ಶೌರ್ಯ ಪ್ರಶಸ್ತಿ ಗೌರವ ಧನ ಹೆಚ್ಚಳ
Team Udayavani, Dec 17, 2021, 7:31 AM IST
ಬೆಳಗಾವಿ: ಶೌರ್ಯ ಪ್ರಶಸ್ತಿ ಪುರಸ್ಕೃತರಿಗೆ ರಾಜ್ಯ ಸರಕಾರ ಒಂದು ಬಾರಿ ನೀಡುವ ಪ್ರಶಸ್ತಿಯ ಮೊತ್ತವನ್ನು ಹೆಚ್ಚಿಸಿದೆ. ಈ ಬಗ್ಗೆ ರಾಜ್ಯದ ಸೈನಿಕ ಕಲ್ಯಾಣ ಮತ್ತು ಪುನರ್ ವಸತಿ ಇಲಾಖೆ ಗುರುವಾರ ಆದೇಶ ನೀಡಿದೆ.
ಅದಕ್ಕೆ ಪೂರಕವಾಗಿ ಬೆಳಗಾವಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಪರಮವೀರ ಚಕ್ರ, ಅಶೋಕ ಚಕ್ರ ಪ್ರಶಸ್ತಿ ವಿಜೇತರಿಗೆ ತಲಾ 1.50 ಕೋಟಿ ರೂ., ಮಹಾವೀರ ಚಕ್ರ, ಕೀರ್ತಿ ಚಕ್ರ ವಿಜೇತರಿಗೆ ತಲಾ 1 ಕೋಟಿ ರೂ., ವೀರಚಕ್ರ ಮತ್ತು ಶೌರ್ಯ ಚಕ್ರ ವಿಜೇತರಿಗೆ 50 ಲಕ್ಷ ರೂ. ಹಾಗೂ ವಿವಿಧ ಸೇನಾ ಮೆಡಲ್ಗಳಿಗೆ 15 ಲಕ್ಷ ರೂ. ನಿಗದಿಪಡಿಸಲಾಗಿದೆ ಎಂದರು.
1971ರಲ್ಲಿ ಪಾಕಿಸ್ಥಾನ ವಿರುದ್ಧದ ಯುದ್ಧದಲ್ಲಿ ಜಯ ಸಾಧಿ ಸಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಗುರು ವಾರ ಆಯೋಜಿಸಲಾಗಿದ್ದ “ವಿಜಯ ದಿವಸ’ ಕಾರ್ಯಕ್ರಮದಲ್ಲಿ ಸಿಎಂ ಈ ಘೋಷಣೆ ಮಾಡಿದ್ದಾರೆ.
ಸರಕಾರ ಸೈನಿಕರು, ನಿವೃತ್ತ ಯೋಧರು ಮತ್ತು ಹುತಾತ್ಮರ ಕುಟುಂಬಗಳ ಕ್ಷೇಮಾಭಿವೃದ್ಧಿಗೆ ಬದ್ಧ ವಾಗಿದೆ ಎಂದರು. ಕರ್ನಾಟಕ – ಕೇರಳ ಉಪ ಕ್ಷೇತ್ರದ ಕಮಾಂಡಿಂಗ್ ಆಫೀಸರ್ ಮೇ| ಜ| ಜೆ.ವಿ. ಪ್ರಸಾದ್, ಡಿಜಿಪಿ ಪ್ರವೀಣ್ ಸೂದ್, ಸರಕಾರದ ಮುಖ್ಯ ಕಾರ್ಯ ದರ್ಶಿ ಪಿ. ರವಿಕುಮಾರ್, ಸಚಿವ ಆರಗ ಜ್ಞಾನೇಂದ್ರ ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.