ಸೊರಬ: ಎತ್ತು ಮೈತೊಳೆಯಲು ಹೋಗಿ ವ್ಯಕ್ತಿ ಸಾವು
Team Udayavani, Dec 12, 2021, 3:38 PM IST
ಸೊರಬ: ನದಿಯಲ್ಲಿ ಎತ್ತುಗಳ ಮೈ ತೊಳೆಯಲು ಹೋಗಿ ಕಾಲು ಜಾರಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ತಾಲೂಕಿನ ಮೂಡಿ ಗ್ರಾಮದಲ್ಲಿ ನಡೆದಿದೆ.
ಮೂಡಿ ಗ್ರಾಮದ ಶಶಿಧರ ಗೂಳೇರ್ (42) ಮೃತ ದುರ್ಧೈವಿ. ಭಾನುವಾರ ಬೆಳಗ್ಗೆ ಗ್ರಾಮದ ವರದಾ ನದಿಯಲ್ಲಿ ಎತ್ತುಗಳ ಮೈತೊಳೆಯಲು ಹೋದ ಸಂದರ್ಭದಲ್ಲಿ ಶಶಿಧರ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಶವವನ್ನು ಪತ್ತೆಹಚ್ಚಿದ್ದಾರೆ.
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಕೆ. ಮಹಾಭಲೇಶ್ವರ, ಸಿಬ್ಬಂದಿ ಡಿ.ವಿ. ಮಂಜುನಾಥ, ವಿ. ನಾಗರಾಜ, ಪರಶುರಾಮ, ಡಿ.ಕೆ. ನಾಗರಾಜ, ಡಿ.ಬಿ. ರಾಜೇಂದ್ರ ಪಾಲ್ಗೊಂಡಿದ್ದರು.
ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಕ್ಕೆ ವಿದ್ಯಾರ್ಹತೆ ಸಡಿಲ: ಹೈಕೋರ್ಟ್‌ಗೆ ಅರ್ಜಿ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Max Movie: ಮ್ಯಾಕ್ಸ್ ಆಡಿಯೋ ಸದ್ದು ಜೋರು
Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ
Tabla Maestro; ಉಸ್ತಾದ್ ಜಾಕೀರ್ ಹುಸೇನ್ ದೈವೀ ಪುರುಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.