ಚಿಕ್ಕೋಡಿ ಜಿಲ್ಲೆಗೆ ಜನಪ್ರತಿನಿಧಿಗಳು ಧ್ವನಿಯೆತ್ತಲಿ

ಉಗ್ರ ಹೋರಾಟಕ್ಕೆ ಮುಂದಾಗಬೇಕು. ಅಂದಾಗ ಸರ್ಕಾರ ಎಚ್ಚೆತ್ತುಕೊಳ್ಳಲು ಸಾಧ್ಯ ಎಂದರು.

Team Udayavani, Dec 17, 2021, 5:46 PM IST

ಚಿಕ್ಕೋಡಿ ಜಿಲ್ಲೆಗೆ ಜನಪ್ರತಿನಿಧಿಗಳು ಧ್ವನಿಯೆತ್ತಲಿ

ಚಿಕ್ಕೋಡಿ: ಗಡಿ ಗುರುತಿಸುವದು ಭಾಷಾ ದೃಷ್ಟಿಯಿಂದ. ಹೀಗಾಗಿ ಗಡಿ ಭಾಗದ ಆರ್ಥಿಕ, ರಾಜಕೀಯ, ಶೆ„ಕ್ಷಣಿಕ ಸಮಸ್ಯೆಗಳ ‌ ನಿವಾರಣೆಗೆ ಚಿಕ್ಕೋಡಿ ಜಿಲ್ಲಾ ರಚನೆ ಮುಖ್ಯ. ಆದ್ದರಿಂದ ಈ ಭಾಗದ ಜನಪ್ರತಿನಿಧಿಗಳು ಒಗ್ಗಟ್ಟಾಗಿ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಜಿಲ್ಲಾ ರಚನೆಗೆ ಧ್ವನಿ ಎತ್ತಬೇಕೆಂದು ಚಿಂಚಣಿ ಸಿದ್ದಸಂಸ್ಥಾನ ಮಠದ ‌ ಶ್ರೀ ಅಲ್ಲಮಪ್ರಭು ಸ್ವಾಮಿಗಳು ಒತ್ತಾಯಿಸಿದರು.

ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿಸಬೇಕೆಂದು ಹೋರಾಟ ಸಮಿತಿ ತಹಶೀಲ್ದಾರ್‌ ಕಚೇರಿ ಎದುರುಗಡೆ ನಡೆಸುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆಕಾಲಿಟ್ಟಿದ್ದು, ಚಿಂಚಣಿ ಹಾಗೂ ಚಿಕ್ಕೋಡಿ ಸ್ವಾಮೀಜಿಗಳು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು.

ಚಿಕ್ಕೋಡಿ ಜಿಲ್ಲೆಯನ್ನಾಗಿಸಬೇಕೆಂದು ಕಳೆದ ಹತ್ತಾರು ವರ್ಷಗಳಿಂದ ಹೋರಾಟ ಮಾಡುತ್ತ ಬಂದಿದ್ದ ಹಿರಿಯ ಧುರೀಣ ಬಿ.ಆರ್‌.ಸಂಗಪ್ಪಗೋಳ ಹಾಗೂ ಮಾಜಿ ಶಾಸಕ ದತ್ತು ಹಕ್ಯಾಗೋಳ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಈ ಭಾಗದ ಜನಪ್ರತಿನಿಧಿಗಳು ಒಂದಾಗಿ ಅಧಿವೇಶನದಲ್ಲಿ ಚಿಕ್ಕೋಡಿ ಜಿಲ್ಲೆಗೆ ಆಗ್ರಹಿಸಬೇಕು ಎಂದರು.

ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆ ವಿಭಜನೆಯಾದರೆ ಗಡಿಯಂಚಿನಲ್ಲಿರುವ ಅಥಣಿ, ನಿಪ್ಪಾಣಿ ಸೇರಿದಂತೆ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿನ ಜನರಿಗೆ ಅನುಕೂಲವಾಗಲಿದೆ. ಜೊತೆಗೆ ಅನುದಾನ ಹೆಚ್ಚಿನ ಪ್ರಮಾಣದಲ್ಲಿ ಬಂದು ಮಹಾರಾಷ್ಟ್ರದ ಗಡಿಭಾಗದ ಜಿಲ್ಲೆಗಳಿಗೆ ಉದ್ಯೋಗ ಅರಸಿ ಹೋಗುವವರಿಗೆ ಇಲ್ಲಿಯೇ ಉದ್ಯೋಗ ಸೃಷ್ಟಿ ಮಾಡಬಹುದಾಗಿದೆ. ಈ ಭಾಗದ ಎಲ್ಲ ಜನಪ್ರತಿನಿಧಿಗಳು ಅಧಿವೇಶನ ವೇಳೆಯಲ್ಲಿ ಸಿಎಂ ಅವರಿಗೆ ಭೇಟಿಯಾಗಲು ದಿನ ನಿಗದಿ ಮಾಡಿದ್ದಲ್ಲಿ ಈ ಭಾಗ ‌ದಿಂದ ಜಿಲ್ಲಾ ಹೋರಾಟ ಸಮಿತಿ ನಿಯೋಗ ಒಯ್ದು ಮನವರಿಕೆ ಮಾಡಬಹುದಾಗಿದೆ ಎಂದರು.

ಚಿಕ್ಕೋಡಿ ಚರಮೂರ್ತಿ ಮಠದ ಶ್ರೀ ಸಂಪಾದನಾ ಸ್ವಾಮಿಗಳು ಮಾತನಾಡಿ ಹಲವು ದಶಕದಿಂದ ಜಿಲ್ಲಾ ರಚನೆ ಹೋರಾಟ ನಡೆದು ಬಂದಿದೆ. ಇದರಲ್ಲಿ ಹಲವು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.ಆದ್ದರಿಂದ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಎಲ್ಲಾ ಜನಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಒತ್ತಾಯ ಮಾಡಬೇಕು, ಮಾಡದಿದ್ದರೆ ಉಗ್ರ ಹೋರಾಟಕ್ಕೆ ಮುಂದಾಗಬೇಕು. ಅಂದಾಗ ಸರ್ಕಾರ ಎಚ್ಚೆತ್ತುಕೊಳ್ಳಲು ಸಾಧ್ಯ ಎಂದರು.

ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಕಾಶಿನಾಥ ಕುರಣೆ ಮಾತನಾಡಿ, ಸರ್ಕಾರ10 ಲಕ್ಷಜನವಸತಿ ಇರುವ ಪ್ರದೇಶಕ್ಕೆ ಜಿಲ್ಲಾ ಸ್ಥಾನಮಾನ ನೀಡಿದೆ ಆದರೆ 7 ಲಕ್ಷ ‌ ಜನರಿರುವ ಚಿಕ್ಕೋಡಿಗೆ ಜಿಲ್ಲೆ ಸ್ಥಾನಮಾನ ನೀಡದೇ ಇರುವುದು ರಾಜಕೀಯ ಇಚ್ಛಾಶಕ್ತಿ ಕೊರತೆ ಎದ್ದು ತೋರುತ್ತದೆ ಎಂದರು.

ಸಂಜು ಬಡಿಗೇರ, ಚಂದ್ರಕಾಂತ ಹುಕ್ಕೇರಿ, ಚನ್ನಪ್ಪಾ ಬಡಿಗೇರ, ಶಿವು ಮದಾಳೆ, ಈರಗೌಡ ಕೆಳಗಿನಮನಿ, ರಮೇಶ ಕರನೂರೆ, ರುದ್ರಯ್ನಾ ಹಿರೇಮಠ, ಕುಮಾರ ‌ ಪಾಟೀಲ ಸೇರಿದಂತೆ ಹೋರಾಟ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.