ಟ್ರಾಫಿಕ್ ಸಮಸ್ಯೆಗಿಲ್ಲ ನಿಯಂತ್ರಣ
Team Udayavani, Dec 12, 2021, 11:53 AM IST
ಶಹಾಬಾದ: ಪ್ರತಿನಿತ್ಯ ನೂರಾರು ವಾಹನಗಳ ಸಂಚಾರಕ್ಕೆ ಸಾಕ್ಷಿಯಾಗುವ ನೆಹರು ವೃತ್ತದಲ್ಲಿ ಟ್ರಾಫಿಕ್ ಸಮಸ್ಯೆ ದಿನೇ ದಿನೇ ಬಿಗಡಾಯಿಸುತ್ತಿದೆ. ಫುಟ್‌ಪಾತ್ ಜಾಗ ಅತಿಕ್ರಮಣ, ವಾಹನಗಳ ಸಂಖ್ಯೆ ಹೆಚ್ಚಳ, ನಗರ ಬೆಳವಣಿಗೆಯಿಂದ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಬರುತ್ತಿಲ್ಲ. ಇದು ನಗರಸಭೆ ಗಮನಕ್ಕೆ ಬಂದರೂ ಜಾಣ ಮೌನ ವಹಿಸುತ್ತಿದೆ.
ನಗರದ ನೆಹರು ವೃತ್ತದಲ್ಲಿ ಸಂಚಾರ ಕಿರಿಕಿರಿಗೆ ವಾಹನ ಸವಾರರು ಹಾಗೂ ಪಾದಚಾರಿಗಳು ನಿತ್ಯ ಪ್ರಾಣ ಸಂಕಟ ಎದುರಿಸುವ ಸ್ಥಿತಿ ನಿರ್ಮಾಣವಾಗಿದೆ. ನೆಹರು ವೃತ್ತದ ಸುತ್ತಲೂ ರಸ್ತೆ ಬದಿಯಲ್ಲಿ ಹಣ್ಣಿನ ಅಂಗಡಿ, ತಳ್ಳೋ ಬಂಡಿ ನಿಲ್ಲಿಸಲಾಗುತ್ತಿದೆ. ಇದರಿಂದ ಟ್ರಾಫಿಕ್‌ಸಮಸ್ಯೆ ಉಲ್ಬಣವಾಗಿದೆ. ಇದರಿಂದ ಸಾರ್ವಜನಿಕರಿಗೆ ವಾಹನ ಸವಾರರಿಗೆ ನಿತ್ಯ ಕಿರಿಕಿರಿಯಾಗುತ್ತಿದೆ.
ಈ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ನಗರದ ಮುಖ್ಯ ವೃತ್ತ ಇದಾಗಿದ್ದರಿಂದ ನಗರದೊಳಗೆ ಪ್ರವೇಶಿಸುವ ಎಲ್ಲ ವಾಹನಗಳು ಇಲ್ಲಿಂದಲೇ ಸಾಗಬೇಕು. ಅಲ್ಲದೇ ಇಕ್ಕಟ್ಟಾದ ರಸ್ತೆ, ಅದರ ಮಧ್ಯೆ ಕುಡಿಯುವ ನೀರಿನ ವಾಲ್ ಇದೆ. ಈ ರಸ್ತೆ ನಾಲ್ಕು ರಸ್ತೆಗಳ ಸಂಪರ್ಕ ಕೊಂಡಿಯಾಗಿದೆ. ದ್ವಿಚಕ್ರ ವಾಹನಗಳ ಜತೆಗೆ, ಬಸ್, ಲಾರಿ, ಟಂಟಂ ಹೀಗೆ ಎಲ್ಲ ಬಗೆಯ ವಾಹನಗಳು ಇದೇ ಮಾರ್ಗದಿಂದಲೇ ಸಂಚರಿಸಬೇಕು.
ಈ ವೃತ್ತದಿಂದಲೇ ನಗರಸಭೆ, ಪೊಲೀಸ್ ಕಚೇರಿ, ತಹಶೀಲ್ದಾರ್ ಕಾರ್ಯಾಲಯ, ನಗರಸಭೆ, ರೈಲ್ವೆ ನಿಲ್ದಾಣ, ಅಂಚೆ ಕಚೇರಿ, ಬಸ್ ನಿಲ್ದಾಣ ಸೇರಿದಂತೆ ಅನೇಕ ಕಚೇರಿಗಳಿಗೆ ಹೋಗಲು ಇದೇ ಮಾರ್ಗ ಸೂಕ್ತವಾಗಿದ್ದರಿಂದ ಸಂಚಾರ ಸಮಸ್ಯೆ ವಿಪರೀತವಾಗಿದೆ. ಆದರೆ ಸಮಸ್ಯೆ ನಿಯಂತ್ರಿಸಲು ಯಾರೂ ಮುಂದಾಗುತ್ತಿಲ್ಲ. ಜನತೆ ಎದುರಿಸುತ್ತಿರುವ ಟ್ರಾಫಿಕ್ ಸಮಸ್ಯೆಗೆ ಸಂಬಂಧಪಟ್ಟ ಅಧಿಕಾರಿಗಳು ಮುಖಮಾಡುತ್ತಿಲ್ಲ.
ಕೂಡಲೇ ರಸ್ತೆಯ ಬದಿಯ ಎಲ್ಲ ಡಬ್ಟಾ ಅಂಗಡಿಗಳನ್ನು ತೆರವುಗೊಳಿಸಿ ಸುಲಭ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.