ಬಿಪಿನ್ ರಾವತ್‌ಗೆ ಶ್ರದ್ಧಾಂಜಲಿ
Team Udayavani, Dec 12, 2021, 2:03 PM IST
ಯಾದಗಿರಿ: ದೇಶದ ಮೂರು ಸೇನಾ ಪಡೆಗಳ ಮುಖ್ಯಸ್ಥ ಜ. ರಾವತ್ ಮತ್ತು ಅವರ ಪತ್ನಿ ಸೇರಿದಂತೆ 11 ಜನ ಸೇನಾಧಿಕಾರಿಗಳು ಕಾಪ್ಟರ್ ದುರಂತದಲ್ಲಿ ಹುತಾತ್ಮರಾಗಿದ್ದು, ಈ ಘಟನೆ ದೇಶಕ್ಕೆ ಬರಸಿಡಿಲು ಬಡಿದಂತಾಗಿದೆ ಎಂದು ಅಖೀಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಸೋಮಶೇಖರ ಮಣ್ಣೂರು ದುಃಖ ವ್ಯಕ್ತಪಡಿಸಿದರು.
ಇಲ್ಲಿನ ವೀರಶೈವ ಕಲ್ಯಾಣ ಮಂಟಪದಲ್ಲಿ ಮಹಾಸಭಾ ವತಿಯಿಂದ ಏರ್ಪಡಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಪಿನ್ ರಾವತ್ ಅವರ ಶೌರ್ಯ, ಸಾಹಸ ಹಾಗೂ ದೇಶಪ್ರೇಮ, ಸೈನಿಕ ಆಡಳಿತಾತ್ಮಕ ಕ್ರಮಗಳಲ್ಲಿ ಅವರ ಚಾಣಾಕ್ಷತೆ ಉತ್ತಮವಾಗಿತ್ತು. ಇದರಿಂದ ದೇಶದ ಮಿಲಿಟರಿ ಶಕ್ತಿ ಬಲಾಡ್ಯವಾಗಿತ್ತು ಎಂದು ಸ್ಮರಿಸಿದರು.
ನಗರ ವೀರಶೈವ ಸಮಾಜದ ಅಧ್ಯಕ್ಷ ಅಯ್ಯಣ್ಣ ಹುಂಡೇಕಾರ್ ಮಾತನಾಡಿದರು. ತಾಲೂಕು ಪ್ರ. ಕಾರ್ಯದರ್ಶಿ ಬಸವರಾಜ ಮೋಟ್ನಳ್ಳಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಮೃತ ಎಲ್ಲ ಸೇನಾನಿಗಳ ಆತ್ಮಕ್ಕೆ ಶಾಂತಿಕೋರಿ ಮೌನಾಚರಣೆ ಮಾಡಲಾಯಿತು. ಮಹಾಸಭಾ ಜಿಲ್ಲಾ ಉಪಾಧ್ಯಕ್ಷ ಮಹೇಶ ಆನೆಗುಂದಿ, ಸಿದ್ದು ಪಾಟೀಲ್, ಮಹೇಶ ಕುಮಾರ ಹಿರೇಮಠ, ವಿಶಾಲ, ಮಲ್ಲಿಕಾರ್ಜುನ, ಬಂಡೆಪ್ಪ ಆಕಳ, ವಿಶ್ವನಾಥ ಕೋರಿ, ಬಸವರಾಜ ನಾಸಿ, ಡಾ| ಭೀಮರಾಯ ಲಿಂಗೇರಿ, ಶರಣು ಆಶನಾಳ, ನೂರೊಂದಪ್ಪ ಲೇವಡಿ, ಬಾಪುಗೌಡ ದಶರಥ ಸಾತನೂರ, ಬಸವರಾಜ ಸಾವೂರ, ಮಲ್ಲು ಹಳಕಟ್ಟಿ, ದೇವೇಂದ್ರರೆಡ್ಡಿ, ಶರಣು ಇಡ್ಮೂರು ಸೇರಿದಂತೆ ಮಹಾಸಭಾ ಪದಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.