ಕೋವಿಡ್ ಜಾಗೃತಿಗೆ ಕೆಎಸ್ಸಾರ್ಟಿಸಿ ಸಾಥ್
Team Udayavani, Dec 13, 2021, 7:30 AM IST
ಉಡುಪಿ: ಕೋವಿಡ್-19 ಲಸಿಕೆಯ 1 ಹಾಗೂ 2ನೇ ಡೋಸ್ ವಿತರಣೆಯಲ್ಲಿ ಶೇ. 100 ಪ್ರತಿಶತ ಪ್ರಗತಿ ಸಾಧಿಸಲು ಜಿಲ್ಲಾಡಳಿತವು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಅವಿರತವಾಗಿ ಕಾರ್ಯನಿರ್ವಹಿಸುತ್ತಿದ್ದು ಈಗ ಕೆಎಸ್ಸಾರ್ಟಿಸಿ ಕೈಜೋಡಿಸಿದೆ.
ರಾಜ್ಯದಲ್ಲಿ ಓಡಾಡುವ ಕೆಎಸ್ಸಾರ್ಟಿಸಿ ಬಸ್‌ಗಳ ಟಿಕೆಟ್‌ಗಳಲ್ಲಿ ಕಡ್ಡಾಯವಾಗಿ 2 ಡೋಸ್ ಲಸಿಕೆ ಹಾಕಿಕೊಳ್ಳಬೇಕು, ಮಾಸ್ಕ್ ಹಾಕಿಕೊಳ್ಳಬೇಕು ಎಂಬ ಬರಹಗಳನ್ನು ಮುದ್ರಿಸಲಾಗಿದೆ. ಈ ಮುಖಾಂತರ ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಲ್ಲಿ ಹಾಗೂ ಜನರಲ್ಲಿ ಕೋವಿಡ್ -19ರ ಬಗ್ಗೆ ಜಾಗರೂಕತೆಯನ್ನು ಮೂಡಿಸುವ ನಿಟ್ಟಿನಲ್ಲಿ ನವೀನ ಶೈಲಿಯ ಯೋಜನೆಯನ್ನು ಹಮ್ಮಿಕೊಂಡಿದೆ. ಸಾರಿಗೆ ಇಲಾಖೆಯ ಕಾರ್ಯವನ್ನು ಜಿಲ್ಲಾಧಿಕಾರಿಗಳು ಶ್ಲಾಘಿ ಸಿದ್ದಾರೆ.
ಇದೇ ರೀತಿಯಲ್ಲಿ ಇತರ ಇಲಾಖೆಗಳು/ನಿಗಮಗಳು ಸಾರ್ವಜನಿಕರಲ್ಲಿ ಕೋವಿಡ್-19ರ ಬಗ್ಗೆ ಜಾಗೃತಿಯನ್ನು ಮೂಡಿಸುವಲ್ಲಿ ಕಾರ್ಯಪ್ರವೃತ್ತರಾಗುವಂತೆ ಹಾಗೂ ಮಾಲ್‌ಗಳಲ್ಲಿ, ಸಿನೆಮಾ ಮಂದಿರಗಳಲ್ಲಿ ಮತ್ತು ಎಲ್ಲ ಅಂಗಡಿಗಳಲ್ಲಿ ಗ್ರಾಹಕರಿಗೆ ನೀಡುವ ಬಿಲ್ಲು / ಸ್ವೀಕೃತಿಗಳಲ್ಲಿ ಇದೇ ಮಾದರಿಯಲ್ಲಿ ಜಾಗೃತಿಯನ್ನು ಮೂಡಿಸುವ ಬರಹಗಳನ್ನು ನಮೂದಿಸುವಂತೆ ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.