ಪುಲ್ವಾಮಾ ಎನ್‌ಕೌಂಟರ್: ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನ ಹತ್ಯೆಗೈದ ಸೇನೆ
Team Udayavani, Dec 16, 2021, 9:19 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ರಾಜ್‌ಪುರ ಪ್ರದೇಶದಲ್ಲಿ ಬುಧವಾರ ನಡೆದ ಎನ್‌ಕೌಂಟರ್ ನಲ್ಲಿ ಹತರಾದ ಉಗ್ರರು ಹಿಜ್ಬುಲ್ ಮುಜಾಹಿದ್ದೀನ್‌ಗೆ ಸೇರಿದವರು ಎಂದು ಮೂಲಗಳು ತಿಳಿಸಿವೆ.
ಉಗ್ರನನ್ನು ಶೋಪಿಯಾನ್ ಜಿಲ್ಲೆಯ ಹೆಫ್-ಶ್ರೀಮಲ್ ನಿವಾಸಿ ಫಿರೋಜ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ. ಆತ 2017 ರಲ್ಲಿ ಭಯೋತ್ಪಾದಕ ಸಂಸ್ಥೆಗೆ ಸೇರಿದ್ದನು ಮತ್ತು ಈ ಪ್ರದೇಶದಲ್ಲಿ ಅನೇಕ ಉಗ್ರಗಾಮಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾನೆ.
ಮಂಗಳವಾರ ಮತ್ತು ಬುಧವಾರದ ನಡುವಿನ ಮಧ್ಯರಾತ್ರಿ ಸುಮಾರು 12 ಗಂಟೆಗೆ ಪುಲ್ವಾಮಾ ಜಿಲ್ಲೆಯ ಉಸ್ಗಾಮ್ ಪತ್ರಿಯಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿತ್ತು.
ಇದನ್ನೂ ಓದಿ:ಪಾಕ್ ಸೈನಿಕರ ಹೆಣಗಳ ರಾಶಿ ಮೇಲೆ ನಡೆದಿದ್ದೆವು!
ಡಿಸೆಂಬರ್ 12 ರಂದು, ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕನನ್ನು ಕೊಲ್ಲಲಾಗಿತ್ತು. ಹತ್ಯೆಗೀಡಾದ ಭಯೋತ್ಪಾದಕನನ್ನು ಬರಗಾಂ ನಿವಾಸಿ ಸಮೀರ್ ಅಹ್ಮದ್ ತಂತ್ರಾಯ್ ಎಂದು ಗುರುತಿಸಲಾಗಿದೆ.
ತಂತ್ರಾಯ್ ಈ ಹಿಂದೆ ಭಯೋತ್ಪಾದಕರ ಸಹಚರರಾಗಿದ್ದು, ಈ ಪ್ರದೇಶದಲ್ಲಿ ಸಕ್ರಿಯ ಭಯೋತ್ಪಾದಕರಿಗೆ ವ್ಯವಸ್ಥಾಪನಾ ಬೆಂಬಲವನ್ನು ಒದಗಿಸುವಲ್ಲಿ ತೊಡಗಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.