ಕೈಗೆ ಟಾನಿಕ್‌ ನೀಡಿದ ಮೇಲ್ಮನೆ ಗೆಲುವು 


Team Udayavani, Dec 18, 2021, 2:22 PM IST

ಕೈಗೆ ಟಾನಿಕ್‌ ನೀಡಿದ ಮೇಲ್ಮನೆ ಗೆಲುವು 

ಮಂಡ್ಯ: ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್‌ ಚುನಾವಣೆ ಗೆಲುವಿನಿಂದ ಕೈಗೆ ಹುರುಪು ಬಂದಂತಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಒಂದೂ ಸ್ಥಾನ ಗೆಲ್ಲದೆ ಮಕಾಡೆ ಮಲಗಿತ್ತು. ಆದರೆ, ಈಗ ಪುಟಿದೇಳುವ ಮೂಲಕ ಟಾನಿಕ್‌ ಸಿಕ್ಕಂತಾಗಿದೆ.

2018ರವಿಧಾನಸಭೆಚುನಾವಣೆಯಲ್ಲಿ ಸರ್ಕಾರವಿದ್ದರೂ ಒಂದೂ ಸ್ಥಾನ ಗೆಲ್ಲಲು ಸಾಧ್ಯವಾಗಲಿಲ್ಲ. ಇದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಕಂಡಿತ್ತು. ಕೈ ನಾಯಕರಿಗೆ ಇದನ್ನು ಅರಗಿಸಿಕೊಳ್ಳಲು ಸಾಧ್ಯವಾಗದಂಥ ಪರಿಸ್ಥಿತಿ ನಿರ್ಮಾಣವಾಗಿತ್ತು.

ಮೇಲ್ಮನೆ ಗೆಲುವಿನಿಂದ ಪುಟಿದೇಳುವ ತವಕ: ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಭ್ಯರ್ಥಿ ದಿನೇಶ್‌ಗೂಳಿಗೌಡ ಗೆಲ್ಲುವ ಮೂಲಕ ಮತ್ತೆ ಜಿಲ್ಲೆಯಲ್ಲಿಕಾಂಗ್ರೆಸ್‌ ಪುಟಿದೆದ್ದಿದೆ. ಜಿಲ್ಲೆಯ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯಿತಿಯ ಕೆಲವು ಕಡೆ ಆಡಳಿತ ಚುಕ್ಕಾಣಿ ಹಿಡಿದಿದ್ದು ಬಿಟ್ಟರೆ, ನಗರಸಭೆ, ಪುರ ಸಭೆಗಳಲ್ಲಿ ಅಧಿಕಾರ ಹಿಡಿಯಲು ಸಾಧ್ಯವಾಗಲಿಲ್ಲ. ಅಲ್ಲದೆ, ಜಿಲ್ಲಾ ಸಹಕಾರಕೇಂದ್ರ ಬ್ಯಾಂಕ್‌ನಲ್ಲೂ ಹೆಚ್ಚು ನಿರ್ದೇಶಕರನ್ನು ಗೆದ್ದರೂ ಅಧಿಕಾರ ಹಿಡಿಯಲು ಸಾಧ್ಯವಾಗಿರಲಿಲ್ಲ.

ಬಣ ರಾಜಕೀಯ: ಮನೆಯೊಂದು ಮೂರು ಬಾಗಿಲು ಎಂಬಂತೆ ಜಿಲ್ಲಾ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ, ಗುಂಪುಗಾರಿಕೆ ಹೆಚ್ಚಾಗಿತ್ತು. ಇದರಿಂದ ಕೈ ಜಿಲ್ಲೆಯಲ್ಲಿ ಛಿದ್ರ ಛಿದ್ರವಾಗಿತ್ತು. ತಮ್ಮ ನಾಯಕರ ಪರ ಬಣಗಳಿಂದಲೇ ಕಾಂಗ್ರೆಸ್‌ಗೆ ಹಿನ್ನೆಡೆಯಂಟಾಗುತ್ತಿತ್ತು. ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಬಿಜೆಪಿಯಲ್ಲಿದ್ದರೂ, ಅವರ ಬೆಂಬಲಿಗರು ಸಕ್ರಿಯರಾಗಿದ್ದಾರೆ.

ಮತ್ತೂಂದೆಡೆ ಮಾಜಿ ಸಚಿವ ದಿವಂಗತ ಅಂಬರೀಷ್‌ ಬಣವೂ ಸುಮಲತಾಅವರೊಂದಿಗೆ ಗುರುತಿಸಿಕೊಂಡಿದ್ದರೂ, ಕಾಂಗ್ರೆಸ್‌ ಪರವಾಗಿಯೇ ಇದ್ದಾರೆ. ಇದಕ್ಕೆ ಉದಾಹರಣೆ ವಿಧಾನ ಪರಿಷತ್‌ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಎಸ್‌ಎಂಕೆ ಹಾಗೂ ಅಂಬರೀಷ್‌ ಬಣವೂ ಸಂಭ್ರಮಿಸಿತ್ತು.

ಅಭ್ಯರ್ಥಿ ಪರನಿಂತ ಎಸ್‌ಎಂಕೆ ಬಣ: ವಿಧಾನ ಪರಿಷತ್‌ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ದಿನೇಶ್‌ಗೂಳಿಗೌಡರನ್ನು ಸೂಚಿಸಿದ್ದೇ ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಎಂಬ ಮಾತುಗಳು ಕೇಳಿ ಬಂದಿದ್ದವು. ಕಾಂಗ್ರೆಸ್‌ ನಲ್ಲಿದ್ದಾಗ ದಿನೇಶ್‌ ಗೂಳಿಗೌಡ ಎಸ್‌.ಎಂ.ಕೃಷ್ಣ ಅವರ ಬಳಿಯೂ ಕೆಲಸ ಮಾಡಿದ್ದರು. ಬಿಜೆಪಿ ಸೇರಿದರೂ ನಿಕಟ ಸಂಪರ್ಕದಲ್ಲಿದ್ದರು. ಅದರಂತೆ ಡಿ.ಕೆ.ಶಿವ ಕುಮಾರ್‌ಗೆ ಮೂಲಕ ಗೂಳಿಗೌಡರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿತ್ತು. ಇದಕ್ಕೆ ಜಿಲ್ಲಾಕಾಂಗ್ರೆಸ್‌ನಲ್ಲಿ ಯಾವುದೇ ಅಪಸ್ವರಕೇಳಿ ಬರಲಿಲ್ಲ. ಬಂದರೂ ಅದು ಗೌಪ್ಯವಾಗಿಯೇ ಉಳಿದು ಬಿಟ್ಟಿತು. ಅಲ್ಲದೆ, ಗೂಳಿ ಗೌಡ ಪರ ಎಸ್‌.ಎಂ.ಕೃಷ್ಣ ಬಣವೂ ಸಕ್ರಿಯವಾಗಿತ್ತು.

ಛಿದ್ರವಾಗಿದ್ದಕಾರ್ಯಕರ್ತರು:2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಅಭ್ಯರ್ಥಿಯನ್ನಾಗಿ ನಿಖೀಲ್‌ ಹೆಸರು ಘೋಷಣೆ ಮಾಡುತ್ತಿದ್ದಂತೆ ಸ್ಥಳೀಯಕಾಂಗ್ರೆಸ್‌ಕಾರ್ಯಕರ್ತರು ನಾಯಕರ ವಿರುದ್ಧ ತಿರುಗಿ ಬಿದ್ದಿದ್ದರು. ಸಾಂಪ್ರದಾಯಿಕ ಎದುರಾಳಿ ಜೆಡಿಎಸ್‌ ಪರ ಕೆಲಸ ಮಾಡಲು

ಹಿಂದೇಟು ಹಾಕಿದ್ದರು. ಕೆಲವು ಕಾರ್ಯಕರ್ತರು ಹೈಕಮಾಂಡ್‌ ಮಾತಿನಂತೆ ನಿಖೀಲ್‌ ಬೆಂಬಲಿಸಿದರೆ, ಇನ್ನುಳಿದ ಬಹುತೇಕ ಕಾರ್ಯಕರ್ತರು, ಜಿಲ್ಲಾ ನಾಯಕರು ಸುಮಲತಾ ಬೆನ್ನಿಗೆ ನಿಂತಿದ್ದರು. ಇದರಿಂದ ಜೆಡಿಎಸ್‌ ಸೋಲಿಗೆಕಾರಣರಾಗಿದ್ದರು. ಅಲ್ಲದೆ, ಬಹುತೇಕ ಕಾರ್ಯಕರ್ತರು ಜೆಡಿಎಸ್‌, ಬಿಜೆಪಿ ಕಡೆಗೆ ವಾಲಿದ್ದರು.

ನಾವಿಕನಿಲ್ಲದ ದೋಣಿಯಂತಾಗಿದ್ದ ಕೈ : ಚಲುವರಾಯ ಸ್ವಾಮಿಗೆ ನಾಯಕತ್ವ :  ವಿಧಾನ ಪರಿಷತ್‌ನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ನಾಯಕರು, ಎನ್‌.ಚಲುವರಾಯ ಸ್ವಾಮಿಗೆ ನಾಯಕತ್ವ ವಹಿಸಲಾಗಿದೆ. ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸಲಾಗುವುದು ಎಂದು ಸಾರಿ ಹೇಳುತ್ತಿದ್ದಾರೆ. ಮುಂದೆಯೂ ಇದೇ ರೀತಿ ಒಗ್ಗಟ್ಟಿನಿಂದ ಮುಂದಿನ ಎಲ್ಲ ಚುನಾವಣೆಗಳನ್ನು ಗೆಲ್ಲಲು ಸಿದ್ಧರಿದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ. ಆದರೆ, ಇದು ಎಲ್ಲಿಯವರೆಗೆ ಸಾಧ್ಯವಾಗಲಿದೆ ಎಂಬುದನ್ನುಕಾದು ನೋಡಬೇಕು.

ಮಂಡ್ಯ ಜಿಲ್ಲೆಯಲ್ಲಿಕಾಂಗ್ರೆಸ್‌ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲುಕಂಡ ನಂತರ ನಾಯಕತ್ವದ ಪ್ರಶ್ನೆ ಎದುರಾಗಿತ್ತು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಒಗ್ಗಟ್ಟುಕಾಣಲಿಲ್ಲ. ಇದರಿಂದ ನಗರಸಭೆ ಸೇರಿದಂತೆ ವಿವಿಧೆಡೆ ಅಧಿಕಾರಕಳೆದುಕೊಳ್ಳಬೇಕಾಯಿತು. ಯಾವುದೇ ಸ್ಥಳೀಯ ಸಂಸ್ಥೆಗಳ ಚುನಾವಣೆ ಗಂಭೀರವಾಗಿರಲಿಲ್ಲ. ಆಗ ಎನ್‌.ಚಲುವರಾಯ ಸ್ವಾಮಿ, ಪಿ.ಎಂ.ನರೇಂದ್ರ ಸ್ವಾಮಿ ಸೇರಿದಂತೆ ಎಲ್ಲರೂ ಇದ್ದರೂ ನಾವಿಕನಿಲ್ಲದ ದೋಣಿಯಂತಾಗಿತು.

 ಬೂದಿಮುಚ್ಚಿದ ಕೆಂಡ :

ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಆದರೆ, ಸ್ಥಳೀಯ ಮುಖಂಡರು, ಕಾರ್ಯಕರ್ತರ  ನ‌ಡುವಿನ ಭಿನ್ನಾಭಿಪ್ರಾಯ, ಅಸಮಾಧಾನ ಬೂದಿ ಮುಚ್ಚಿದ ‌ ಕೆಂಡದಂತೆ ಹೊಗೆಯಾಡುತ್ತಲೇ ಇದೆ. ಯಾವಾಗ ಬೇಕಾದರೂ ಹೊತ್ತಿ ಉರಿಯಬಹುದು. ವಿಧಾನ ಪರಿಷ‌ತ್‌ ಚುನಾವಣೆ ಸಂದರ್ಭದಲ್ಲಿಯೇ ಕೆಲವು ಮುಖಂಡರು ತಮ್ಮ  ‌ಪಕ್ಷದ ‌ ಮುಖಂಡರ ವಿರುದ್ಧವೇ ಕಿಡಿಕಾರಿದ್ದರು.

ಟಾಪ್ ನ್ಯೂಸ್

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.