ಸಂತ್ರಸ್ತರಿಗೆ ಸ್ಪಂದಿಸದ ಸರ್ಕಾರ; ಹೋರಾಟ ತೀವ್ರ

ಈಗಲೂ ಕಾಲ ಮಿಂಚಿಲ್ಲ. ಸರ್ಕಾರ ಸಂತ್ರಸ್ತರ ಪರ ನಿಲ್ಲುವ ಕೆಲಸ ಆಗಬೇಕು.

Team Udayavani, Dec 16, 2021, 6:09 PM IST

ಸಂತ್ರಸ್ತರಿಗೆ ಸ್ಪಂದಿಸದ ಸರ್ಕಾರ; ಹೋರಾಟ ತೀವ್ರ

ಬೀಳಗಿ: ಕೃಷ್ಣಾ ಮೆಲ್ದಂಡೆ ಯೋಜನೆಯ 1 ಮತ್ತು 2 ಯೋಜನೆಗಳ ಅಪೂರ್ಣ ಕೆಲಸಗಳು ಮತ್ತು 3ನೇ ಹಂತ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಎಲ್ಲ ಮುಳುಗಡೆ ಸಂತ್ರಸ್ತ ರೈತರು, ಸಾರ್ವಜನಿಕರು ಸೇರಿ ಬೃಹತ್‌ ಉಗ್ರ ಹೋರಾಟ ಮಾಡಲು ಸಿದ್ಧರಾಗಬೇಕು ಎಂದು ಮುಖಂಡ ಬಸವಪ್ರಭು ಸರನಾಡಗೌಡ ಹೇಳಿದರು.

ಕೊರ್ತಿ ಸಮುದಾಯ ಭವನದಲ್ಲಿ ಬುಧವಾರ ಉತ್ತರ ಕರ್ನಾಟಕ ಸ್ವಾಭಿಮಾನಿ ವೇದಿಕೆ ಹಮ್ಮಿಕೊಂಡಿದ್ದ ಅವಳಿ ಜಿಲ್ಲೆಗಳ ಯುಕೆಪಿ 3ನೇ ಹಂತದ ಶೀಘ್ರ ಅನುಷ್ಠಾನಕ್ಕಾಗಿ ಫಲಾನುಭವಿಗಳು ಮತ್ತು ಮುಳುಗಡೆ ಸಂತ್ರಸ್ತರ ಸಭೆಯಲ್ಲಿ ಅವರು ಮಾತನಾಡಿದರು.

ಹೋರಾಟದ ಮಾರ್ಗದಲ್ಲಿ ಸಾಗಿದರೆ ಸಂತ್ರಸ್ತರ ನ್ಯಾಯಕ್ಕಾಗಿ ಅಂತಹ ಹೋರಾಟಕ್ಕಾಗಿ ಸಂತ್ರಸ್ತರ ಜತೆಗೆ ನಾವು ಯಾವ ತ್ಯಾಗಕ್ಕೂ ಸಿದ್ಧ. ಎಲ್ಲ ಸಂತ್ರಸ್ತರು ಒಗ್ಗಟ್ಟಿನಿಂದ ತೀರ್ಮಾನ ತೆಗೆದುಕೊಂಡು ಮುಂದಿನ ರೂಪುರೇಷೆ ಸಿದ್ಧಪಡಿಸಬೇಕು ಎಂದರು. 1964ರಿಂದ ಆರಂಭವಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಇನ್ನೂ ಮುಕ್ತಾಯವಾಗಿಲ್ಲ ಎಂದರೆ ಸರ್ಕಾರಗಳು ಸಂತ್ರಸ್ತರನ್ನು ಎಷ್ಟು ಕಡೆಗಣಿಸಿವೆ ಎನ್ನುವುದು ತಿಳಿಯುತ್ತಿದೆ. ಈ ಯೋಜನೆಗೆ ಪ್ರತಿ ವರ್ಷ ಬಜೆಟ್‌ನಲ್ಲಿ 15 ಸಾವಿರ ಕೋಟಿ ರೂ. ಹಣ ಇಟ್ಟಿದ್ದರೆ ಯೋಜನೆ ಮುಕ್ತಾಯವಾಗುತ್ತಿತ್ತು.

ಈಗಲೂ ಕಾಲ ಮಿಂಚಿಲ್ಲ. ಸರ್ಕಾರ ಸಂತ್ರಸ್ತರ ಪರ ನಿಲ್ಲುವ ಕೆಲಸ ಆಗಬೇಕು. ವೇದಿಕೆ ಮುಖಂಡರು ಈ ಯೋಜನೆ ಕುರಿತಾಗಿ ಸಮಗ್ರ ಮಾಹಿತಿ ಸಂಗ್ರಹಿಸಿದ್ದಾರೆ. ಇವೆಲ್ಲವನ್ನು ಪಕ್ಷಾತೀತವಾಗಿ ಎಲ್ಲ ಶಾಸಕರು, ಸಚಿವರು, ಮಾಜಿ ಶಾಸಕರು ಗಮನಕ್ಕೆ ತಂದು ಸಂತ್ರಸ್ತರ ಸಮ್ಮುಖದಲ್ಲಿಯೇ ಸಭೆ ಮಾಡಿ ಮುಂದಿನ ತೀರ್ಮಾನ ಮಾಡಿ ಶೀಘ್ರ ಯೋಜನೆ ಅನುಷ್ಠಾನವಾಗುವಂತೆ ಮಾಡಬೇಕು ಎಂದರು.

ಈ ವೇಳೆ ಹಿರಿಯರಾದ ಎಸ್‌.ಟಿ. ಪಾಟೀಲ, ಸಾಮಾಜಿಕ ಹೋರಾಟಗಾರ ನಾಗರಾಜ ಹೊಂಗಲ್‌, ಮುತ್ತಪ್ಪ ಕೋಮಾರ, ಮಲ್ಲಪ್ಪ ಕಾಳಗಿ, ಜಿ.ಆರ್‌. ಪಾಟೀಲ, ಸಿದ್ದು ಗಿರಗಾಂವಿ, ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಶೈಲ ನಾಯಿಕ, ಈಶ್ವರ ಕೋನಪ್ಪವರ, ಗೌಡಪ್ಪಗೌಡ ಪಾಟೀಲ, ಅರವಿಂದ ಮುಚಗಂಡಿ, ಸುರೇಂದ್ರ ನಾಯಿಕ ಇತರರಿದ್ದರು.

ಟಾಪ್ ನ್ಯೂಸ್

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.