ಮೋದಿ ಟ್ವಿಟರ್ ಹ್ಯಾಕ್: ಬಿಟ್ ಕಾಯಿನ್ ಬಗ್ಗೆ ನಕಲಿ ಪೋಸ್ಟ್ ಮಾಡಿದ ಹ್ಯಾಕರ್ ಗಳು
Team Udayavani, Dec 12, 2021, 9:48 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಟ್ವಿಟರ್ ಖಾತೆ ಶನಿವಾರ ರಾತ್ರಿ ಹ್ಯಾಕ್ ಮಾಡಲಾಗಿದ್ದು, ಪ್ರಧಾನಿ ಖಾತೆಯಿಂದ ಬಿಟ್ ಕಾಯಿನ್ ವಿಚಾರವಾಗಿ ಟ್ವೀಟ್ ಮಾಡಿದ್ದಾರೆ.
ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ, ಸರ್ಕಾರ ಅಧಿಕೃತವಾಗಿ 500 ಬಿಟ್ ಕಾಯಿನ್ ಖರೀದಿಸಿದೆ, ಅವುಗಳನ್ನು ದೇಶದ ಪ್ರಜೆಗಳಿಗೆ ಹಂಚುವುದಾಗಿ ಪ್ರಧಾನಿ ಮೋದಿ ಖಾತೆಯಿಂದ ಟ್ವೀಟ್ ಮಾಡಲಾಗಿತ್ತು.
ಈ ಬಗ್ಗೆ ಕೂಡಲೇ ಟ್ವಿಟರ್ ಸಂಸ್ಥೆಗೆ ಮಾಹಿತಿ ನೀಡಿದ್ದು, ತಕ್ಷಣವೇ ಪ್ರಧಾನಿ ಮೋದಿ ಟ್ವಿಟರ್ ನಿಂದ, ಮಾಡಲಾಗಿದ್ದ ನಕಲಿ ಪೋಸ್ಟ್ ಡಿಲೀಟ್ ಮಾಡಲಾಗಿದೆ.
The Twitter handle of PM @narendramodi was very briefly compromised. The matter was escalated to Twitter and the account has been immediately secured.
In the brief period that the account was compromised, any Tweet shared must be ignored.
— PMO India (@PMOIndia) December 11, 2021
ಹ್ಯಾಕರ್ ಗಳು ಮಾಡಿರುವ ಟ್ವೀಟ್ ಪರಿಗಣಿಸದಂತೆ ಸ್ಪಷ್ಟನೆ ನೀಡಿದ್ದು, ಪ್ರಧಾನಿ ಖಾತೆಯಿಂದ ಲಿಂಕ್ ಶೇರ್ ಆದರೆ ಅದನ್ನು ಪರಿಗಣಿಸಬೇಡಿ. ಬಿಟ್ ಕಾಯಿನ್ ಕುರಿತು ಯಾವುದಾದರೂ ಲಿಂಕ್ ಬಂದರೆ ಪರಿಗಣಿಸಬೇಡಿ ಎಂದು ಪ್ರಧಾನ ಮಂತ್ರಿ ಕಚೇರಿ ಟ್ವಿಟರ್ ಖಾತೆಯಿಂದ ಸ್ಪಷ್ಟನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.