ಮಂಗಳೂರು: ಘಾನಾದಿಂದ ಬಂದ ಪ್ರಯಾಣಿಕನಿಗೆ ಪಾಸಿಟಿವ್; ಒಮಿಕ್ರಾನ್ ಶಂಕೆ
Team Udayavani, Dec 17, 2021, 7:09 PM IST
ಮಂಗಳೂರು: ಘಾನಾದಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರೊಬ್ಬರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಇದರಿಂದಾಗಿ ಒಮಿಕ್ರಾನ್ ಕರಾವಳಿ ಕರ್ನಾಟಕಕ್ಕೆ ತಲುಪಿರುವ ಆತಂಕ ಎದುರಾಗಿದೆ.
ಘಾನಾವನ್ನು ಒಮಿಕ್ರಾನ್ ನ “ಹೈ ರಿಸ್ಕ್” ದೇಶವೆಂದು ಘೋಷಿಸಲಾಗಿದೆ. ಆಗಮನದ ನಂತರ ವಿಮಾನ ನಿಲ್ದಾಣದಲ್ಲಿ ಪರೀಕ್ಷಿಸಲಾದ ಕ್ಷಿಪ್ರ RTPCR ಮಾದರಿಯಲ್ಲಿ ಪಾಸಿಟಿವ್ ಎಂದು ಕಂಡುಬಂದಿದೆ.
ಪರೀಕ್ಷೆಯ ನಂತರ ನಂತರ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು, ವಿಮಾನ ನಿಲ್ದಾಣದ ಆರೋಗ್ಯ ಅಧಿಕಾರಿ, ಜಿಲ್ಲಾ ಕಣ್ಗಾವಲು ಅಧಿಕಾರಿ (ಡಿಎಸ್ಒ), ಕೋವಿಡ್ ನೋಡಲ್ ಅಧಿಕಾರಿ ಮತ್ತು ಅಪೋಲೋ ಲ್ಯಾಬ್ ಮುಖ್ಯಸ್ಥರೊಂದಿಗೆ ತುರ್ತು ಸಭೆ ನಡೆಸಿದರು. ನಿಯಂತ್ರಣ ಕ್ರಮಗಳ ಕುರಿತು ಚರ್ಚಿಸಿದರು.
ವ್ಯಕ್ತಿಯನ್ನು ನಿನ್ನೆ ರಾತ್ರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಲಕ್ಷಣರಹಿತರಾಗಿದ್ದಾರೆ ಎಂದು ಡಿಸಿ ಶುಕ್ರವಾರ ಪರಿಶೀಲನಾ ಸಭೆಯ ನಂತರ ತಿಳಿಸಿದ್ದಾರೆ.
ವಿಮಾನದಲ್ಲಿದ್ದ ಯಾವುದೇ ಪ್ರಯಾಣಿಕರಲ್ಲಿ ಇಲ್ಲಿಯವರೆಗೆ ಯಾವುದೇ ರೋಗಲಕ್ಷಣಗಳು ಕಂಡು ಬಂದಿಲ್ಲ. ವಿಮಾನದಲ್ಲಿದ್ದ ಒಟ್ಟು 27 ಪ್ರಯಾಣಿಕರನ್ನು ಪ್ರಾಥಮಿಕ ಸಂಪರ್ಕಗಳೆಂದು ಪರಿಗಣಿಸಲಾಗಿದೆ ಮತ್ತು ಆರೋಗ್ಯ ಇಲಾಖೆಯಿಂದ ಕ್ವಾರಂಟೈನ್ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ರೂಪಾಂತರದ ವೈರಸ್ ಪರೀಕ್ಷೆಗಾಗಿ ಘಾನಾದಿಂದ ಬಂಡ ಪ್ರಯಾಣಿಕರ ಮಾದರಿಯನ್ನು ಜೆನೊಮಿಕ್ ಸೀಕ್ವೆನ್ಸಿಂಗ್ ಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.