ಕಿಸಾನ್‌ ಸಭಾ ಘಟಕದ ನಿರಶನ ನಾಲ್ಕನೇ ದಿನಕ್ಕೆ


Team Udayavani, Dec 14, 2021, 11:04 AM IST

6farmer

ಆಳಂದ: ತಾಲೂಕಿನ ಎಲ್ಲ ಗ್ರಾಪಂ ವ್ಯಾಪ್ತಿಗಳಲ್ಲಿ ವೈಜ್ಞಾನಿಕವಾಗಿ ಅಂತರ್ಜಲ ಪೂರಕವಾಗುವಂತೆ ಹಾಗೂ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಉದ್ಯೋಗ ಖಾತ್ರಿ ಕಾಮಗಾರಿ ಪ್ರಾರಂಭಿಸುವ ತನಕ್ಕೆ ಧರಣಿ ಸತ್ಯಾಗ್ರಹ ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಅಖೀಲ ಭಾರತ ಕಿಸಾನ್‌ ಸಭಾ ತಾಲೂಕು ಘಟಕದ ಮುಖಂಡರು ಹೇಳಿದರು.

ಪಟ್ಟಣದ ತಾಪಂ ಕಚೇರಿ ಮುಂದೆ ರೈತ ಪರ ಬೇಡಿಕೆಗೆ ಆಗ್ರಹಿಸಿ ಕಿಸಾನ್‌ ಸಭಾವು ಶನಿವಾರದಿಂದ ಆರಂಭಿಸಿದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಸೋಮವಾರ 3ನೇ ದಿನಕ್ಕೆ ಕಾಲಿಟ್ಟಿದೆ. ಧರಣಿ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ್ದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನಾಗಮೂರ್ತಿ ಕೆ. ಶೀಲವಂತ ಅವರು ಸತ್ಯಾಗ್ರಹಿಗಳ ಬೇಡಿಕೆಯನ್ನು ಆಹ್ವಾಲು ಸ್ವೀಕರಿಸಿದರು.

ಕಾಮಗಾರಿ ಕೈಗೊಳ್ಳಲು ಸಂಬಂಧಿತ ಗ್ರಾಪಂ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಸತ್ಯಾಗ್ರಹ ಹಿಂದಕ್ಕೆ ಪಡೆಯಬೇಕು ಎಂಬ ಕೋರಿಕೆಗೆ ಒಪ್ಪದ ಸತ್ಯಾಗ್ರಹ ನಿರತರು, ಪ್ರತಿ ಗ್ರಾಪಂಗಳಲ್ಲಿ ತಕ್ಷಣಕ್ಕೆ ಉದ್ಯೋಗ ಖಾತ್ರಿ ಕಾಮಗಾರಿ ಆರಂಭಿಸುವತನಕ ಹಾಗೂ ಇನ್ನೂಳಿದ ಬೇಡಿಕೆಗಳನ್ನು ಈಡೇರಿಸುವವರೆಗೆ ಧರಣಿ ಸತ್ಯಾಗ್ರಹ ಕೈಬಿಡುವುದಿಲ್ಲ. ಅನೇಕ ಬಾರಿ ಭರವಸೆ ಈಡೇರಿಸಿಲ್ಲ. ಹೀಗಾಗಿ ಸತ್ಯಾಗ್ರಹ ಮುಂದುವರಿಸಲಾಗುವುದು ಎಂದು ಘೋಷಿಸಿದರು.

ಕಾಮಗಾರಿ ಹೆಸರಿನಲ್ಲಿ ಹಣ ದುರ್ಬಳೆಕೆ ಆಗಿದೆ. ಈ ಕುರಿತು ತನಿಖೆ ನಡೆಸಬೇಕು ಎಂದು ನಿರಂತರ ಹೋರಾಟ, ಸತ್ಯಾಗ್ರಹ, ಗ್ರಾಪಂ ವರೆಗೆ ಜೀಪ್‌ ಜಾಥಾ ಮೂಲಕ ಒತ್ತಾಯಿಸಿದರೂ ಸಹ ಮೇಲಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಸಾನ್‌ ಸಭಾ ತಾಲೂಕು ಅಧ್ಯಕ್ಷ ಚಂದ್ರಕಾಂತ ಖೋಬ್ರೆ ಆರೋಪಿಸಿದರು.

ಪ್ರಸಕ್ತ ದಿನಗಳಲ್ಲಿ ಎಲ್ಲೆಡೆ ಟ್ರ್ಯಾಕ್ಟರ್‌ ಗಳ ಮೂಲಕ ಕೃಷಿ ನಡೆಯುತ್ತಿವೆ. ಹೀಗಾಗಿ ರೈತರ ಹೊಲಕ್ಕೆ ರಸ್ತೆ ಇಲ್ಲದೆ ಬೆಳೆ ಬೆಳೆಯಲು ಕಷ್ಟವಾಗಿದ್ದು, ಸಾಗುವಳಿಗೆ ಟ್ರ್ಯಾಕ್ಟರ್‌ ಸಂಚಾರ ಅನಿವಾರ್ಯವಾಗಿದೆ. ಈ ಕಾರಣಕ್ಕಾಗಿ ಉದ್ಯೋಗ ಖಾತ್ರಿಯಲ್ಲಿ ನಮ್ಮ ಹೊಲ ನಮ್ಮ ರಸ್ತೆ ಕಾಮಗಾರಿ ಮೂಲಕ ರಸ್ತೆ ಕೈಗೊಂಡು ವಾಹನಗಳ ಸಂಚಾರಕ್ಕೆ ಮತ್ತು ಕೂಲಿ ಕಾರ್ಮಿಕರಿಗೆ ಕೆಲಸ ನೀಡುವ ಜೊತೆಗೆ ಸಕಾಲಕ್ಕೆ ಕೂಲಿ ಒದಗಿಸಬೇಕು ಎಂದು ಒತ್ತಾಯಿಸಿದರು.

ಸತ್ಯಾಗ್ರಹದಲ್ಲಿ ಮೌಲಾ ಮುಲ್ಲಾ, ಮಲ್ಲಿನಾಥ ಯಲಶೆಟ್ಟಿ, ಚಂದ್ರಕಾಂತ ಖೋಬ್ರೆ, ದತ್ತಾತ್ರೆಯ ಜೀರೋಳೆ, ಶಿವಾಜಿ ಬಿರಾಜದಾರ, ರಾಮಮೂರ್ತಿ ಕಾಯಕವಾಡ, ರಂಜಿತ ಕಾಂಬಳೆ, ಫಕ್ರೋದ್ದೀನ್‌ ಗೋಳಾ ಇದ್ದರು.

ಟಾಪ್ ನ್ಯೂಸ್

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.