ಆಣೆ ಪ್ರಮಾಣ: ತನಿಖೆಗೆ ಸಚಿವ ಸೂಚನೆ
Team Udayavani, Dec 11, 2021, 3:05 PM IST
ಚಿಕ್ಕಬಳ್ಳಾಪುರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ವೇಣುಗೋಪಾಲ್ ಗೆಲುವು ಸಾಧಿ ಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದರು.
ನಗರಸಭೆಯಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ಬಿಜೆಪಿಗೆ 500 ಮತಗಳಿಲ್ಲ ಎಂದು ಮಾಜಿ ಸಿಎಂ ಸಹಿತ ವಿರೋಧ ಪಕ್ಷಗಳ ಮುಖಂಡರು ಗೇಲಿ ಮಾಡಿದ್ದಾರೆ. 14ನೇ ತಾರೀಖು 500 ಮತದಾರರು ಇದ್ದಾರೆಯೇ ಅಥವಾ ಗೆಲ್ಲಿಸುತ್ತಾರಾ ಎಂಬುದು ಗೊತ್ತಾಗುತ್ತದೆ ಎಂದು ಟಾಂಗ್ ನೀಡಿದರು.
ರಾಜಕೀಯ ಧ್ರುವೀಕರಣ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಅನೇಕ ಮುಖಂಡರು ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ. ವಿಧಾನ ಪರಿಷತ್ ಚುನಾವಣೆ ಬಳಿಕ ಇನ್ನೂ ಹೆಚ್ಚು ಮುಖಂಡರು ಬಿಜೆಪಿಗೆ ಸೇರ್ಪಡೆ ಆಗಲಿದ್ದಾರೆ. ಚುನಾವಣೆ ನಂತರ ಕೋಲಾರ – ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ರಾಜಕೀಯ ಧ್ರುವೀಕರಣ ಆಗಿ ಅನೇಕ ಮುಖಂಡರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಇದರಿಂದ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬರುತ್ತದೆ ಎಂದು ವಿವರಿಸಿದರು.
ಸಿಎಂ ಸತತ ಸಂಪರ್ಕ: ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ನಿಯಂತ್ರಿಸುವ ಸಲುವಾಗಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ಅ ಧಿಕಾರಿಗಳು ನನ್ನೊಂದಿಗೆ ಸತತ ಸಂಪರ್ಕದಲ್ಲಿದ್ದಾರೆ. ಸೋಂಕು ನಿಯಂತ್ರಿಸುವ ಸಲುವಾಗಿ ಈಗಾಗಲೇ ಅಧಿ ಕಾರಿಗಳೊಂದಿಗೆ ಕಾಲಕಾಲಕ್ಕೆ ಸಭೆಗಳನ್ನು ನಡೆಸಿದ್ದೇವೆ.
ಸೋಂಕು ಹೇಗೆ ನಿಯಂತ್ರಣ ಮಾಡಬೇಕೆಂದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದ ಸಚಿವರು, ರಾಜ್ಯದಲ್ಲಿ ಸಂಭವನೀಯ 3ನೇ ಅಲೆ ಮತ್ತು ಒಮಿಕ್ರಾನ್ ಸೋಂಕಿನಿಂದ ಆತಂಕ ಪಡೆಯುವ ಅಗತ್ಯವಿಲ್ಲ.ಆದರೆ, ನಾಗರಿಕರು ಕೋವಿಡ್‌ನ ಮೊದಲ, 2ನೇ ಡೋಸ್ ಲಸಿಕೆ ಪಡೆದುಕೊಳ್ಳಬೇಕು, ಮಾಸ್ಕ್ ಧರಿಸುವುದನ್ನು ನಿಲ್ಲಿಸಬಾರದು ಎಂದು ಮನವಿ ಮಾಡಿದರು.
ಮೇಲ್ಮನೆಗೆ ಬಹಳ ಪ್ರಾಶಸ್ತ್ಯ: ವಿಧಾನ ಪರಿಷತ್ ಚುನಾವಣೆ ಸ್ಥಳೀಯ ಸಂಸ್ಥೆಗಳ ಸದಸ್ಯರ ಧ್ವನಿಯಾಗಿ ಕೆಲಸ ಮಾಡುವಂತಹ ವ್ಯಕ್ತಿಯನ್ನು ಆಯ್ಕೆ ಮಾಡುವ ಚುನಾವಣೆ ಮೇಲ್ಮನೆಗೆ ಬಹಳ ಪ್ರಾಶಸ್ತ್ಯಯಿದೆ. ಯಾವುದೇ ಬಿಲ್‌ಪಾಸ್ ಆಗಬೇಕಾದರೆ, ಸಂವಿಧಾನದ ಆಶಯದಂತೆ ಯಾವುದೇ ಬಿಲ್ ಕೆಳಮನೆಯಲ್ಲಿ ಪಾಸ್ ಆದರೆ, ಬಲಿಕ ಮೇಲ್ಮನೆಯಲ್ಲಿ ಕೂಡ ಅನುಮೋದನೆ ಸಿಗಬೇಕಾಗಲಿದೆ. ಆಗಾದ್ರೆ ಮಾತ್ರ ಬಿಲ್ ಪಾಸ್ ಆಗಲಿದೆ.
ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಮನವಿ: ಕೆಳಮನೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಇದೆ. ಆದರೆ, ಮೇಲ್ಮನೆಯಲ್ಲಿ ಬಹುಮತ ಬೇಕಾಗಲಿದೆ. ಇಲ್ಲೂ ಸ್ಪಷ್ಟ ಬಹುಮತಕ್ಕಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಲಾಗಿತ್ತು. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಹಾಗಾಗಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ, ಒಳ್ಳೆಯ ಆಡಳಿತ ನೀಡಲು ಸರ್ಕಾರಕ್ಕೆ ಸಾಧ್ಯವಾಗಲಿದೆ ಎಂಬ ಕಾರಣ ಮನವಿ ಮಾಡಿದ್ದೆ. ಮನವಿಗೆ ಸ್ಪಂದಿಸಿರುವ ವಿಶ್ವಾಸ ಇದೆ ಎಂದು ಹೇಳಿದರು.
ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ
ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಮತಕ್ಕಾಗಿ ಆಣೆ ಪ್ರಮಾಣಗಳನ್ನು ಮಾಡಿಸಿದ್ದಾರೆ ಎಂಬುದರ ಕುರಿತು ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಈ ಸಂಬಂಧ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಈಗಾಗಲೇ ಅಧಿ ಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು. ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಮತದಾನ ಮಾಡುವುದು ಯಾರಿಗೆ ಗೊತ್ತಾಗಬಾರದೆಂದು ಅಧಿ ಕಾರಿಗಳು ಸೂಕ್ತ ರೀತಿಯ ವ್ಯವಸ್ಥೆ ಮಾಡಿದ್ದಾರೆ.
ಅದಕ್ಕೆ ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಇವತ್ತು ನನ್ನ ಕರ್ತವ್ಯವನ್ನು ನಿಭಾಯಿಸಿದ್ದೇನೆ. ಒಬ್ಬ ಶಾಸಕನಾಗಿ ಮತ ಚಲಾವಣೆ ಮಾಡಬೇಕಾಗಿತ್ತು ಅದನ್ನು ಮಾಡಿದ್ದೇನೆ ಎಂದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಡಿ.ಎಸ್. ಆನಂದ್‌ರೆಡ್ಡಿ, ಮುಖಂಡರಾದ ಎಸ್. ಎಂ.ರಫೀಖ್, ಕೆ.ವಿ.ನವೀನ್ ಕಿರಣ್, ಮಹಾಕಾಳಿ ಬಾಬು, ನಗರಸಭಾ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.