ಸರಾಗವಾಗಿ ನಡೆಯಲಿ ಬೆಳಗಾವಿ ಚಳಿಗಾಲದ ಅಧಿವೇಶನ


Team Udayavani, Dec 13, 2021, 6:00 AM IST

ಸರಾಗವಾಗಿ ನಡೆಯಲಿ ಬೆಳಗಾವಿ ಚಳಿಗಾಲದ ಅಧಿವೇಶನ

ಕುಂದಾನಗರಿ ಬೆಳಗಾವಿಯ ಸುವರ್ಣಸೌಧದಲ್ಲಿ ಎರಡು ವರ್ಷಗಳ ಬಳಿಕ ರಾಜ್ಯ ವಿಧಾನಮಂಡಲ ಅಧಿವೇಶನ ಸೋಮವಾರ ಆರಂಭ ವಾಗಲಿದ್ದು ಆಡಳಿತ ಹಾಗೂ ವಿಪಕ್ಷ ಪ್ರತಿಷ್ಠೆಗೆ ಬೀಳದೆ ಕಲಾಪ ಅರ್ಥಪೂರ್ಣ ವಾಗಿಸಬೇಕಾಗಿದೆ. ಉತ್ತರ ಕರ್ನಾಟಕ ಭಾಗದ ಜನ ರೊಂದಿಗೆ ಸರಕಾರ ಇದೆ ಎಂಬ ವಿಶ್ವಾಸ ಮೂಡಿಸುವುದು. ಬೆಳಗಾವಿ ಗಡಿ ವಿಚಾರದಲ್ಲಿ ಆಗಾಗ್ಗೆ ಚಕಾರ, ಖ್ಯಾತೆ ತೆಗೆಯುವ ಎಂಇಎಸ್‌ಗೆ ಬೆಳಗಾವಿ ಅಖಂಡ ಕರ್ನಾಟಕದ್ದು ಎಂಬ ಸಂದೇಶ ರವಾನಿಸುವ ಸಲುವಾಗಿ ಉತ್ತರ ಕರ್ನಾಟಕ ಭಾಗದ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಿ ಅಧಿವೇಶನ ನಡೆಸಲು ರಾಜ್ಯ ಸರಕಾರ ತೀರ್ಮಾನಿಸಿತ್ತು.

ಕಳೆದ ಹದಿನೈದು ವರ್ಷಗಳಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸು ವುದರಿಂದ ಆ ಭಾಗದ ಜನರಿಗೆ ಸ್ವಲ್ಪ ಮಟ್ಟಿನ ಆಶಾಭಾವನೆ ಇದೆ ಯಾದರೂ ಒಂಬತ್ತು ಅಧಿವೇಶನ ನಡೆದರೂ ಬೇಡಿಕೆಗಳು ಹಾಗೆಯೇ ಉಳಿದಿವೆ ಎಂಬ ಅಸಮಾಧಾನವೂ ಇದೆ.

ಕೃಷ್ಣಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಎಂದು ಘೋಷ ಣೆ ಯಾಗಬೇಕು ಅದಕ್ಕಾಗಿ ರಾಜ್ಯ ಸರಕಾರ ಕೇಂದ್ರದ ಮೇಲೆ ಒತ್ತಡ ಹೇರಬೇಕು. ಕಳಸಾ ಬಂಡೂರಿ ನಾಲಾ ಕಾಮಗಾರಿ ಆರಂಭವಾಗಬೇಕು. ಡಾ| ಡಿ.ಎಂ.ನಂಜುಂಡಪ್ಪ ವರದಿ ಅನ್ವಯ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಬೇಕು. ಒಟ್ಟಾರೆ ಸಮಗ್ರ ಉತ್ತರ ಕರ್ನಾಟಕ ಅಭಿವೃದ್ಧಿಗೆ ನೀಲನಕ್ಷೆ ರೂಪಿಸಬೇಕು ಎಂಬುದು ಜನರ ಬೇಡಿಕೆ. ಈ ನಿಟ್ಟಿನಲ್ಲಿ ಹದಿನೈದು ವರ್ಷಗಳಲ್ಲಿ ಆಡಳಿತ ನಡೆಸಿದ ಪಕ್ಷಗಳು ಕಾರ್ಯೋನ್ಮುಖವಾಗಬೇಕಿತ್ತು. ಸುವರ್ಣಸೌಧದ ಅಧಿವೇಶನದಲ್ಲಿ ಆ ಬಗ್ಗೆ ಅರ್ಥಪೂರ್ಣ ಚರ್ಚೆ, ಸಮಸ್ಯೆಗಳಿಗೆ ತಾರ್ಕಿಕ ಅಂತ್ಯಕಾಣಿಸುವ ಕೆಲಸ ಆಗಬೇಕಿತ್ತು. ಆದರೆ ಅದು ಆಗಲಿಲ್ಲ. ಇದರಲ್ಲಿ ಆಡಳಿತ ಹಾಗೂ ವಿಪಕ್ಷಗಳ ಹೊಣೆಗಾರಿಕೆಯೂ ಇತ್ತು.

ಹೈದರಾಬಾದ್‌ ಕರ್ನಾಟಕ ಕಲ್ಯಾಣ ಕರ್ನಾಟಕವಾಯಿತು, ಮುಂಬಯಿ ಕರ್ನಾಟಕ ಕಿತ್ತೂರು ಕರ್ನಾಟಕ ವಾಯಿತು. ಆದರೆ ಅನುದಾನ ಮಾತ್ರ ಬರಲಿಲ್ಲ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಹೊಸ ಅಧ್ಯಕ್ಷರು ಹಾಗೂ ಸಮಿತಿ ನೇಮಕಗೊಂಡಿಲ್ಲ. ಈ ವರ್ಷದ ಬಜೆಟ್‌ನಲ್ಲಿ ಮೀಸಲಿ ಟ್ಟಿರುವ 1,500 ಕೋಟಿ ರೂ. ಹಣದಲ್ಲಿ ಇದುವರೆಗೂ 100 ಕೋಟಿ ರೂ. ಮಾತ್ರ ವೆಚ್ಚವಾಗಿದೆ. ಅದೂ ಮುಂದು ವರಿದ ಕಾಮಗಾರಿಗಳಿಗಾಗಿ ಮಾತ್ರ, ಉಳಿದ ಮೊತ್ತದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಕ್ರಿಯಾ ಯೋಜನೆಯೂ ತಯಾರಾಗಿಲ್ಲ. ಹೀಗಾದರೆ ಅಭಿವೃದ್ಧಿ ಹೇಗೆ ಸಾಧ್ಯ ಎಂಬ ಪ್ರಶ್ನೆಯೂ ಇದೆ.

ಇದನ್ನೂ ಓದಿ:ಇಂಗ್ಲಿಷ್‌ನ ಪ್ರಸಿದ್ಧ ಪುಸ್ತಕವಾಗಿರುವ ಹ್ಯಾರಿ ಪಾಟರ್‌ ಪುಸ್ತಕಕ್ಕೆ 3.5 ಕೋಟಿ ರೂ!

ಹೀಗಾಗಿ ರಾಜ್ಯ ಸರಕಾರ ಕೇವಲ ಅಧಿವೇಶನ ನಡೆಸುವುದಷ್ಟೇ ಅಲ್ಲ. ಆ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ತೀರ್ಮಾನ ಕೈಗೊಳ್ಳಬೇಕು. ಕೈಗೊಂಡ ನಿರ್ಧಾರಗಳನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಬದ್ಧತೆ ಮತ್ತು ಇಚ್ಚಾಶಕ್ತಿ ತೋರಬೇಕಾಗಿದೆ.

ಹತ್ತು ದಿನಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಾದರೂ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಅರ್ಥಪೂರ್ಣ ಚರ್ಚೆಯಾಗಿ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸಗಳು ಆಗಲಿ. ಆಡಳಿತ ಹಾಗೂ ವಿಪಕ್ಷಗಳು ಪ್ರತಿಷ್ಠೆಗೆ ಬೀಳದೆ ಉತ್ತರ ಕರ್ನಾಟಕ ಭಾಗದಲ್ಲಿ ಅಧಿವೇಶನ ನಡೆಸಲು ತೀರ್ಮಾನಿಸಿದ ಉದ್ದೇಶ ಸಾಕಾರಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿ. ಪ್ರತಿಭಟನೆ, ಧರಣಿಗೆ ಕಲಾಪ ಮೊಟಕಾಗುವ ಪರಿಸ್ಥಿತಿ ನಿರ್ಮಾಣವಾಗದಂತೆ ನೋಡಿಕೊಳ್ಳಲಿ.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

school

Karnataka; ಶಾಲಾ ಆಸ್ತಿ ಸಂರಕ್ಷಣೆ ಅಭಿಯಾನ ಎಲ್ಲ ಇಲಾಖೆಗಳಿಗೂ ಮಾದರಿ

Forest

Forest: ಅರಣ್ಯದಲ್ಲಿ ನಿರಂತರ ಗಣಿಗಾರಿಕೆ: ಸರಕಾರ ಚರ್ಚಿಸಿ ನಿರ್ಧರಿಸಲಿ

School-Chikki

PM Poshan: ಶಾಲಾ ಮಕ್ಕಳ ಮೊಟ್ಟೆಗೂ ಕನ್ನ ತಪ್ಪಿತಸ್ಥರ ವಿರುದ್ಧ ಕ್ರಮ ಅಗತ್ಯ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

complaint

Kundapura: ಹಲ್ಲೆ, ಗಾಯ; ದೂರು ದಾಖಲು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

byndoor

Kundapura: ಪ್ರತ್ಯೇಕ ಅಪಘಾತ ಪ್ರಕರಣ; ಗಾಯ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.