ಬೆಳಗಾವಿ: ಚಳಿಗಾಲ ಅಧಿವೇಶನಕ್ಕೆ ಪ್ರತಿಭಟನೆಗಳ ಬಿಸಿ
Team Udayavani, Dec 12, 2021, 2:09 PM IST
ಬೆಳಗಾವಿ: ಮೂರು ವರ್ಷ ಬಳಿಕ ಗಡಿ ಜಿಲ್ಲೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ.13ರಿಂದ ನಡೆಯಲಿರುವ ಚಳಿಗಾಲ ಅಧಿವೇಶನ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಸಾಲು ಸಾಲು ಪ್ರತಿಭಟನೆಗಳ ಬಿಸಿ ತಟ್ಟಲಿದೆ.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಬಳಿಕ ಇದೇ ಮೊದಲ ಬಾರಿಗೆ ಚಳಿಗಾಲ ಅಧಿ ವೇಶನ ನಡೆಸುತ್ತಿರುವ ಮುಖ್ಯಮಂತ್ರಿಗಳಿಗೆ ಒಂದೆಡೆ ಕಲಾಪದಲ್ಲಿ ಪ್ರತಿಪಕ್ಷಗಳ ಸವಾಲಿಗೆ ಉತ್ತರಿಸುವ ತಲೆನೋವು, ಇನ್ನೊಂದೆಡೆ ವಿವಿಧ ಸಂಘ-ಸಂಸ್ಥೆಗಳ ಪ್ರತಿಭಟನೆ ಎದುರಿಸಬೇಕಾದ ಅನಿವಾರ್ಯತೆ ಬಂದಿದೆ. ಇದೆಲ್ಲ ಎದುರಿಸಿ 10 ದಿನಗಳ ಕಾಲ ಅಧಿವೇಶನ ಯಶಸ್ವಿಯಾಗಿ ನಡೆಸಬೇಕಾದ ಸವಾಲುಸರ್ಕಾರದ ಮುಂದಿದೆ. 40ಕ್ಕೂ ಹೆಚ್ಚು ಸಂಘ-ಸಂಸ್ಥೆಗಳು ಪ್ರತಿಭಟನೆಗೆ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದಿವೆ.
ಒಮಿಕ್ರಾನ್ ಭೀತಿ ಮಧ್ಯೆಯೂ ಅಧಿವೇಶನ: ಬೆಳಗಾವಿಯಲ್ಲಿ 2018ರಿಂದ ಚಳಿಗಾಲ ಅಧಿ ವೇಶನ
ನಡೆದಿರಲಿಲ್ಲ. ಪ್ರವಾಹ, ಕೊರೊನಾದಿಂದಾಗಿ ಅಧಿವೇಶನ ರದ್ದುಗೊಳಿಸಿ ಬೆಂಗಳೂರಿನಲ್ಲೇ ನಡೆಸಲಾಗಿತ್ತು. ಈ ವರ್ಷ ಒಮಿಕ್ರಾನ್ ಭೀತಿ ಮಧ್ಯೆಯೂ ಗಡಿ ಜಿಲ್ಲೆಯಲ್ಲಿ ಡಿ.13ರಿಂದ 24ರವರೆಗೆ ನಡೆಯಲಿರುವM ಅಧಿವೇಶನ ವೇಳೆ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಅನೇಕ ಸಂಘ-ಸಂಸ್ಥೆಗಳು ತಯಾರಿಯಲ್ಲಿವೆ. ಸೋಮವಾರದಿಂದ ಪ್ರತಿಭಟನೆ ನಡೆಸಲು ಪೊಲೀಸರು ಆಯಾ ಸಂಘ-ಸಂಸ್ಥೆಗಳಿಗೆ ದಿನಾಂಕ ನಿಗದಿ ಮಾಡಿಕೊಟ್ಟಿದ್ದಾರೆ.
ಪ್ರತಿಪಕ್ಷಗಳಿಗೆ ಸರ್ಕಾರದ ಪ್ರತ್ಯುತ್ತರ: ಕಲಾಪ ವೇಳೆ ಸರ್ಕಾರವನ್ನು ತರಾಟೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಅನೇಕ ಅಸ್ತ್ರಗಳನ್ನು ಬಳಸಲಿದ್ದು, ಪ್ರತ್ಯುತ್ತರವಾಗಿ ಸರ್ಕಾರವೂ ಅನೇಕ ಪ್ರತಿ ಅಸ್ತ್ರಗಳನ್ನು ಸಿದ್ಧತೆ ಮಾಡಿಕೊಂಡಿದೆ. ಇಂತಹದರಲ್ಲಿ ಬೇಡಿಕೆ ಇಟ್ಟುಕೊಂಡು ಕಲಾಪದ ಹೊರಗೆ ನಡೆಯುವ ಜನಸಾಮಾನ್ಯರ ಪ್ರತಿಭಟನೆಗಳಿಗೂ ಸರ್ಕಾರಸ್ಪಂದಿಸಬೇಕಾದ ಅಗತ್ಯವೂ ಇದೆ. ಹೀಗಾಗಿ ಬೆಳಗಾವಿಯಲ್ಲಿ ಚಳಿಗಾಲ ಅಧಿ ವೇಶನ ಬಂತೆಂದರೆಸರ್ಕಾರ ಕಲಾಪದ ಹೊರಗೂ-ಒಳಗೂ ಇಕ್ಕಟ್ಟಿನಲ್ಲಿ ಸಿಲುಕುವುದು ಸಾಮಾನ್ಯವಾಗಿದೆ.
ಕೋವಿಡ್ ಭೀತಿಯಿಂದ ಕೋವಿಡ್ ನಿಯಮಾವಳಿಗಳನ್ನು ಪಾಲಿಸಬೇಕೆಂಬ ನಿಯಮ ನೀಡಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ನಿರ್ಧರಿಸಿದೆ. ಪ್ರತಿಭಟನೆ ವೇಳೆ 500ಕ್ಕಿಂತ ಹೆಚ್ಚು ಜನರು ಸೇರಬಾರದು. ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಬೇಕು. ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್ ಧರಿಸಿರಬೇಕೆಂಬ ವಿವಿಧ ನಿಯಮ ಹಾಕಲಾಗಿದೆ.
ರೈತ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಯಲಿದ್ದು, ಕೊಂಡಸಕೊಪ್ಪ ಗ್ರಾಮದ ಬಳಿಯಿರುವವಿಶಾಲ ಜಾಗದಲ್ಲಿ ವ್ಯವಸ್ಥೆ ಮಾಡಿಕೊಡಲಾಗಿದೆ. ಅತಿಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಪ್ರತಿಭಟನೆಗಳಿಗೂ ಕೊಂಡಸಕೊಪ್ಪದಲ್ಲಿಯೇ ವ್ಯವಸ್ಥೆ ಇದೆ. ಸುವರ್ಣ ವಿಧಾನಸೌಧ ಬಳಿಯ ಸುವರ್ಣ ಗಾರ್ಡನ್ ಬಳಿಯ ಜಾಗದಲ್ಲಿ ಅನೇಕ ಪ್ರತಿಭಟನೆಗಳು ನಡೆಯಲಿವೆ.
ಮೊದಲ ದಿನವೇ ಖಾನಾಪುರ ಶಾಸಕ ಡಾ| ಅಂಜಲಿ ನಿಂಬಾಳಕರ ಅವರು ಪಾದಯಾತ್ರೆ ಮೂಲಕ ಅಧಿ ವೇಶನಕ್ಕೆ ಆಗಮಿಸಲಿದ್ದಾರೆ. ಜಾಗತಿಕ ಲಿಂಗಾಯತ ಪಂಚಮಸಾಲಿ ಸಮಾಜ ವತಿಯಿಂದ ಪ್ರತಿಭಟನೆ ಇಲ್ಲ. ಆದರೆ ಕಾರ್ಯಕ್ರಮ ನಡೆಸಿ ಸರ್ಕಾರದ ಎದುರು ತಮ್ಮ ಬೇಡಿಕೆ ಮಂಡಿಸಲಿದೆ.
ಚಳಿಗಾಲ ಅಧಿವೇಶನ ವೇಳೆ ಪ್ರತಿಭಟನೆ ನಡೆಸಲು ಕಡ್ಡಾಯವಾಗಿ ಅನುಮತಿ ಪಡೆದಿರಬೇಕು. ಕೆಲ ದಿನಗಳ ಹಿಂದೆಯೇ ಈ ಬಗ್ಗೆ ಮಾಹಿತಿ ನೀಡಲಾಗಿತ್ತು. ಅದರಂತೆ ಸದ್ಯ 40ಕ್ಕೂ ಹೆಚ್ಚು ಸಂಘ-ಸಂಸ್ಥೆಗಳು ಪ್ರತಿಭಟಿಸಲು ಅನುಮತಿ ಕೋರಿವೆ. ಅಹಿತಕರ ಘಟನೆ ನಡೆಯದಂತೆ, ಕೋವಿಡ್ ನಿಯಮಾವಳಿಗಳನ್ನುಪಾಲಿಸಿಕೊಂಡು ಪ್ರತಿಭಟನೆ, ಧರಣಿ ನಡೆಸಬಹುದಾಗಿದೆ. ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. – ಡಾ|ಕೆ.ತ್ಯಾಗರಾಜನ್, ಪೊಲೀಸ್ ಕಮೀಷನರ್
-ಭೈರೋಬಾ ಕಾಂಬಳೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
ಬೆಳಗಾವಿ: ಪ್ರಾಚೀನ ಕಾಲದ ಬಾವಿಗಳಿಂದ ಪ್ರಸಿದ್ಧಿ ಹೊಂದಿದ ಅರಭಾಂವಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.