ಕರಾವಳಿಯಲ್ಲಿ ಕೋಮು ಸಾಮರಸ್ಯ ಕೆಡಿಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ
Team Udayavani, Dec 15, 2021, 4:29 PM IST
ಬೆಳಗಾವಿ: ಕರಾವಳಿ ಜಿಲ್ಲೆಯಲ್ಲಿ, ಕೋಮು ಸೌಹಾರ್ದವನ್ನು ಕಲುಷಿತ ಗೊಳಿಸುವ, ಸಮಾಜ ವಿರೋಧಿ ಶಕ್ತಿಗಳನ್ನು ನಿರ್ದಾಕ್ಷಿಣ್ಯವಾಗಿ, ಬಗ್ಗು ಬಡಿಯಲಾಗುವುದು, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಬುಧವಾರ ವಿಧಾನಸಭೆಯಲ್ಲಿ ತೀವ್ರ ಎಚ್ಚರಿಕೆ ನೀಡಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ, ಕಾಂಗ್ರೆಸ್ ಸದಸ್ಯ ಯು ಟಿ ಖಾದರ್ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಚಿವರು, “ಕರಾವಳಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಕೋಮು ಸಾಮರಸ್ಯ ವಾತಾವರಣವನ್ನು ಕೆಡಿಸುವ, ಕೆಲವರ, ಪ್ರಯತ್ನಗಳ ಬಗ್ಗೆ ವರದಿಗಳನ್ನು ಗಮನಿಸಿದ್ದೇನೆ, ಅವುಗಳಿಗೆ ನಿಯಂತ್ರಣ ಹೇರುವ ಬಗ್ಗೆ ಗಂಭೀರ ಪ್ರಯತ್ನ ನಡೆದಿದೆ” ಎಂದು ತಿಳಿಸಿದರು.
ಇತ್ತೀಚೆಗೆ, ಉಪ್ಪಿನಂಗಡಿ ಪಟ್ಟಣದಲ್ಲಿ ಪೊಲೀಸರ ಮೇಲೆಯೂ ಹಲ್ಲೆಯಾಗಿದೆ, ಸಾಮಾಜಿಕ ಜಾಲತಾಣ ವನ್ನು ದುರುಪಯೋಗ ಪಡಿಸಿಕೊಂಡು, ದೇಶ ವಿರೋಧಿ ಸಂದೇಶಗಳನ್ನು ಹರಿಬಿಡಲಾಗುತ್ತಿದೆ, ಎಂದ ಸಚಿವರು ” ಸ್ಥಳೀಯ ಪೊಲೀಸರು ಈ ಎಲ್ಲ ವಿದ್ಯಮಾನಗಳನ್ನು ಗಮನಿಸಿ ಕ್ರಮ ಕೈಗೊಂಡಿದ್ದಾರೆ, ಅವರ ಪ್ರಯತ್ನ ದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದೂ ಸಚಿವರು ಹೇಳಿದರು.
ಇದಕ್ಕೆ ಮೊದಲು ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಸದಸ್ಯ ಯು ಟಿ ಖಾದರ್, ಜಿಲ್ಲೆಯಲ್ಲಿ ಅನೈತಿಕ ಗೂಂಡಾಗಿರಿ ಪ್ರಕರಣಗಳು ಹೆಚ್ಚುತ್ತಿದ್ದು,ವಿದ್ಯಾರ್ಥಿಗಳ ಮೇಲೆ ಹಲ್ಲೆ ಘಟನೆಗಳು, ತ್ರಿಶೂಲ ದೀಕ್ಷೆಯಂತ ಕಾರ್ಯಕ್ರಮಗಳಿಂದ ಕೋಮು ಸೌಹಾರ್ದಕ್ಕೆ ಸವಾಲಾಗಿದೆ, ಪೊಲೀಸರಿಗೆ ಪರಿಸ್ಥಿತಿ ಎದುರಿಸಲು, ಮುಕ್ತ ಅವಕಾಶ ನೀಡಬೇಕು, ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.