2021-22: ತೆರಿಗೆ ಸಂಗ್ರಹ ಹೆಚ್ಚಳ


Team Udayavani, Dec 18, 2021, 5:55 AM IST

2021-22: ತೆರಿಗೆ ಸಂಗ್ರಹ ಹೆಚ್ಚಳ

ಬೆಳಗಾವಿ: ಕಳೆದ ಆರ್ಥಿಕ ವರ್ಷಕ್ಕೆ ಹೋಲಿಸಿ ದರೆ, 2021-22ನೇ ಸಾಲಿನ ಆದಾಯ ಸಂಗ್ರಹದಲ್ಲಿ ಶೇ 25.6ರಷ್ಟು ಹೆಚ್ಚಳವಾಗಿದೆ.

ವಿಧಾನಸಭೆಯಲ್ಲಿ ಸರಕಾರ 2021-22ನೇ ಸಾಲಿನ ಮಧ್ಯ ವಾರ್ಷಿಕ ವರದಿ ಮಂಡಿಸಿದ್ದು, ರಾಜ್ಯದ ವಾಣಿಜ್ಯ ತೆರಿಗೆ, ಅಬಕಾರಿ, ಮೋಟಾರು ವಾಹನ ತೆರಿಗೆಗಳು ಮತ್ತು ನೋಂದಣಿ ಮತ್ತು ಮುದ್ರಾಂಕ ಸೇರಿ ನಾಲ್ಕೂ ತೆರಿಗೆಗಳು ಸೆಪ್ಟಂಬರ್‌ ವರೆಗೆ ಶೇ. 46ರಷ್ಟು ಸಂಗ್ರಹವಾಗಿದೆ. ಕಳೆದ ವರ್ಷ ಅಂದರೆ 2020-21ನೇ ಸಾಲಿನಲ್ಲಿ ಸೆಪ್ಟಂಬರ್‌ವರೆಗೆ ಶೇ.37ರಷ್ಟು ಮಾತ್ರ ತೆರಿಗೆ ಸಂಗ್ರಹ ಮಾಡಲಾಗಿತ್ತು.

ಸೆಪ್ಟಂಬರ್‌ ಅಂತ್ಯದವರೆಗೂ ವಾಣಿಜ್ಯ ತೆರಿಗೆ 36,285 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 19.2ರಷ್ಟು ಹೆಚ್ಚಳವಾಗಿದೆ. ಅಬಕಾರಿ ತೆರಿಗೆ 12,396 ಕೋಟಿ ರೂ. ಸಂಗ್ರಹವಾಗಿದ್ದು, ಶೇ.50 ಸಂಗ್ರಹವಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 26.9 ಹೆಚ್ಚಳವಾಗಿದೆ. ಮೋಟಾರು ವಾಹನ ತೆರಿಗೆ 2,836 ಕೋಟಿ ಸಂಗ್ರಹ ವಾಗಿದ್ದು, ಸೆಪ್ಟಂಬರ್‌ ವರೆಗೂ ಶೇ.38ರಷ್ಟು ಪ್ರಗತಿ ಸಾಧಿಸಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 54.1 ಹೆಚ್ಚಳವಾಗಿದೆ. ನೋಂದಣಿ ಮತ್ತು ಮುದ್ರಾಂಕ ಶುಲ್ಕ 5,942 ಕೋಟಿ ರೂ. ಸಂಗ್ರಹವಾಗಿದ್ದು, ಇದುವರೆಗೂ ಶೇ.47 ಸಂಗ್ರಹ ವಾಗಿದೆ. ಇತರ ಮೂಲಗಳಿಂದ 257 ಕೋಟಿ ರೂ. ಸಂಗ್ರಹವಾಗಿದೆ.

ಸರಕಾರ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ಯಾವುದೇ ಸಾಲ ಮಾಡಿಲ್ಲ. ಕೋವಿಡ್‌ನಿಂದಾಗಿ ಆರ್ಥಿಕ ನಷ್ಟ ಸರಿದೂರಿಸಲು ರಾಜ್ಯ ಸರಕಾರಗಳು ಜಿಎಸ್‌ಡಿಪಿಯ ಶೇ.1ರಷ್ಟು ಹೆಚ್ಚುವರಿ ಸಾಲ ಪಡೆಯಲು ಕೇಂದ್ರ ಸರಕಾರ ಆನುಮತಿ ನೀಡಿದೆ. 2021-22ನೇ ಸಾಲಿನಲ್ಲಿ ಜಿಎಸ್‌ಟಿ ಸಂಗ್ರಹದ ಕೊರತೆ ಸರಿದೂಗಿಸಲು ಕೇಂದ್ರ ಸರಕಾರದಿಂದ ಸ್ಪೆಷಲ್‌ ವಿಂಡೋ ಅಡಿಯಲ್ಲಿ ಸರಕಾರ 18,109 ಕೋಟಿ ಪಡೆಯುತ್ತದೆ ಎಂದು ಅಂದಾಜಿಸಲಾಗಿದೆ. ಸೆಪ್ಟಂಬರ್‌ ವರೆಗೆ ಕೇಂದ್ರದಿಂದ ರಾಜ್ಯಕ್ಕೆ 8,542 ಕೋಟಿ ರೂ. ಬಂದಿದೆ.

ಇದನ್ನೂ ಓದಿ:ಪೆಗಾಸಸ್‌ ವಿವಾದ: ಪ.ಬಂಗಾಳಕ್ಕೆ ಮುಖಭಂಗ; ಸಮಿತಿಯ ತನಿಖೆಗೆ ಸುಪ್ರೀಂ ಕೋರ್ಟ್‌ ತಡೆ

ಎನ್‌ಡಿಆರ್‌ಎಫ್‌ ನಿಯಮ ಪ್ರಕಾರ ಪರಿಹಾರ
ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಹಾನಿಗೊಳಗಾದ ಬೆಳೆ ಪರಿಹಾರ ನೀಡಲು ರಾಜ್ಯ ಸರಕಾರಕ್ಕೆ ಹೆಚ್ಚಿನ ಹಣಕಾಸಿನ ಹೊರೆಯಾಗುತ್ತಿದ್ದು. ಇನ್ನು ಮುಂದೆ ಸರಕಾರ ಕೇಂದ್ರದ ಎನ್‌ಡಿಆರ್‌ಎಫ್‌ ನಿಯಮಗಳ ಪ್ರಕಾರವಷ್ಟೇ ಪರಿಹಾರ ನೀಡಬೇಕೆಂದು ಮುಖ್ಯ ಕಾರ್ಯ ದರ್ಶಿ ನೇತೃತ್ವದ ವಿತ್ತೀಯ ನಿರ್ವಹಣೆ ಪರಿಶೀಲನ ಸಮಿತಿ ಶಿಫಾರಸು ಮಾಡಿದೆ.

ಕೋವಿಡ್‌ ಕಾರಣದಿಂದ ತೆರಿಗೆ ಸಂಗ್ರಹದಲ್ಲಿ ಕೊರತೆಯಾಗಿದ್ದು, ನೆರೆ ಪರಿಹಾರ ನೀಡಲು ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಅರ್‌ಎಫ್‌ ಷರತ್ತುಗಳಿಗಿಂತ ಹೆಚ್ಚುವರಿ ಪರಿಹಾರ ನೀಡುತ್ತಿರುವುದು ಸರಕಾರಕ್ಕೆ ಹೊರೆಯಾಗಿದೆ ಎಂದು ಸಮಿತಿ ತಿಳಿಸಿದೆ.

ಸಹಾಯಾನುದಾನ ಇಳಿಮುಖ
ಕೇಂದ್ರ ತೆರಿಗೆ ಪಾಲು ರಾಜ್ಯಕ್ಕೆ ಹಂಚಿಕೆ ಮಾಡಿದ್ದ 24,272 ಕೋಟಿ ರೂ. ಪೈಕಿ ಸೆಪ್ಟಂಬರ್‌ವರೆಗೆ 9.488 ಕೋಟಿ ರೂ.ಮೊತ್ತವಷ್ಟೇ ಬಿಡುಗಡೆಯಾಗಿದೆ. 15ನೇ ಹಣಕಾಸು ಆಯೋಗದ ಶಿಫಾರಸು ಪ್ರಕಾರ ರಾಜ್ಯಕ್ಕೆ ಕೇಂದ್ರ ಹಂಚಿಕೆ ಮಾಡಿದ್ದ ತೆರಿಗೆ ಪಾಲಿನಲ್ಲಿ ಶೇ.39 ರಷ್ಟು ಮಾತ್ರ ಬಂದಿದೆ. ಕೇಂದ್ರ ತೆರಿಗೆಯಲ್ಲಿ ರಾಜ್ಯದ ಪಾಲು ಮತ್ತು ಸಹಾಯಾನುದಾನ ಇಳಿಮುಖವಾಗಿದೆ. ಕೊರೊನಾ ಎರಡನೇ ಅಲೆ ಪರಿಣಾಮವಾಗಿ ತೆರಿಗೆ ಸಂಗ್ರಹದಲ್ಲಿ 3,105 ಕೋಟಿ ರೂ. ಕೊರತೆಯಾಗಿರುವ ಬಗ್ಗೆಯೂ ಹಣಕಾಸಿನ ಮಧ್ಯವಾರ್ಷಿಕ ಪರಿಶೀಲನೆ ವರದಿಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.