ಹೆಲ್ಮೆಟ್ ಕಡ್ಡಾಯ, ತಪ್ಪಿದರೆ ಕ್ರಮ: ವಿಜಯಪುರ ಎಸ್ ಪಿ ಎಚ್ಚರಿಕೆ
3 ವರ್ಷಗಳಲ್ಲಿ 442 ಅಪಘಾತ ಸಾವು
Team Udayavani, Dec 18, 2021, 2:34 PM IST
ವಿಜಯಪುರ : ಜಿಲ್ಲೆಯಲ್ಲಿ ಜನವರಿ 1 ರಿಂದ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದ್ದು, ನಿಯಮ ಮೀರುವವರ ವಿರುದ್ಧ ಮೋಟಾರು ವಾಹನ ಕಾಯ್ದೆಯನ್ವಯ ಕ್ರಮ ಅನಿವಾರ್ಯ ಎಂದು ವಿಜಯಪುರ ಎಸ್ ಪಿ ಆನಂದಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ಹೆಲ್ಮೆಟ್ ಧರಿಸುವ ಅಗತ್ಯದ ಕುರಿತ ಜಾಗೃತಿ ಅಭಿಯಾನಕ್ಕಾಗಿ ಹೆಲ್ಮೆಟ್ ಧಾರಿ ಪೊಲೀಸರ ಬೈಕ್ ರ್ಯಾಲಿಗೆ ಚಾಲನೆ ನೀಡಿದ ಅವರು, ಬೈಕ್ ಸವಾರರು ನಿಮ್ಮ ಜೀವ ಉಳಿಸಿಕೊಳ್ಳಲು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಮನವಿ ಮಾಡಿದರು.ಇದೇ ವೇಳೆ ಹೆಲ್ಮೆಟ್ ರಹಿತವಾಗಿ ಬೈಕ್ ಸವಾರಿ ಮಾಡುವ ಸಾರ್ವಜನಿಕರಿಗೆ ಗುಲಾಬಿ ಹೂ ನೀಡಿ ಹೆಲ್ಮೆಟ್ ಧರಿಸುವ ಅಗತ್ಯವನ್ನು ಮನವರಿಕೆ ಮಾಡಿಕೊಟ್ಟರು. ಅಲ್ಲದೇ ಕೆಲವರಿಗೆ ಉಚಿತವಾಗಿ ಹೆಲ್ಮೆಟ್ ನೀಡಿ, ಹೆಲ್ಮೆಟ್ ಧರಿಸಿಯೇ ಬೈಕ್ ಚಾಲನೆ ಮಾಡುವಂತೆ ಕೋರಿದರು.
ಜಿಲ್ಲೆಯಲ್ಲಿ ಡಿಸೆಂಬರ್ 31 ರ ವರೆಗೆ ಹೆಲ್ಮೆಟ್ ಧರುಲಿಸುವ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಜನೇವರಿ 1 ರೊಳಗೆ ದ್ವಿಚಕ್ರ ವಾಹನ ಸವಾರರು ಕಡ್ಡಾಯ ಹೆಲ್ಮೆಟ್ ಧರಸಬೇಕು. ಇಲ್ಲವಾದರೆ ಭಾರತೀಯ ಮೋಟರ್ ವೆಹಿಕಲ್ ಕಾಯ್ದೆಯಡಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಹೆಲ್ಮೆಟ್ ಇಲ್ಲದೇ ಸವಾರಿ ಮಾಡುವಾಗ ಅಪಘಾತವಾಗಿ ಜಿಲ್ಲೆಯಲ್ಲಿ 2019 ರಲ್ಲಿ 130 ಸವಾರರು, 2020 ರಲ್ಲಿ 185 ಸವಾರರು ಹಾಗೂ 2021 ರಲ್ಲಿ 127 ಸವಾರರು ಮೃತಪಟ್ಟಿದ್ದಾರೆ. ಹೀಗಾಗಿ ಬೈಕ್ ಸವಾರರು ಹೆಲ್ಮೆಟ್ ಧರಿಸುವ ವಿಷಯದಲ್ಲಿ ನಿರ್ಲಕ್ಷ ತೋರಬಾರದು ಎಂದು ಸೂಚಿಸಿದರು. ಈ ವೇಳೆ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರುಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.