ದೋಟಿಹಾಳ: ಬೇವಿನ ಮರದಲ್ಲಿ ಹಾಲು; ಪವಾಡವೆಂದೇ ನಂಬಿ ಗ್ರಾಮಸ್ಥರಿಂದ ವಿಶೇಷ ಪೂಜೆ
Team Udayavani, Dec 11, 2021, 7:33 PM IST
ದೋಟಿಹಾಳ: ಬೇವಿನ ಮರದಿಂದ ಹಾಲು ಸೋರುತ್ತಿದ್ದು, ಜನಮರುಳೋ ಜಾತ್ರೆ ಮರುಳೋ ಎಂಬಂತೆ ಮರಕ್ಕೆ ಪೂಜೆ ಸಲ್ಲಿಸುತ್ತಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ನಡೆದಿದೆ. ಬೇವಿನ ಮರದಿಂದ ಬಿಳಿ ಹಾಲು ಜಿನುಗುತ್ತಿರುವುದನ್ನು ಜನತೆ ಪವಾಡವೆಂದೇ ನಂಬುತ್ತಿದ್ದಾರೆ.
ಬಿಜಕಲ್ ಗ್ರಾಮದ ಗೋಪಾಲರಾವ್ ದೇಸಾಯಿ ಅವರ ಹೊಲದಲ್ಲಿ ಇರುವ ಗದ್ದಿ ದ್ಯಾಮಮ್ಮ ಎಂಬುವ ದೊಡ್ಡ ಬೇವಿನ ಮರದಿಂದ ಕಳೆದ ಒಂದು ವಾರದಿಂದ ಬಿಳಿ ಹಾಲು ಹೊರಬರುತ್ತಿದೆ. ಇದನ್ನು ನೋಡಲು ಸುತ್ತಮುತ್ತ ಜನ ಹಾಗೂ ಬಿಜಕಲ್ ಗ್ರಾಮಸ್ಥರು ತಂಡೋಪತಂಡವಾಗಿ 1ಕಿ.ಮೀ. ದೂರದಿಂದ ನಡೆದು ಕೊಂಡು ಬರುತ್ತಿದ್ದಾರೆ. ಇದು ದೈವ ಲೀಲೆ ಎಂದೇ ನಂಬಿ ಗಿಡಕ್ಕೆ ಪೂಜೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಬೇವಿನ ಗಿಡದ ಬುಡಕ್ಕೆ ಕಲ್ಲುಗಳನ್ನಿಟ್ಟಿ ಗದ್ದಿ ದ್ಯಾಮಮ್ಮ ದೇವಿ ರೂಪದಲ್ಲಿ ಪೂಜಿಸುತ್ತಿದ್ದಾರೆ. ಸುದ್ದಿ ತಿಳಿದು ಸುತ್ತಲಿನ ಗ್ರಾಮಗಳ ಜನ ತಂಡೋಪ ತಂಡವಾಗಿ ಬಂದು ಮರವನ್ನು ವೀಕ್ಷಿಸುತ್ತಿದ್ದಾರೆ. ಹಾಲು ಜಿನುಗುತ್ತಿರುವುದು ಪವಾಡವೆಂದೇ ನಂಬಿ, ಪೂಜೆ ಸಲ್ಲಿಸುತ್ತಿದ್ದಾರೆ. ವಿಶೇಷ ಪೂಜೆ ಮಾಡಿ ಇಷ್ಟಾರ್ಥಸಿದ್ಧಿಗಾಗಿ ಪ್ರಾರ್ಥಿಸುತ್ತಿದ್ದಾರೆ.
ಮತ್ತೊಂದೆಡೆ ಗ್ರಾಮಸ್ಥರು ಜ್ಯೋತಿಷಿಗಳ ಬಳಿ ಶಾಸ್ತ್ರ ಕೇಳಿದ್ದಾನೆ. ನಮ್ಮ ಗ್ರಾಮದ ಗದ್ದಿ ದ್ಯಾಮಮ್ಮ ಬೇವಿನ ಮರದಲ್ಲಿ ಹಾಲು ಜಿನುಗುತ್ತಿರುವುದರಿಂದ ಏನು ಲಾಭವಾಗುತ್ತೆ ಅಂತ ಜ್ಯೋತಿಷಿಗಳನ್ನು ಕೇಳಿದ್ದಾನೆ. ಇದು ದೇವಿ ಪವಾಡವಾಗಿದೆ ಇದಕ್ಕೆ ವಿಶೇಷ ಪೂಜೆ ಮಾಡಿ ನಿಮಗೆ ಒಳ್ಳೆಯದಾಗುತ್ತದೆ ಎಂದು ಹೇಳಿದರು. ಹೀಗಾಗಿ ಗ್ರಾಮಸ್ಥರು ಬೇವಿನ ಮರಕ್ಕೆ ವಿಶೇಷ ಪೂಜೆ ಮಾಡುತ್ತಿದ್ದಾರೆ. ಇದನ್ನು ನೋಡಲು ಆಗಮಿಸುವ ಭಕ್ತರಿಗೆ ಅನ್ನಪ್ರಸಾದ ವ್ಯವಸ್ಥೆಯನ್ನು ಗ್ರಾಮಸ್ಥರು ಮಾಡಿದ್ದರು.
ವೈಜ್ಞಾನಿಕವಾಗಿ ನೋಡಿದಾಗ ಬೇವಿನ ಮರದಲ್ಲಿ ಬಿಳಿ ದ್ರವ ಸುರಿಯೋದು ಸಹಜ ಪ್ರಕ್ರಿಯೆ ಎಂದಿದ್ದರೂ, ಜನ ಮಾತ್ರ ವಿಸ್ಮಯ ಎನ್ನುವ ರೀತಿಯಲ್ಲಿ ಅದನ್ನು ವೀಕ್ಷಿಸುತ್ತ್ತಿದ್ದಾರೆ. ನಾಳೆ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ. – ಶಿವಶಂಕರ ರ‍್ಯಾವಣಿಕಿ ಅರಣ್ಯ ಇಲಾಖೆ ಕುಷ್ಟಗಿ.
-ಮಲ್ಲಿಕಾರ್ಜುನ ಮೆದಿಕೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.