ವಿವಾಹ ನೋಂದಣಿಯಂತೆ ಮತಾಂತರ ಕೂಡ ನೋಂದಣಿ ಮಾಡುವ ಚಿಂತನೆ ನಡೆದಿದೆ: ಸಚಿವ ಮಾಧುಸ್ವಾಮಿ
Team Udayavani, Dec 12, 2021, 5:31 PM IST
ತುಮಕೂರು: ವಿವಾಹ ನೋಂದಣಿ ಮಾಡುವಂತೆ ಮತಾಂತರವನ್ನೂ ಕೂಡ ನೋಂದಣಿ ಮಾಡುವಂತಹ ಪದ್ದತಿಯನ್ನು ಮತಾಂತರ ನಿಷೇಧ ಕಾಯಿದೆಯಲ್ಲಿ ತರುವ ಚಿಂತನೆ ಇದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆ ಯ ಚಿಕ್ಕನಾಯಕನಹಳ್ಳಿ ತಾಲೂಕಿನ ಜೆ.ಸಿ.ಪುರದಲ್ಲಿ ಮಾತನಾಡಿದ ಅವರು, ಮದುವೆ ನೋಂದಣಿ ಪ್ರಕ್ರಿಯೆಯಲ್ಲಿ ಹೇಗೆ ನೋಟಿಸ್ ಬೋರ್ಡ್ಗೆ ವಿವಾಹಿತರ ವಿವರ ಹಾಕುತ್ತೇವೆಯೋ ಹಾಗೆಯೇ ಮತಾಂತರಗೊಂಡವರ ವಿವರವನ್ನೂ ನೋಟೀಸ್ ಬೋರ್ಡಗೆ ಹಾಕಿ ಆಕ್ಷೇಪಣೆಗೆ ಸಮಯವಕಾಶ ಕೊಡಲಾಗುತ್ತದೆ. ಯಾವುದೇ ಆಕ್ಷೇಪಣೆ ಇಲ್ಲದಿದ್ದರೆ ಅಂಥವರ ಅರ್ಜಿಯನ್ನು ಪುರಸ್ಕರಿಸಲಾಗುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಯಾರಿಗೂ ನೋವು ಆಗದ, ಅಡಚಣೆ ಆಗದ ರೀತಿಯಲ್ಲಿ ಕಾಯಿದೆ ಇರಬೇಕು ಎಂದು ಯೋಚಿಸಿದ್ದೇನೆ ಆ ನಿಟ್ಟಿನಲ್ಲಿ ಪರಮಾರ್ಶೆ ನಡೆದಿದೆ ಎಂದರು. ಬಲವಂತ ಹಾಗೂ ಆಮಿಷ ಒಡ್ಡಿ ಮಾಡುವ ಮತಾಂತರ ಈಗಾಗಲೇ ನಿಷೇಧ ಇದ್ದು ಮತಾಂತರ ಮಾಡಿದವರಿಗೆ ಯಾವ ರೀತಿಯ ಶಿಕ್ಷೆ ಆಗಬೇಕು ಅನ್ನೋದು ಚರ್ಚೆ ನಡೆಯಬೇಕಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.
ಸ್ವಯಂಪ್ರೇರಿತ ಮತಾಂತರಕ್ಕೂ ರೂಪುರೇಷೆ ಸಿದ್ದಗೊಳ್ಳುತಿದ್ದು, ಮತಾಂತರ ಆಗುವವನೂ ಅರ್ಜಿ ಸಲ್ಲಿಸುವ ವ್ಯವಸ್ಥೆ ಜಾರಿಯಾಗಲಿದೆ,ಬಲವಂತದ ಮತಾಂತರ ಅಲ್ಲ ಎಂದು ತಿಳಿದ ಮೇಲೆ ಜಿಲ್ಲಾಧಿಕಾರಿಗಳು ಮತಾಂತರದ ಅರ್ಜಿ ಪುರಸ್ಕರಿಸಬಹುದಾಗಿದೆ. ಜತೆಗೆ,ಒಮ್ಮೆ ಮತಾಂತರ ಗೊಂಡ ವ್ಯಕ್ತಿ ಮೂಲ ಜಾತಿ,ಧರ್ಮವನ್ನು ಕಳೆದುಕೊಳ್ಳುತ್ತಾನೆ ಎಂದು ಮಾಹಿತಿನೀಡಿದ್ದಾರೆ.
ಪರಿಶಿಷ್ಟ ಜಾತಿ ವ್ಯಕ್ತಿ ಕ್ರಿಶ್ಚಿಯನ್ ಗೆ ಮತಾಂತರಗೊಂಡರೆ ಆತ ಅಲ್ಪ ಸಂಖ್ಯಾತ ಎಂದಾಗುತ್ತದೆ, ಆತನ ಮೂಲ ಜಾತಿ ಪ್ರಮಾಣ ಪತ್ರ ಬದಲಾಗುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ಬಸನಗೌಡ ಪಾಟೀಲ್ ಯತ್ನಾಳ್ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP: ಬಸನಗೌಡ ಪಾಟೀಲ್ ಯತ್ನಾಳ್ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ
Fraud Case: ಎಪಿಕೆ ಫೈಲ್ ಕಳುಹಿಸಿ 1.31 ಲ.ರೂ. ವಂಚನೆ
Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ
Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ
Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್ಗೆ ಕಾರಾಗೃಹ ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.