಗಲಿರುಳೆನ್ನದೇ ದೇಶ ರಕ್ಷಣೆಯ ಕಾಯಕದಲ್ಲಿ ನಿರತವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಹೇಳಿದರು.
ವಿಜಯಪುರ ಜಿಲ್ಲಾಡಳಿತದಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತೀಯ ಸೇನೆ ಅನುಕ್ಷಣವೂ ದೇಶ ರಕ್ಷಣೆಗಾಗಿ ಗಡಿಯಲ್ಲಿ ಸೇವೆ ಸಲ್ಲಿಸುತ್ತದೆ. ಹೀಗಾಗಿ ನಾವು ಭಾರತೀಯ ಸಶಸ್ತ್ರ ಪಡೆಗಳ ಅಮೋಘ ಸೇವೆಯನ್ನು ಸದಾ ಸ್ಮರಿಸಬೇಕು. ರಕ್ಷಣಾ ಪಡೆಗಳ ಕಾರ್ಯ ಅತ್ಯಂತ ಅನನ್ಯ, ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ದೇಣಿಗೆ ನೀಡಬೇಕು ಎಂದು ಕರೆ ನೀಡಿದರು.
ಸಶಸ್ತ್ರ ಧ್ವಜ ದಿನಾಚರಣೆ ಮಹತ್ವದ ಕುರಿತು ಗಣ್ಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ವಿಜಯಪುರ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಎಸ್.ಬಿ. ಪಾಟೀಲ ಅವರು ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಮಹತ್ವದ ಕುರಿತು ಉಪನ್ಯಾಸ ನೀಡಿದರು. ನಿವೃತ್ತ ಹಾ.ಕ್ಯಾ. ಎನ್.ಡಿ. ಸೂರ್ಯವಂಶಿ, ವಿಜಯಕುಮಾರ್ ಅಮೀನಭಾವಿ, ಪಿ.ಕೆ.ರಾಠೊಡ, ಪ್ರವೀಣ ನಾಗಮೋತಿ, ಮೀರಾ ಐಗಳಿ, ಗುರುರಾಜ ಕುಲಕರ್ಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.