ತುಂಬು ಗರ್ಭಿಣಿ ಸಾವು:ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಆಸ್ಪತ್ರೆಗೆ ಮುತ್ತಿಗೆ ಹಾಕಿದ ಸ್ಥಳೀಯರು
Team Udayavani, Dec 12, 2021, 1:55 PM IST
ಬಾಳೆಹೊನ್ನೂರು: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ತುಂಬು ಗರ್ಭಿಣಿ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ. ಆಸ್ಪತ್ರೆಗೆ ಮೃತರ ಸಂಬಂಧಿಕರು, ಸಾರ್ವಜನಿಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವನಗರ ಶ್ವೇತಾ (27) ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ವೈದ್ಯರು ಸ್ವಾಭಾವಿಕ ಹೆರಿಗೆ ಆಗುತ್ತದೆ ಎಂದು ಸಮಯ ದೂಡಿದ ಕಾರಣ ಹಾಗೂ ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡದ ಕಾರಣ ಗರ್ಭಿಣಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಾಧಿಕಾರಿ ಎಲ್ಡೋಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಈ ಹಿಂದೆ ಎನ್.ಆರ್.ಪುರ, ಶೃಂಗೇರಿಯಲ್ಲಿ ವೈದ್ಯ ಎಲ್ಡೋಸ್ ಅಮಾನತ್ತಾಗಿದ್ದ. ವೈದ್ಯಾಧಿಕಾರಿ ವಿರುದ್ದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸ್ಥಳೀಯರು ಮುತ್ತಿಗೆ ಹಾಕಿದ್ದಾರೆ.
ಈ ವೇಳೆ ಪೊಲೀಸ್ ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಕೂಡ ಮೃತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.