ಶಿವಮೊಗ್ಗ: ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ ಪುತ್ರಿಯರು
Team Udayavani, Dec 10, 2021, 5:54 PM IST
ಶಿವಮೊಗ್ಗ: ಮೂವರು ಪುತ್ರಿಯರು ತಮ್ಮ ತಂದೆಯ ಅಂತ್ಯಕ್ರಿಯೆ ನೆರವೇರಿಸುವ ಮೂಲಕ ಗಮನ ಸೆಳೆದಿರುವ ಘಟನೆ ಗುರುವಾರ ನಡೆದಿದೆ.
ನಗರದ ಮೈಸೂರು ಕಾಗದ ಕಾರ್ಖಾನೆಯ ನಿವೃತ್ತ , ನಿಧಿಗೆ ನಿವಾಸಿ ಆರ್. ಜಗನ್ನಾಥ್‌ರವರು ಹಾವು ಕಡಿತದಿಂದ ಬುಧವಾರ ಮಧ್ಯಾಹ್ನ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು.
ಇವರ ಅಂತ್ಯಕ್ರಿಯೆ ಶಿವಮೊಗ್ಗ ರೋಟರಿ ಚಿತಾಗಾರದಲ್ಲಿ ನಡೆಯಿತು. ಅಂತ್ಯಕ್ರಿಯೆಯಲ್ಲಿ ಜಗನ್ನಾಥ್‌ರವರ ಮೂವರು ಪುತ್ರಿಯರು ಚಿತೆಗೆ ಅಗ್ನಿ ಸ್ಪರ್ಶ ಮಾಡುವ ಮೂಲಕ ತಂದೆಗೆ ಅಂತಿಮ ಗೌರವ ಸಲ್ಲಿಸಿದರು.
ಸಂಪ್ರದಾಯದಂತೆ ಗಂಡು ಮಕ್ಕಳು ಚಿತೆಗೆ ಅಗ್ನಿ ಸ್ಪರ್ಶ ಮಾಡುವುದು ವಾಡಿಕೆ. ಆದರೆ ಪುತ್ರಿಯರು ಈ ಕಾರ್ಯವನ್ನು ನೆರವೇರಿಸಿ ಸಂಪ್ರದಾಯವಾದಿಗಳ ನಡುವೆ ಮೇಲ್ಪಂಕ್ತಿ ಹಾಕುವ ಮೂಲಕ ಮಾದರಿಯಾಗಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಟೋ ಹರಿದಾಡುತ್ತಿದ್ದು, ವ್ಯಾಪಕವಾಗಿ ಗಮನ ಸೆಳೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.