![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Dec 18, 2021, 7:15 AM IST
ವಾಷಿಂಗ್ಟನ್: ಜಾಗತಿಕ ಉಗ್ರ ಸಂಘಟನೆ ಐಸಿಸ್‌ನಲ್ಲಿ ಕನಿಷ್ಠ 66 ಮಂದಿ ಭಾರತ ಮೂಲದವರಿದ್ದಾರೆ.
ಅಮೆರಿಕದ ವಿದೇಶಾಂಗ ಸಚಿವಾಲ ಯದ 2020ನೇ ಸಾಲಿನ “ದೇಶಗಳಲ್ಲಿ ಭಯೋತ್ಪಾದಕತೆ’ ಎಂಬ ವರದಿಯಲ್ಲಿ ಇಂಥ ಒಂದು ಆಘಾತಕಾರಿ ವಿಚಾರವನ್ನು ಬಹಿರಂಗಪಡಿಸಲಾಗಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ ಯ(ಎನ್‌ಐಎ) ಈಗಾಗಲೇ 34 ಪ್ರಕರಣಗಳ ಬಗ್ಗೆ ಪರಿ ಶೀಲನೆ ನಡೆಸಿದ್ದು, ಕೇರಳ ಮತ್ತು ಪಶ್ಚಿಮ ಬಂಗಾಲದಿಂದ 160 ಮಂದಿ ಯನ್ನು ಬಂಧಿಸಿದೆ. ಈ ಪೈಕಿ 10 ಮಂದಿ ಅಲ್‌ಸೇರಿದವರು. ಒಟ್ಟಾರೆ 66 ಭಾರತೀಯರು ಐಸಿಸ್‌ನಲ್ಲಿ ಸಕ್ರಿಯರಾಗಿದ್ದಾರೆ ಎಂದು ವರದಿ ಹೇಳಿದೆ. ಜತೆಗೆ ಉಗ್ರ ನಿಗ್ರಹಕ್ಕಾಗಿ ಭಾರತದ ಎನ್‌ಐಎ ಸೇರಿದಂತೆ ಹಲವು ತನಿಖಾ ಸಂಸ್ಥೆಗಳು ಕೈಗೊಳ್ಳುತ್ತಿರುವ ಕ್ರಮಗಳನ್ನು ವರದಿಯಲ್ಲಿ ಮುಕ್ತಕಂಠದಿಂದ ಶ್ಲಾ ಸಲಾಗಿದೆ.
ಕೋಲ್ಕತಾ ಪೊಲೀಸ್ ಇಲಾಖೆಯ ಉಗ್ರ ನಿಗ್ರಹ ಪಡೆ ಮೇ 29ರಂದು ಬಾಂಗ್ಲಾ ಉಗ್ರ ಸಂಘಟನೆ ಜಮಾತ್-ಉಲ್- ಮುಜಾಹಿದೀನ್‌ನ ಎರಡನೇ ಅತ್ಯುಚ್ಚ ನಾಯಕನನ್ನು ಬಂಧಿಸಿದೆ. ಆತ 2013ರಲ್ಲಿ ಬಿಹಾರದ ಬೋಧ್‌ಗಯಾ ಬಾಂಬ್ ಸ್ಫೋಟಕ್ಕೆ ಕಾರಣನಾಗಿದ್ದಾನೆ ಎಂದು ವರದಿಯಲ್ಲಿಉಲ್ಲೇಖಿಸಲಾಗಿದೆ.
ಇದನ್ನೂ ಓದಿ:ಭಾರತದ ಎಲ್ಲ ನಗರಗಳ ನಡುವೆ ಸೌಂದರ್ಯ ಸ್ಪರ್ಧೆ ನಡೆಯಲಿ: ಪ್ರಧಾನಿ ಮೋದಿ
ಕ್ರಮ ಕೈಗೊಳ್ಳದ ಪಾಕ್: ಜೈಶ್ ಸೇರಿ ಪಾಕಿಸ್ಥಾನಲ್ಲಿರುವ ಭಯೋತ್ಪಾದಕ ಸಂಘಟನೆಗಳು ಇನ್ನೂ ಭಾರತದ ವಿರುದ್ಧ ಕಾರ್ಯಾಚರಣೆ ನಡೆಸುತ್ತಿವೆ. ಅವುಗಳನ್ನು ಮಟ್ಟ ಹಾಕುವಲ್ಲಿ ಪಾಕ್ ಸರಕಾರ ಕೈಗೊಂಡ ಕ್ರಮಗಳು ಏನೇನೂ ಸಾಲದು ಎಂದೂ ಅಮೆರಿಕದ ವರದಿಯಲ್ಲಿ ಉಲ್ಲೇಖೀಸಲಾಗಿದೆ. ಮುಂಬಯಿ ದಾಳಿಯ ರೂವಾರಿ, ವಿಶ್ವಸಂಸ್ಥೆಯ ನಿಷೇಧಿತ ಉಗ್ರರ ಪಟ್ಟಿಯಲ್ಲಿರುವ ಮಸೂದ್ ಅಜರ್, ಆತನ ನಿಕಟವರ್ತಿ ಸಾಜಿದ್ ಮಿರ್ ಇನ್ನೂ ಪಾಕಿಸ್ಥಾನಲ್ಲಿ ಮುಕ್ತವಾಗಿ ವಿಹರಿಸುತ್ತಿದ್ದಾರೆ. ಅವರ ವಿರುದ್ಧ ಪಾಕ್ ಯಾವುದೇ ಕ್ರಮ ಕೈಗೊಂಡಿಲ್ಲ ಎಂದೂ ಟೀಕಿಸಲಾಗಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.