ಅಫ್ಘಾನಿಸ್ಥಾನಕ್ಕೆ ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿದ ಭಾರತ
Team Udayavani, Dec 11, 2021, 7:26 PM IST
ನವದೆಹಲಿ: ತಾಲಿಬಾನ್ ವಶಪಡಿಸಿಕೊಂಡ ನಂತರ ಅಫ್ಘಾನಿಸ್ಥಾನಕ್ಕೆ ಮಾನವೀಯ ನೆರವಿನ ನೆಲೆಯಲ್ಲಿ ಮೊದಲ ಹಂತದಲ್ಲಿ ಭಾರತವು ಶನಿವಾರ 1.6 ಮೆಟ್ರಿಕ್ ಟನ್ ಜೀವರಕ್ಷಕ ಔಷಧಗಳನ್ನು ಕಳುಹಿಸಿ ಜನರ ಕಷ್ಟಕ್ಕೆ ನೆರವಾಗಿದೆ.
ಶುಕ್ರವಾರ ಕಾಬೂಲ್‌ನಿಂದ 10 ಭಾರತೀಯರು ಮತ್ತು 94 ಆಫ್ಘನ್ನರನ್ನು ದೆಹಲಿಗೆ ಕರೆತಂದಿದ್ದ ವಿಮಾನದಲ್ಲಿ ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಲಾಗಿದೆ.
ಈ ನೆರವನ್ನು “ಭಾರತದ ಜನರಿಂದ ಉಡುಗೊರೆ” ಎಂದು ವಿವರಿಸಿದ ಆಫ್ಘನ್ ರಾಯಭಾರಿ ಫರೀದ್ ಮಮುಂಡ್‌ಜಾಯ್, ಔಷಧಿಗಳು ಕಾಬೂಲ್‌ಗೆ ಬಂದಿವೆ ಮತ್ತು ಈ “ಕಷ್ಟದ ಸಮಯದಲ್ಲಿ” ಅನೇಕ ಕುಟುಂಬಗಳಿಗೆ ಸಹಾಯ ಮಾಡಲಿವೆ ಎಂದು ಹೇಳಿದರು.
ಕಾಬೂಲ್‌ನಲ್ಲಿರುವ ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿಗಳಿಗೆ ಸರಕುಗಳನ್ನು ಹಸ್ತಾಂತರಿಸಲಾಗುವುದು. ಅಫ್ಘಾನಿಸ್ಥಾನದಲ್ಲಿನ ಸವಾಲಿನ ಮಾನವೀಯ ಪರಿಸ್ಥಿತಿಯ ದೃಷ್ಟಿಯಿಂದ, ಭಾರತ ಸರಕಾರ ಹಿಂದಿರುಗುವ ವಿಮಾನದಲ್ಲಿ ವೈದ್ಯಕೀಯ ಸಾಮಗ್ರಿಗಳನ್ನು ಒಳಗೊಂಡಿರುವ ಮಾನವೀಯ ನೆರವನ್ನು ರವಾನಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.