ಕಾಂಗ್ರೆಸ್ ನವರು ಭ್ರಷ್ಟಾಚಾರದ ಪಿತಾಮಹರು: ಸಚಿವ ಅಶೋಕ್
Team Udayavani, Dec 16, 2021, 11:24 AM IST
ಸುವರ್ಣಸೌಧ (ಬೆಳಗಾವಿ): ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ ಮಾಡಲು ಕಾಂಗ್ರೆಸ್ ನವರಿಗೆ ನೈತಿಕ ಅಧಿಕಾರವಿಲ್ಲ. ಅವರ ಮಾತು ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತಾಗಿದೆ. ಅವರೇ ದೊಡ್ಡ ಭ್ರಷ್ಟಾಚಾರದ ಪಿತಾಮಹರು ಎಂದು ಕಂದಾಯ ಸಚಿವ ಆರ್ ಅಶೋಕ್ ಟೀಕಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಸರ್ಕಾರದಲ್ಲಿ ಭ್ರಷ್ಟಾಚಾರ ರಹಿತವಾದ ಆಡಳಿತ ನಡೆಯುತ್ತಿದೆ. ಕಾಂಗ್ರೆಸ್ ಇದ್ದಾಗ ಹಲವು ಭ್ರಷ್ಟಾಚಾರ ಪ್ರಕರಣಗಳು ಬೆಳಕಿಗೆ ಬಂದಿವೆ. ಕಾಂಗ್ರೆಸ್ ನವರು ಮಾಡುವ ಆರೋಪಗಳಿಗೆ ಯಾವುದೇ ದಾಖಲೆಯಿಲ್ಲ. ಕಾಂಗ್ರೆಸ್ ನವರೆ ಪರ್ಸೆಂಟೇಜ್ ಬಗ್ಗೆ ದೂರು ಕೊಡಿಸಿರುವುದು, ಕಾಂಗ್ರೆಸ್ ಬುದ್ದಿಯೇ ಗಾಳಿಯಲ್ಲಿ ಗುಂಡಿ ಹೊಡೆಯುವುದು. ಅವರು ಆರೋಪಕ್ಕೆ ತಕ್ಕಂತೆ ಸೂಕ್ತ ದಾಖಲೆ ಕೊಡಲಿ ಎಂದರು.
ಇದನ್ನೂ ಓದಿ:ಬಾಂಗ್ಲಾ ವಿಮೋಚನಾ ಯುದ್ಧದ ಸುವರ್ಣ ಸಂಭ್ರಮ: ಗಣ್ಯರ ಸ್ಮರಣೆ
ಅವರು ದಾಖಲೆ ಕೊಟ್ಟರೆ, ಅವರ ಬಣ್ಣ ಬಯಲಾಗುತ್ತದೆ ಎಂಬ ಭಯ ಅವರಿಗೆ. ಬಿಟ್ ಕಾಯಿನ್ ಎನ್ನುತ್ತಿದ್ದರು, ಬಿಟ್ಟೂ, ಇಲ್ಲ ಕಾಯಿನ್ನೂ ಇಲ್ಲ. ಅವರು ಸದನದಲ್ಲಿ ಮಾತಾಡಿದರೆ, ನಾವು ಕೂಡ ಸದನದಲ್ಲಿ ಅವರ ಆಡಳಿತದಲ್ಲಿನ ಪರ್ಸೆಂಟೇಜ್ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಅಶೋಕ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು