![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Dec 13, 2021, 3:02 PM IST
Representative Image used
ಮೈಸೂರು: ಮದ್ಯದ ಅಮಲಿನಲ್ಲಿದ್ದ ಇಬ್ಬರು ಜತೆಗಿದ್ದ ಮತ್ತಿಬ್ಬರ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ಶನಿವಾರ ಸಂಜೆ ಬೋಗಾದಿ ಬಳಿ ನಡೆದಿದೆ. ಮೈಸೂರು ತಾಲೂಕಿನ ಕೊತ್ತೆಗಾಲ ಗ್ರಾಮದ ಕಟ್ಟಡ ಕಾರ್ಮಿಕರಾದ ರವಿ, ಕೃಷ್ಣ ಕೊಲೆಯಾದವರು.
ಈ ಇಬ್ಬರು ಶನಿವಾರ ಸಂಜೆ ಕೆಲಸ ಮುಗಿಸಿದ ಬಳಿಕ ಬೊಗಾದಿ ಬಳಿಯ ರಿಂಗ್ ರಸ್ತೆ ಸಮೀಪದ ಬಾರ್‌ಗೆ ತೆರಳಿ ಕಂಠಪೂರ್ತಿ ಕುಡಿದಿದ್ದಾರೆ. ಈ ವೇಳೆ ಇವರಿಗೆ ಪರಿಚಯವಿದ್ದ ಮತ್ತಿಬ್ಬರು ಜತೆಗೂಡಿದ್ದು, ಎಲ್ಲರೂ ಒಟ್ಟಿಗೆ ಮದ್ಯ ಸೇವಿಸಿದ್ದಾರೆ. ಈ ವೇಳೆ ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಸಣ್ಣ ಪ್ರಮಾಣದಲ್ಲಿ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿದೆ.
ಈ ವೇಳೆ ಇಬ್ಬರು ಸೇರಿಕೊಂಡು ಸಮೀಪದಲ್ಲೇ ಇದ್ದ ರಾಡ್‌ನಿಂದ ರವಿ ಹಾಗೂ ಕೃಷ್ಣ ಮೇಲೆ ಹಲ್ಲೆ ನಡೆಸಿದ್ದಾರೆ. ತೀವ್ರ ಹಲ್ಲೆಗೊಳಗಾದ ರವಿ ಹಾಗೂ ಕೃಷ್ಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಕ್ಷಣ ಬಾರ್ ನಲ್ಲಿದ್ದ ಕೆಲವರು ಹಲ್ಲೆ ಮಾಡಿದವರನ್ನು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಮಿಸಿದ ಪೊಲೀಸರು ಇಬ್ಬರನ್ನೂ ವಶಕ್ಕೆ ತೆಗೆದುಕೊಂಡು, ಶವಗಳನ್ನು ಕೆ.ಆರ್.ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ.
ಆದರೆ ಆರೋಪಿಗಳ ಹೆಸರು ಮತ್ತು ಇತರೆ ಮಾಹಿತಿಯನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಭಾನುವಾರ ಬೆಳಗ್ಗೆ ಶವಗಳ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು. ಪ್ರಕರಣ ಕುರಿತು ಸರಸ್ವತಿಪುರಂ ಠಾಣೆ ಪೊಲೀಸರು ತನಿಖೆ ಮುಂದುವರಿದಿದೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.