ಎಂಇಎಸ್ ವಿರುದ್ಧ ಪ್ರತಿಭಟನೆ
Team Udayavani, Dec 16, 2021, 5:43 PM IST
ಮುದ್ದೇಬಿಹಾಳ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಎಂಇಎಸ್ ಸಂಘಟನೆಯವರು ಕರ್ನಾಟಕದ ನಾಡಧ್ವಜ ಸುಟ್ಟು ಹಾಕಿದ್ದನ್ನು ಖಂಡಿಸಿ ಬಿ.ವೈ. ವಿಜಯೇಂದ್ರ ಯುವ ಬ್ರಿಗೇಡ್‌ನ ವಿಜಯಪುರ ಜಿಲ್ಲೆ ಮತ್ತು ಮುದ್ದೇಬಿಹಾಳ ತಾಲೂಕು ಘಟಕಗಳ ಪದಾಧಿಕಾರಿಗಳು, ಸದಸ್ಯರು ಬುಧವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಪುಂಡರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಸಮಾಜ ಸೇವಕ ಮಹಾಂತೇಶ ಬೂದಿಹಾಳಮಠ ಮಾತನಾಡಿ, ಕರ್ನಾಟಕದಲ್ಲಿ ಕನ್ನಡಿಗರು ಇದುವರೆಗೂ ಬೇರೆ ರಾಜ್ಯದ ಭಾಷೆಗಳ ಮೇಲೆ ಗದಾ ಪ್ರಹಾರ ಮಾಡಿಲ್ಲ. ಆದರೆ ಬೇರೆ ರಾಜ್ಯದವರು ಕನ್ನಡದ ಬಗ್ಗೆ, ಕನ್ನಡದ ಧ್ವಜದ ಬಗ್ಗೆ ಅವಮಾನಕರ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ಸರಿಯಲ್ಲ. ಎಂಇಎಸ್‌ನವರು ಕನ್ನಡದ ಧ್ವಜವನ್ನು ಸುಟ್ಟು ನಮ್ಮ ಭಾಷೆಯನ್ನು ಅವಮಾನಿಸಿರುವುದಕ್ಕೆ ಸರ್ಕಾರ ಅವರ ವಿರುದ್ಧ ಕಠಿಣ ಕ್ರಮ ಕೈಕೊಳ್ಳಬೇಕು ಎಂದು ಆಗ್ರಹಿಸಿದರು.
ಬ್ರಿಗೇಡ್‌ನ ಜಿಲ್ಲಾಧ್ಯಕ್ಷ ವಿಲಾಸ ಮೇಲ್ಮನಿ, ಕಿರುತೆರೆ ಹಾಸ್ಯ ಕಲಾವಿದ ಮುನೀರ್ ಅವಟಿಗೇರ, ವಿವಿಧ ಕನ್ನಡಪರ ಮತ್ತು ರೈತ ಪರ ಸಂಘಟನಗಳ ಮುಖಂಡರಾದ ರಮೇಶ ಕರಡ್ಡಿ, ಬಸವರಾಜ ಮೇಟಿ, ಮಹಾದೇವ ಬಿರಾದಾರ, ವಾಸಿಂ ದೇಸಾಯಿ, ಸೊಹೇಲ್ ಬೇಪಾರಿ, ಚನ್ನಬಸವರಾಜ ಅಂಗಡಿ, ಸಾಗರ ವಾಲೀಕಾರ, ರಶೀದ ನದಾಫ್, ಬಸು ಮದರಿ, ಗುರುಮಠ ಸೇರಿ ಹಲವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.