ಕರಾವಳಿಯಲ್ಲಿ ಮೊದಲ ಸಿಎನ್‌ಜಿ ಬಸ್‌ ಓಡಾಟ

ಉಪ್ಪಿನಂಗಡಿ-ಮಂಗಳೂರು ರಸ್ತೆಯಲ್ಲಿ ಸಂಚಾರ

Team Udayavani, Dec 12, 2021, 7:10 AM IST

ಕರಾವಳಿಯಲ್ಲಿ ಮೊದಲ ಸಿಎನ್‌ಜಿ ಬಸ್‌ ಓಡಾಟ

ಬಂಟ್ವಾಳ: ಪೆಟ್ರೋಲ್‌-ಡೀಸೆಲ್‌ಗೆ ಪರ್ಯಾಯ ಇಂಧನವಾಗಿ ವಾಹನಗಳಿಗೆ ಸಿಎನ್‌ಜಿ (ಕಂಪ್ರಸ್‌ಡ್‌ ನ್ಯಾಚುರಲ್‌ ಗ್ಯಾಸ್‌) ಬಳಕೆ ಮಾಡಲಾ ಗುತ್ತಿದ್ದು, ಕರಾವಳಿಯಲ್ಲಿ ಇದೇ ಮೊದಲ ಬಾರಿಗೆ ಸಿಎನ್‌ಜಿ ಇಂಧನ ಬಳಕೆಯ ಬಸ್ಸೊಂದು ಶನಿವಾರ ರಸ್ತೆಗಿಳಿದಿದೆ.

ಶನಿವಾರ ಉಪ್ಪಿನಂಗಡಿ- ಮಂಗಳೂರು ಮಾರ್ಗದಲ್ಲಿ ಈ ಹೊಸ ಬಸ್‌ ಓಡಾಟ ಆರಂಭಿಸಿದೆ. ಟಾಟಾ ಮೋಟಾರ್ಸ್‌ ಕಂಪೆನಿಯು ತಯಾರಿಸಿದ ಬಸ್‌ ಇದಾಗಿದೆ. ಅವಿಭಜಿತ ದಕ್ಷಿಣ ಕನ್ನಡದಲ್ಲಿ ಸಿಎನ್‌ಜಿ ಆಧಾರಿತ ಮೊದಲ ಬಸ್‌ ಇದು ಎಂದು ಖಾಸಗಿ ಬಸ್‌ ಮಾಲಕರ ಸಂಘದವರು ತಿಳಿಸಿದ್ದಾರೆ.

ಅಧಿಕ ಮೈಲೇಜ್‌
ಕಂಪೆನಿಯವರ ಮಾಹಿತಿ ಪ್ರಕಾರ ಬಸ್‌ ಡೀಸೆಲ್‌ಗಿಂತ ಕೊಂಚ ಹೆಚ್ಚು ಮೈಲೇಜ್‌ ಕೊಡುತ್ತದೆ. ಆದರೆ ಓಡಾಟ ಈಗಷ್ಟೇ ಆರಂಭಗೊಂಡಿರುವುದರಿಂದ ಮೈಲೇಜ್‌ನ ನಿಖರತೆ ಸಿಕ್ಕಿಲ್ಲ ಎಂದು ಮಾಲಕರು ಹೇಳಿದ್ದಾರೆ. ನೋಂದಣಿ ಸೇರಿ ಈ ಬಸ್‌ಗೆ ಸುಮಾರು 30 ಲಕ್ಷ ರೂ. ತಗಲುತ್ತಿದ್ದು, ಡೀಸೆಲ್‌ ಬಸ್‌ಗಳಿಗಿಂತ 3.5 ಲಕ್ಷ ರೂ.ಗಳಷ್ಟು ದುಬಾರಿಯಾಗಿದೆ ಎಂದಿದ್ದಾರೆ.

ಇದನ್ನೂ ಓದಿ:ಯಾವುದೇ ಕ್ರೀಡೆಯಲ್ಲಿ ಆಡುವಾಗ ಗೆಲ್ಲಲೆಂದೇ ಆಡಬೇಕು : ಮುಖ್ಯಮಂತ್ರಿ ಬೊಮ್ಮಾಯಿ

ಮರುಪೂರಣ ಸವಾಲು
ಕಾರುಗಳಿಗೆ ಸಿಎನ್‌ಜಿ ಇಂಧನ ಬಳಕೆ ಮಾಡುವುದಾದರೆ ಇಂಧನ ತೀರಿದ ಬಳಿಕ ಪೆಟ್ರೋಲ್‌ ಮೂಲಕವೂ ಪ್ರಯಾಣ ಮುಂದುವರಿಸಬಹುದಾಗಿದೆ. ಆದರೆ ಸಿಎನ್‌ಜಿ ಬಸ್ಸಿನಲ್ಲಿ ಡೀಸೆಲ್‌ ಬಳಕೆಗೆ ಅವಕಾಶವಿಲ್ಲ. ಬಸ್ಸಿನ ಸಿಎನ್‌ಜಿ ಟ್ಯಾಂಕ್‌ ಸಾಮರ್ಥ್ಯ 80 ಕೆಜಿ. ಸದ್ಯ ಕೊಳ್ನಾಡು, ಕಾವೂರು, ಹೊಸಬೆಟ್ಟುಗಳಲ್ಲಿ ಮಾತ್ರ ಸಿಎನ್‌ಜಿ ಮರು ಪೂರಣ ವ್ಯವಸ್ಥೆ ಇದೆ. ಈ ಬಸ್ಸಿನ ರೂಟ್‌ ಉಪ್ಪಿನಂಗಡಿ-ಮಂಗಳೂರು ಆಗಿರುವುದರಿಂದ ಇಂಧನ ಮುಗಿದ ಬಳಿಕ ಮರುಪೂರಣಕ್ಕಾಗಿ ದೂರದ ಈ ಮೂರು ಸ್ಥಳಗಳಲ್ಲಿ ಯಾವುದಾದ ರೊಂದಕ್ಕೆ ತೆರಬೇಕು. ಆದ್ದರಿಂದ ಪ್ರಸ್ತುತ ಬಸ್ಸಿನ ನಿರ್ವಹಣೆ ಸವಾಲಿನ ವಿಚಾರವಾಗಿದೆ.

ಮೊದಲ ದಿನ ಚಾಲಕರಾಗಿ ಸಂತೋಷ್‌ ಪೂಜಾರಿ ಹಾಗೂ ನಿರ್ವಾಹಕರಾಗಿ ರಾಜೇಶ್‌ ರೈ ಅವರು ಈ ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸಿದ್ದು, ಸಿಎನ್‌ಜಿ ಬಸ್ಸಿನ ಓಡಾಟ ಉತ್ತಮ ಅನುಭವ ನೀಡಿದೆ ಎಂದು ತಿಳಿಸಿದ್ದಾರೆ.

ಮಾಲಕರ ಕುತೂಹಲ
ಇದೇ ವೇಳೆ ಪರಿಸರಕ್ಕೆ ಪೂರಕವೂ, ಅಧಿಕ ಮೈಲೇಜ್‌ ನೀಡಬಹುದಾದ ಸಿಎನ್‌ಜಿ ಆಧಾರಿತ ಬಸ್‌ಗಳ ಬಗ್ಗೆ ಇತರ ಖಾಸಗಿ ಬಸ್‌ ಗಳ ಮಾಲಕರೂ ಆಸಕ್ತರಾಗಿದ್ದು, ಈ ಬಸ್ಸಿನ ಸಾಧಕ- ಬಾಧಕಗಳನ್ನು ನೋಡಿಕೊಂಡು ತಾವೂ ಖರೀದಿಸುವ ಚಿಂತನೆಯಲ್ಲಿದ್ದಾರೆ.

ಕಳೆದ ಕೆಲವು ದಿನಗಳಿಂದ ಸಿಎನ್‌ಜಿ ಹೊಂದಾಣಿಕೆ ಮಾಡಿಕೊಂಡು ಪ್ರಾಯೋಗಿಕವಾಗಿ ಬಸ್ಸನ್ನು ಓಡಿಸು ತ್ತಿದ್ದೇವೆ. ಶನಿವಾರ ಮೊದಲ ಬಾರಿಗೆ ಪ್ರಯಾಣಿಕರನ್ನು ಕರೆದೊಯ್ದಿದ್ದೇವೆ. ಸಾಧಕ-ಬಾಧಕ ಇನ್ನಷ್ಟೇ ಗೊತ್ತಾಗಬೇಕಿದೆ ಎಂದು ಮಾಲಕ ಅಡ್ಯಾರಿನ ಸಾರಿಗೆ ಉದ್ಯಮಿ ರೊನಾಲ್ಡ್‌ ಡಿ’ಸೋಜಾ “ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

5

Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!

4

Sullia: ಉಪಟಳ ಮಾಡುವ ಕೋತಿಗಳಿಗೆ ಶಾಕ್‌ ಟ್ರೀಟ್‌ಮೆಂಟ್‌!

3(1

Sullia: ಬಸ್‌ ತಂಗುದಾಣ ನಿರ್ವಹಣೆಗೆ ನಿರಾಸಕ್ತಿ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.