ವಿಷ ಆಹಾರ: ಮೊರಾರ್ಜಿ ಶಾಲೆಯ 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆಸ್ಪತ್ರೆಗೆ
Team Udayavani, Dec 17, 2021, 1:48 PM IST
ದಾವಣಗೆರೆ: ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ಇರುವ ಅಲ್ಪ ಸಂಖ್ಯಾತರ ಮೊರಾರ್ಜಿ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಶುಕ್ರವಾರ ಬೆಳಗ್ಗೆ ವಿಷಯುಕ್ತ ಆಹಾರ ಸೇವಿಸಿ 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಡೆದಿದೆ.
ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಅಂಬ್ಯುಲೆನ್ಸ್ ಮೂಲಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿ ನಿಲಯದಲ್ಲಿ ಒಟ್ಟು 107 ಬಾಲಕಿಯರ ಹಾಜರಾತಿ ಇದ್ದು. ಇದರಲ್ಲಿ 40ಕ್ಕೂ ಹೆಚ್ಚು ಮಕ್ಕಳು ಹೊಟ್ಟೆ ನೋವಿನಿಂದ ಬಳಲುತ್ತಿದ್ದಾರೆ. ಚಪಾತಿ,ಬಿಟ್ರೋಟ್ ಪಲ್ಯ ಸೇವನೆ ಮಾಡಿದ್ದರು.ಅಲ್ಲದೆ ಬೆಳಗ್ಗೆ 9ಕ್ಕೆ ಉಪಹಾರ ಅವಲಕ್ಕಿ ಸೇವಿಸಿದ್ದಾರೆ. 10ಗಂಟೆಯ ವೇಳೆಗೆ ಇಬ್ಬರಲ್ಲಿ ಹೊಟ್ಟೆನೋವು ಕಾಣಿಸಿಕೊಂಡಿದೆ. ನಂತರ ಒಬ್ಬೊಬ್ಬರಲ್ಲಿಯೇ ಕಾಣಿಸಿಕೊಂಡು ಅಳಲಾರಂಭಿಸಿದ್ದಾರೆ. ಕೂಡಲೇ ಸಾರ್ವಜನಿಕರ ಸಹಾಯದಿಂದ ಶಿಕ್ಷಕರು ಅಂಬ್ಯುಲೆನ್ಸ್ ಹಾಗೂ ಸರ್ಕಾರಿ ವಾಹನ ಮೂಲಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಡಾ.ನಿರಾಜ್ ,ತಾಲೂಕು ಆರೋಗ್ಯಾಧಿಕಾರಿ ಡಾ. ನಾಗರಾಜ್ ಮತ್ತು ಮಕ್ಕಳ ತಜ್ಞ ಡಾ. ಜಯಕುಮಾರ್ ಮತ್ತು ವೈದ್ಯರ ಮತ್ತು ನರ್ಸ್ ಗಳ ಸಮ್ಮುಖದಲ್ಲಿ ಚಿಕಿತ್ಸೆ ನಡೆಯುತ್ತಿದೆ.ಸ್ಥಳಕ್ಕೆ ತಹಶೀಲ್ದಾರ್ ಶಶಿಧರಯ್ಯ,ಪ.ಪಂ ಅಧ್ಯಕ್ಷ ಎಸ್. ಸಿದ್ದಪ್ಪ. ಪಟ್ಟಣ ಪಂಚಾಯತಿ ಸದಸ್ಯರು ಮತ್ತು ಯುವ ಮುಖಂಡರು,ಪ್ರಗತಿಪರ ಸಂಘಟನೆಯವರು ಭೇಟಿ ನೀಡಿ ಮಕ್ಕಳಿಗೆ ಧೈರ್ಯ ತುಂಬಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.