ಉಗ್ರರಿಗೆ ಆಶ್ರಯ: ಪಾಕ್‌ ವಿರುದ್ಧ ಬಿಗು ನಿಲುವು ಅನಿವಾರ್ಯ


Team Udayavani, Dec 18, 2021, 6:00 AM IST

ಉಗ್ರರಿಗೆ ಆಶ್ರಯ: ಪಾಕ್‌ ವಿರುದ್ಧ ಬಿಗು ನಿಲುವು ಅನಿವಾರ್ಯ

ಭಾರತವನ್ನು ಗುರಿಯಾಗಿಸಿ ಕಾರ್ಯನಿರ್ವಹಿಸುತ್ತಿರುವ ಉಗ್ರ ಸಂಘಟ­ನೆ­ಗಳಿಗೆ ಪಾಕಿಸ್ಥಾನ ಇನ್ನೂ ಆಶ್ರಯ ನೀಡುತ್ತಲೇ ಬಂದಿದ್ದು ಉಗ್ರ ಸಂಘಟನೆಗಳ ಪ್ರಮುಖ ನಾಯಕರು ಆ ದೇಶದಲ್ಲಿ ಓಡಾಡುತ್ತಿದ್ದಾರೆ ಎಂದು ಭಯೋತ್ಪಾದಕತೆ ಕುರಿತಾಗಿನ ವರದಿಯಲ್ಲಿ ಅಮೆರಿಕ ಹೇಳಿದೆ.

ದಶಕಗಳಿಂದ ಉಗ್ರರ ಸುಭದ್ರ ನೆಲೆಯಾಗಿ ಮಾರ್ಪಟ್ಟಿರುವ ಪಾಕಿಸ್ಥಾನವು ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಲೇ ಬಂದಿದೆ. ಭಾರತದ ವಿರುದ್ಧ ಪಾಕಿಸ್ಥಾನ ನಿರಂತರವಾಗಿ ಉಗ್ರರನ್ನು ಎತ್ತಿಕಟ್ಟಿ ಅಶಾಂತಿಯ ವಾತಾವರಣ ಸೃಷ್ಟಿಸಲು ಪ್ರಯತ್ನಿ­ಸು­ತ್ತಲೇ ಬಂದಿದೆ. ಈ ಹಿನ್ನೆಲೆಯಲ್ಲಿ ಭಾರತ ವಿಶ್ವಸಂಸ್ಥೆ ಸಹಿತ ಅಂತಾ­ರಾಷ್ಟ್ರೀಯ ಮಟ್ಟದಲ್ಲಿ ಭಯೋತ್ಪಾದನೆ ವಿಚಾರ ಪ್ರಸ್ತಾವವಾದಗಲೆಲ್ಲ ಪಾಕಿಸ್ಥಾನದ ವಿರುದ್ಧ ಕಠಿನ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಚೀನವನ್ನು ಹೊರತುಪಡಿಸಿದಂತೆ ಅಮೆರಿಕ ಆದಿಯಾಗಿ ವಿಶ್ವದ ಬಹುತೇಕ ಬಲಾಡ್ಯ ರಾಷ್ಟ್ರಗಳು ಪಾಕಿಸ್ಥಾನಕ್ಕೆ ಎಚ್ಚರಿಕೆ ನೀಡುವ ಮತ್ತು ನಿರ್ಬಂಧಗಳನ್ನು ಹೇರುವ ಮೂಲಕ ಉಗ್ರರಿಗೆ ಆಶ್ರಯ ಮತ್ತು ಆರ್ಥಿಕ ನೆರವು ನೀಡುವುದನ್ನು ಸ್ಥಗಿತಗೊಳಿಸುವಂತೆ ಎಚ್ಚರಿಸುತ್ತಲೇ ಬಂದಿವೆ. ಆದರೆ ಪರಿಸ್ಥಿತಿಗನುಗುಣವಾಗಿ ಗೋಸುಂಬೆತನ­ವನ್ನು ಪ್ರದರ್ಶಿಸುತ್ತಾ ಬಂದಿರುವ ಪಾಕ್‌ ಉಗ್ರರ ಪೋಷಣೆಯನ್ನು ಮುಂದುವರಿಸಿದೆ. ಇದು ಭಾರತಕ್ಕೆ ಮಾತ್ರವಲ್ಲದೆ ವಿಶ್ವಶಾಂತಿಗೆ ಭಂಗ ತರುವ ಸಾಧ್ಯತೆಗಳಿವೆ.

ನಿಷೇಧಿತ ಉಗ್ರಗಾಮಿ ಸಂಘಟನೆಯಾಗಿರುವ ಐಸಿಸ್‌ನಲ್ಲಿ ಭಾರತೀಯ ಮೂಲದ 66 ಉಗ್ರರಿದ್ದಾರೆ ಎಂಬ ಕಳವಳಕಾರಿ ವಿಷಯವನ್ನೂ ಅಮೆರಿಕ ತನ್ನ ವರದಿಯಲ್ಲಿ ತಿಳಿಸಿದೆ. ಐಸಿಸ್‌ ಸಹಿತ ಎಲ್ಲ ಉಗ್ರಗಾಮಿ ಸಂಘಟನೆಗಳ ವಿರುದ್ಧ ಎನ್‌ಐಎ ಸಹಿತ ದೇಶದ ಎಲ್ಲ ಭಯೋತ್ಪಾದನ ನಿಗ್ರಹ ಸಂಸ್ಥೆಗಳು ಹದ್ದುಗಣ್ಣಿರಿಸಿವೆ. ಇದೀಗ ಪಾಕ್‌ ಪ್ರೇರಿತ ಉಗ್ರಗಾಮಿ ಸಂಘಟನೆಗಳು ಸಂಘಟನೆಗಳಿಗೆ ಸದಸ್ಯರ ಸೇರ್ಪಡೆ, ಹಿಂಸಾಚಾರಕ್ಕೆ ಪ್ರಚೋದನೆ ನೀಡಲು ಇಂಟರ್‌ನೆಟ್‌ ಮತ್ತು ಸಾಮಾಜಿಕ ಜಾಲ ತಾಣಗಳನ್ನು ಬಳಸತೊಡಗಿರುವುದು ದೇಶದ ತನಿಖಾ ಸಂಸ್ಥೆಗಳ ಪಾಲಿಗೆ ಬಲುದೊಡ್ಡ ಸವಾಲಾಗಿ ಪರಿಣಮಿಸಿದೆ. ಕಳೆದೆರಡು ವರ್ಷಗಳಿಂದ ಅಮೆರಿಕ ಮತ್ತು ಭಾರತ ಜತೆಗೂಡಿ ಉಗ್ರರ ವಿರುದ್ಧ ಜಂಟಿ ಕಾರ್ಯಾಚರಣೆ ನಡೆಸುತ್ತಿವೆ. ಭಾರತದಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ನಿರತವಾಗಿ­ರುವ ಭದ್ರತಾ ಮತ್ತು ತನಿಖಾ ಸಂಸ್ಥೆಗಳ ನಡುವೆ ಗುಪ್ತಚರ ಮಾಹಿತಿ ವಿನಿಮಯದಲ್ಲಿ ಸಮನ್ವಯದ ಕೊರತೆ ಇರುವುದನ್ನು ವರದಿಯಲ್ಲಿ ಬೆಟ್ಟು ಮಾಡಲಾಗಿದೆ. ಜೆಇಎಂ ಮುಖ್ಯಸ್ಥ ಮಸೂದ್‌ ಅಜರ್‌ ಮತ್ತು 2008ರ ಮುಂಬೈ ದಾಳಿಯ “ಪ್ರೊಜೆಕ್ಟ್ ಮ್ಯಾನೇಜರ್‌’ ಸಾಜಿದ್‌ ಮಿರ್‌ ಸಹಿತ ಹಲವು ಉಗ್ರಗಾಮಿ ನಾಯಕರು ಪಾಕಿಸ್ಥಾನದಲ್ಲಿ ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ ಎಂಬುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪಾಕಿಸ್ಥಾನ ಆರ್ಥಿಕವಾಗಿ ಸಂಪೂರ್ಣವಾಗಿ ಜರ್ಝರಿತವಾಗಿದ್ದರೆ ಬಡಜನರು ಒಂದು ಹೊತ್ತಿನ ಆಹಾರಕ್ಕೂ ಪರದಾಡುತ್ತಿರುವ ಪರಿಸ್ಥಿತಿಯಲ್ಲಿದ್ದರೂ ದೇಶದ ಆಡಳಿತ ವ್ಯವಸ್ಥೆ ಮತ್ತು ರಾಜಕೀಯ ಮುಖಂಡರು ತಮ್ಮ ಹಳೆಯ ಚಾಳಿಗೆ ಜೋತು ಬಿದ್ದಂತೆ ಕಂಡುಬರುತ್ತಿದೆ. ಜನರ ಮನಸ್ಸನ್ನು ಬೇರೆಡೆಗೆ ಸೆಳೆಯುವ ಪ್ರಯತ್ನವಾಗಿ ಪಾಕ್‌ ಉಗ್ರರನ್ನು ಬಳಸಿಕೊಂಡು ಇನ್ನೊಂದು ಷಡ್ಯಂತ್ರ ರೂಪಿಸುವ ಸಾಧ್ಯತೆಯನ್ನೂ ಅಲ್ಲಗಳೆಯಲಾಗದು. ಹೀಗಾಗಿ ಭಾರತ ಸರಕಾರ ಮಾತ್ರವಲ್ಲದೆ ಜಾಗತಿಕ ಸಮುದಾಯ ಪಾಕಿಸ್ಥಾನದ ವಿಚಾರದಲ್ಲಿ ಬಿಗು ನಿಲುವನ್ನು ತಾಳಬೇಕಿದೆ.

ಟಾಪ್ ನ್ಯೂಸ್

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.