ಆರೋಗ್ಯ ಸೇವೆಯ ಮೂಲಕ ಆರೋಗ್ಯ ಭಾರತಿ ಸಂಘಟನೆಯನ್ನು ಕಟ್ಟಿ ಬೆಳೆಸೋಣ- ಸುಧಾಕರ ಶೆಟ್ಟಿ


Team Udayavani, Dec 13, 2021, 1:59 PM IST

ಆರೋಗ್ಯ ಸೇವೆಯ ಮೂಲಕ ಆರೋಗ್ಯ ಭಾರತಿ ಸಂಘಟನೆಯನ್ನು ಕಟ್ಟಿ ಬೆಳೆಸೋಣ- ಸುಧಾಕರ ಶೆಟ್ಟಿ

ದಾಂಡೇಲಿ: ಎಲ್ಲದಕ್ಕೂ ಆರೋಗ್ಯವೆ ಮೂಲ. ಆರೋಗ್ಯವಿದ್ದಲ್ಲಿ ಸುಖ, ಶಾತಿ, ಸಮೃದ್ದಿ ನೆಲೆಗೊಳ್ಳಲು ಸಾಧ್ಯವಿದೆ.  ಸಮಾಜದಲ್ಲಿ ಆರೋಗ್ಯ ಜಾಗೃತಿಯ ಜೊತೆಗೆ ಸಂಕಷ್ಟದ ಸಂದರ್ಭದಲ್ಲಿ ಆರೋಗ್ಯ ಸೇವೆಯನ್ನು ನೀಡುವ ಮಹತ್ವದ ಸಂಕಲ್ಪದಡಿ ದಾಂಡೇಲಿ-ಜೋಯಿಡಾ ತಾಲೂಕು ಮಟ್ಟದ ಆರೋಗ್ಯ ಭಾರತಿ ಸಂಘಟನೆಯನ್ನು ಜನಸ್ನೇಹಿ ಮತ್ತು ಆರೋಗ್ಯ ಸಂರಕ್ಷಣಾ ಸಂಘಟನೆಯಾಗಿ ಕಟ್ಟಿ ಬೆಳೆಸೋಣ ಎಂದು ದಾಂಡೇಲಿ – ಜೋಯಿಡಾ ತಾಲೂಕು ಮಟ್ಟದ ಆರೋಗ್ಯ ಭಾರತಿ ಸಂಘಟನೆಯ ಅಧ್ಯಕ್ಷರಾದ ಸುಧಾಕರ ಶೆಟ್ಟಿಯವರು ಹೇಳಿದರು.

ಅವರು ನಗರದ ರೋಟರಿ ಶಾಲೆಯ ಸಭಾಭವನದಲ್ಲಿ ನೂತನವಾಗಿ ರಚನೆಯಾದ ದಾಂಡೇಲಿ – ಜೋಯಿಡಾ ತಾಲೂಕು ಮಟ್ಟದ ಆರೋಗ್ಯ ಭಾರತಿ ಸಂಘಟನೆಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು. ಆರೋಗ್ಯ ಸೇವೆ ನೀಡಲು ಆರೋಗ್ಯ ಭಾರತಿ ಸಂಘಟನಯೆ ಮೂಲಕ ಮಹತ್ವದ ಅವಕಾಶವಿದೆ. ಆರೋಗ್ಯ ಸೇವೆ ನಿಜವಾಗಿಯೂ ಪುಣ್ಯದ ಸೇವೆಯಾಗಿದ್ದು, ಸೇವೆ ಎಂಬ ಯಜ್ಞದಲ್ಲಿ ನಮ್ಮನ್ನು ನಾವು ಸಮರ್ಪಣಾಭಾವದಿಂದ ಸಮರ್ಪಿಸಿಕೊಳ್ಳುವುದರ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪ್ರಾಂಜಲ ಮನಸ್ಸಿನಿಂದ ಶ್ರಮಿಸೋಣ ಎಂದು ಕರೆ ನೀಡಿ, ಎಲ್ಲರ ಸಹಕಾರ ಕೋರಿದರು.

ಆರೋಗ್ಯ ಭಾರತಿ ಸಂಘಟನೆಯ ನೂತನ ಘಟಕವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ನಗರದ ಶೇಖರ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಶೇಖರ ಅವರು ಆರೋಗ್ಯ ಭಾರತಿ ಸಂಘಟನೆಯ ದ್ಯೇಯೋದ್ದೇಶಗಳು ಸಾಮಾಜಿಕ ಕಾಳಜಿಯನ್ನು ಸಾದರಪಡಿಸುತ್ತಿದೆ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಹಾಗೂ ಮುನ್ನೆಚ್ಚರಿಕೆ ಅಗತ್ಯ. ಈ ದಿಸೆಯಲ್ಲಿ ನೂತನ ಆರೋಗ್ಯ ಭಾರತಿ ಘಟಕ ದಾಂಡೇಲಿ ಮತ್ತು ಜೋಯಿಡಾ ತಾಲೂಕಿನಲ್ಲಿ ಆರೋಗ್ಯ ಸೇವೆಯ ಮೂಲಕ ಜನಮನದ ಸಂಘಟನೆಯಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಹಿರಿಯರಾದ ವಾಸುದೇವ ಪ್ರಭು ಅವರು ಆರೋಗ್ಯ ಸೇವೆ ನೀಡುವಂತಹ ಪುಣ್ಯದ ಕಾರ್ಯ ಇನ್ನೊಂದಿಲ್ಲ. ಪವಿತ್ರ ಕಾರ್ಯಕ್ಕಾಗಿಯೆ ಆರೋಗ್ಯ ಭಾರತಿ ಜನ್ಮತೆಳೆದಿದೆ ಎಂದರು.  ಭಜರಂಗ ದಳದ ಅಖಿಲ ಭಾರತೀಯ ಸಹ ಸಂಘಟನಾ ಕಾರ್ಯದರ್ಶಿ ಸೂರ್ಯನಾರಾಯಣ, ಆರ್.ಎಸ್.ಎಸ್. ಜಿಲ್ಲಾ ಸಹ ಸಂಚಾಲಕರಾದ ರಾಹು ಸಾಹೇಬ್ ಅವರುಗಳು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ಆರೋಗ್ಯ ಭಾರತಿ ಪ್ರಮುಖರಾದ ನಾಗೇಶ ಪಟಗಾರ ಅವರು ಆರೋಗ್ಯ ಭಾರತಿ ಸಂಘಟನೆಯ ಉದ್ದೇಶಗಳು ಮತ್ತು ಕಾರ್ಯನಿರ್ವಹಣೆಯನ್ನು ವಿವರಿಸಿ, ಜಾತಿ, ಮತ, ಬೇಧವಿಲ್ಲದೇ ಸ್ಥಳೀಯವಾಗಿ ಹಾಗೂ ಸಂಕಷ್ಟದ ಸಂದರ್ಭದಲ್ಲಿ ಜನಮುಖಿಯಾಗಿ ಆರೋಗ್ಯ ಸೇವೆ ನೀಡುವ ಮಹತ್ವದ ಆಶಯದಡಿ ಆರೋಗ್ಯ ಭಾರತಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ಆರೋಗ್ಯ ಭಾರತಿ ಸಂಘಟನೆಯ ಸದಸ್ಯ ಅರುಣ್ ನಾಯ್ಕ ಸ್ವಾಗತಿಸಿ, ನಿರೂಪಿಸಿದ ಕಾರ್ಯಕ್ರಮಕ್ಕೆ ಸಮಿತಿಯ ಉಪಾಧ್ಯಕ್ಷ ವಿದ್ಯಾರಣ್ಯ ಜಡೆ ವಂದಿಸಿದರು.

ಟಾಪ್ ನ್ಯೂಸ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Sandalwood: ತೆರೆಮೇಲೆ ʼಅನಾಥʼನ ಕನಸು

Sandalwood: ತೆರೆಮೇಲೆ ʼಅನಾಥʼನ ಕನಸು

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.