ನಾಳೆಯಿಂದ ಪುರಾತನ ಮಠ-ಮಂದಿರ ಸಚ್ಛತಾ ಅಭಿಯಾನ


Team Udayavani, Dec 12, 2021, 1:01 PM IST

ನಾಳೆಯಿಂದ ಪುರಾತನ ಮಠ-ಮಂದಿರ ಸಚ್ಛತಾ ಅಭಿಯಾನ

ಹುಬ್ಬಳ್ಳಿ: ಕಾಶಿ ವಿಶ್ವನಾಥ ಕ್ಷೇತ್ರದಲ್ಲಿ ಅಂದಾಜು 800 ಕೋಟಿ ರೂ. ವೆಚ್ಚದಲ್ಲಿ ಪುನರುಜ್ಜೀವನ ಕಾರ್ಯಕೈಗೊಳ್ಳಲಾಗಿದ್ದು, ಅದರ ಲೋಕಾರ್ಪಣೆಯ ಭವ್ಯಕಾಶಿ-ದಿವ್ಯ ಕಾಶಿ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿಯವರು ಡಿ.13ರಂದು ಉದ್ಘಾಟಿಸಲಿದ್ದಾರೆ.  ಅದರ ಅಂಗವಾಗಿ ರಾಜ್ಯದಲ್ಲಿ ಡಿ. 13ರಿಂದ ಜ. 14ವರೆಗೆ ಪುರಾತನ ಮಠ-ಮಂದಿರಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಪಕ್ಷದಿಂದ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಶಿ ಕ್ಷೇತ್ರ ಪುನರುಜ್ಜೀವನ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಮುಂದಾಗಿದ್ದರು. ಯೋಜನೆ ಅಂಗವಾಗಿ ಕಾಶಿಯಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ ಕೈಗೊಂಡಾಗ ಮುಚ್ಚಿ ಹೋಗಿದ್ದ ಸುಮಾರು 40 ದೇವಾಲಯಗಳು ಪತ್ತೆಯಾಗಿವೆ. ಅವುಗಳ ಪುನರುಜ್ಜೀವನಗೊಳಿಸಲಾಗಿದೆ ಎಂದರು.

ಡಿ. 13ರಂದು ಕಾಶಿಯಲ್ಲಿ ನಡೆಯುವ ಕಾರ್ಯಕ್ರಮದ ನೇರ ಪ್ರಸಾರವನ್ನು ದೇಶದ ಸುಮಾರು 51 ಸಾವಿರ ಸ್ಥಳಗಳಲ್ಲಿ ಎಲ್‌ಇಡಿ ಪರದೆ ಮೇಲೆ ತೋರಿಸಲಾಗುತ್ತದೆ. ಕಾರ್ಯಕ್ರಮದಲ್ಲಿರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ವಿವಿಧಮುಖ್ಯಮಂತ್ರಿಗಳು ಭಾಗಿಯಾಗುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಮೂರುಸಾವಿರ ಮಠದ ಆವರಣದಲ್ಲಿ ಎಲ್‌ಇಡಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಭವ್ಯಕಾಶಿ-ದಿವ್ಯಕಾಶಿ ಕಾರ್ಯಕ್ರಮದ ಅಂಗವಾಗಿ ರಾಜ್ಯದಲ್ಲಿ ಒಂದು ತಿಂಗಳವರೆಗೆ ಪುರಾತನ ಮಠ-ಮಂದಿರಗಳ ಸ್ವಚ್ಛತಾ ಕಾರ್ಯಕ್ರಮವನ್ನು ಬಿಜೆಪಿ ಸಂಘಟನಾತ್ಮಕ 37 ಜಿಲ್ಲೆ 311 ಮಂಡಲಗಳಲ್ಲಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ಕೈಗೊಳ್ಳಲಾಗುತ್ತಿದೆ. ಆಯಾ ಜಿಲ್ಲೆ-ಮಂಡಲಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಕ್ಷದ ಸಚಿವರು, ಶಾಸಕರು, ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಶಾಸಕ ಅರವಿಂದ ಬೆಲ್ಲದ, ಮುಖಂಡರಾದ ಲಿಂಗರಾಜ ಪಾಟೀಲ, ದತ್ತಮೂರ್ತಿ ಕುಲಕರ್ಣಿ, ತಿಪ್ಪಣ್ಣ ಮಜ್ಜಗಿ, ಪ್ರಭು ನವಲಗುಂದಮಠ, ಬಸವರಾಜ ಗರಗ, ಸಿದ್ದು ಮೊಗಲಿಶೆಟ್ಟರ, ರವಿ ನಾಯಕ ಇನ್ನಿತರರು ಇದ್ದರು.

ಬಿಜೆಪಿ ಸಿಎಂ-ಡಿಸಿಎಂಗಳ ಸಭೆ :

ಡಿ. 14ರಂದು ಕಾಶಿಯಲ್ಲಿ ಬಿಜೆಪಿ ಮುಖ್ಯಮಂತ್ರಿಗಳ ಮತ್ತು ಉಪ ಮುಖ್ಯಮಂತ್ರಿಗಳ ಸಭೆ ಕರೆಯಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. ಡಿ. 17ರಂದು ಕಾಶಿಯಲ್ಲಿ ಮೇಯರ್‌-ಉಪಮೇಯರ್‌ ಗಳ ಸಮ್ಮೇಳನವನ್ನು ಕೇಂದ್ರ ನಗರಾಭಿವೃದ್ಧಿ ಸಚಿವಾಲಯ, ಉತ್ತರ ಪ್ರದೇಶ ನಗರಾಭಿವೃದ್ಧಿ ಸಚಿವಾಲಯಗಳಿಂದ ಆಯೋಜಿಸಲಾಗಿದೆ ಎಂದು ಮಹೇಶ ಟೆಂಗಿನಕಾಯಿ ತಿಳಿಸಿದರು.

ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ಚುನಾವಣೆಗೆ ನಾಲ್ಕು ಕಡೆ ಪಕ್ಷದಿಂದ ಪ್ರಭಾರಿಗಳನ್ನು ನೇಮಕ ಮಾಡಲಾಗಿದೆ. ಗದಗ-ಬೆಟಗೇರಿ ನಗರಸಭೆಗೆ ನಾರಾಯಣ ಜರತಾರಘರ,ಅಣ್ಣಿಗೇರಿ ಪುರಸಭೆಗೆ ಈರಣ್ಣ ಜಡಿ, ಹಾವೇರಿ ಜಿಲ್ಲೆ ಬಂಕಾಪುರಕ್ಕೆ ಭೋಜರಾಜ ಕರೂದಿ, ಗುತ್ತಲ ಪಪಂಗೆ ಮಂಜುನಾಥ ಓಲೇಕಾರ ಅವರನ್ನು ನೇಮಕ ಮಾಡಲಾಗಿದೆ. –ಮಹೇಶ ಟೆಂಗಿನಕಾಯಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ

ಟಾಪ್ ನ್ಯೂಸ್

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

1-gopal

Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ

5

Chocolate ಕೇವಲ ಸಸ್ಯಾಹಾರವೇ? ಸಸ್ಯಾಹಾರಿಗಳೇ ಗಮನಿಸಿ…

jairam ramesh

Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್

Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್

siddaramaiah

Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ

siddaramaiah

Hubli: ಜನರ ದಿಕ್ಕು ತಪ್ಪಿಸಲು ಬಿಜೆಪಿಯಿಂದ ವಕ್ಫ್‌ ಹೋರಾಟ: ಸಿಎಂ ಸಿದ್ದರಾಮಯ್ಯ

Shiggov-Meet

By Election: ಶಿಗ್ಗಾವಿ ಸಮರ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಮುಖಂಡರ ಸಭೆ

hk-patil

Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

9

Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

death

Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ

4

Kasaragod: ಸ್ಕೂಟರ್‌ ಅಪಘಾತ; ಸವಾರನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.