ಜಗತ್ತಿನ ಪ್ರಶಂಸಾರ್ಹರ ಪಟ್ಟಿಯಲ್ಲಿ ಪ್ರಧಾನಿ ಮೋದಿ ನಂ.8
ಮೆಚ್ಚುಗೆ ಪಡೆದ ಮಹಿಳೆಯರ ಪೈಕಿ ಸುಧಾ ಮೂರ್ತಿ, ಪ್ರಿಯಾಂಕಾ, ಐಶ್ಗೆ ಸ್ಥಾನ
Team Udayavani, Dec 16, 2021, 7:10 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸಕ್ತ ವರ್ಷವೂ “ಜಗತ್ತಿನ ಅತಿ ಮೆಚ್ಚುಗೆ ಪಡೆದ ಪುರುಷರ ಪಟ್ಟಿ’ಯ ಟಾಪ್ 10ರೊಳಗಿನ ಸ್ಥಾನ ಪಡೆದಿದ್ದಾರೆ. ಈ ಮೂಲಕ ತಮ್ಮ ಜಾಗತಿಕ ಜನಪ್ರಿಯತೆ ಕುಗ್ಗಿಲ್ಲ ಎಂಬುದನ್ನು ಮತ್ತೂಮ್ಮೆ ಸಾಬೀತುಪಡಿಸಿದ್ದಾರೆ.
ದತ್ತಾಂಶ ವಿಶ್ಲೇಷಕ ಸಂಸ್ಥೆ YouGov ಸಮೀಕ್ಷೆ ನಡೆಸಿ ಈ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಹಲವು ಜಾಗತಿಕ ಸೆಲೆಬ್ರಿಟಿಗಳು ಹಾಗೂ ಪ್ರಭಾವಿಗಳನ್ನು ಹಿಂದಕ್ಕೆ ತಳ್ಳಿ ಮೋದಿ ಅವರು ಈ ಪಟ್ಟಿಯಲ್ಲಿ 8ನೇ ಸ್ಥಾನ ಗಳಿಸಿದ್ದಾರೆ. ವಿಶೇಷವೆಂದರೆ, ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮತ್ತು ರಷ್ಯಾ ಅಧ್ಯಕ್ಷ ಪುಟಿನ್ ಅವರನ್ನೂ ಮೋದಿ ಹಿಂದಿಕ್ಕಿದ್ದಾರೆ.
ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರು ಜಗತ್ತಿನಲ್ಲೇ ಅತ್ಯಂತ ಮೆಚ್ಚುಗೆಗೆ ಪಾತ್ರರಾದ ವ್ಯಕ್ತಿ ಎಂಬ ಖ್ಯಾತಿ ಗಳಿಸಿದ್ದು, ನಂ.1 ಸ್ಥಾನದಲ್ಲೇ ಉಳಿದುಕೊಂಡಿದ್ದಾರೆ. ಉದ್ಯಮಿ ಬಿಲ್ ಗೇಟ್ಸ್ 2ನೇ ಸ್ಥಾನ ಪಡೆದಿದ್ದಾರೆ.
ಟಾಪ್ 20ರೊಳಗಿನ ಭಾರತೀಯರು:
ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಬಾಲಿವುಡ್ ಸೂಪರ್ಸ್ಟಾರ್ಗಳಾದ ಅಮಿತಾಭ್ ಬಚ್ಚನ್, ಶಾರುಖ್ ಖಾನ್ ಅವರು ಟಾಪ್ 20 ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತೀಯರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಸುಧಾ ಮೂರ್ತಿ, ಪ್ರಿಯಾಂಕಾ ಪ್ರಶಂಸಾರ್ಹ ಸ್ತ್ರೀಯರು
“ವಿಶ್ವದ ಪ್ರಶಂಸಾರ್ಹ ಮಹಿಳೆಯರ ಪಟ್ಟಿ’ಯಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ, ಕರಾವಳಿಯ ಬೆಡಗಿ, ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಹಾಗೂ ನಟಿ ಪ್ರಿಯಾಂಕಾ ಚೋಪ್ರಾ ಸ್ಥಾನ ಪಡೆದಿದ್ದಾರೆ. ಪಟ್ಟಿಯಲ್ಲಿ ಪ್ರಿಯಾಂಕಾ 10ನೇ ಸ್ಥಾನ ಗಳಿಸಿದ್ದು, ಐಶ್ವರ್ಯಾ 13 ಮತ್ತು ಸುಧಾ ಮೂರ್ತಿ 14ನೇ ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ:ಬೆಂಗಳೂರಿಗೆ ಹೊರಟಿದ್ದ ರೈಲಿಗೆ ಹುಸಿ ಬಾಂಬ್ ಕರೆ: ಬಂಧನ
ಟಾಪ್ 10 ಪುರುಷರು
- ಬರಾಕ್ ಒಬಾಮ
- ಬಿಲ್ ಗೇಟ್ಸ್
- ಕ್ಸಿ ಜಿನ್ಪಿಂಗ್
- ಕ್ರಿಸ್ಟಿಯಾನೋ ರೊನಾಲ್ಡೋ
- ಜಾಕಿಚಾನ್
- ಎಲಾನ್ ಮಸ್ಕ್
- ಲಯೋನೆಲ್ ಮೆಸ್ಸಿ
- ನರೇಂದ್ರ ಮೋದಿ
- ವ್ಲಾದಿಮಿರ್ ಪುಟಿನ್
- ಜಾಕ್ ಮಾ
ಟಾಪ್ 10 ಮಹಿಳೆಯರು
- ಮಿಶೆಲ್ ಒಬಾಮ
- ಏಂಜೆಲಿನಾ ಜೂಲಿ
- ರಾಣಿ 2ನೇ ಎಲಿಜಬೆತ್
- ಓಪ್ರಾಹ್ ವಿನ್ಫ್ರಿ
- ಸ್ಕಾರ್ಲೆಟ್ ಜೊಹಾನ್ಸನ್
- ಎಮ್ಮಾ ವಾಟ್ಸನ್
- ಟೇಲರ್ ಸ್ವಿಫ್ಟ್
- ಏಂಜೆಲ್ ಮರ್ಕೆಲ್
- ಮಲಾಲಾ ಯೂಸುಫ್ಝೈ
- ಪ್ರಿಯಾಂಕಾ ಚೋಪ್ರಾ ಜೋನಾಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.