ಭಾರತ-ಚೀನಾ ಗಡಿಯಲ್ಲಿ ”ಶಂಭೋ ಶಿವ ಶಂಕರ” ಹಾಡು
Team Udayavani, Dec 18, 2021, 3:44 PM IST
ಅಘನ್ಯ ಪಿಕ್ಚರ್ ಮೂಲಕ ವರ್ತೂರು ಮಂಜು ಈ ಚಿತ್ರವನ್ನು ನಿರ್ಮಿಸುತ್ತಿರುವ, ಶಂಕರ್ ಕೋನಮಾನಹಳ್ಳಿ ನಿರ್ದೇಶನದ “ಶಂಭೋ ಶಿವ ಶಂಕರ’ ಚಿತ್ರದ ಚಿತ್ರೀಕರಣ ಹಾಡಿನೊಂದಿಗೆ ಮುಕ್ತಾಯವಾಗಿದೆ.
ಚಿತ್ರದಲ್ಲಿ ಅಭಯ್ ಪುನೀತ್ ನಾಯಕರಾಗಿ ನಟಿಸಿದ್ದಾರೆ. ಇವರಿಗೆ ಸೋನಾಲ್ ಮೊಂತೆರೋ ನಾಯಕಿ. ಸದ್ಯ ಚಿತ್ರೀಕರಣ ಮುಗಿಸಿರುವ ಈ ಚಿತ್ರ ಈ ಡಬ್ಬಿಂಗ್ ಹಂತದಲ್ಲಿದೆ. ಎಲ್ಲವೂ ಅಂದುಕೊಂಡಂತೆ ಆದರೆ, ಫೆಬ್ರವರಿ ಅಥವಾ ಮಾರ್ಚ್ನಲ್ಲಿ ಬಿಡುಗಡೆ ಮಾಡುವ ಯೋಚನೆ ಚಿತ್ರತಂಡಕ್ಕಿದೆ.
ಗೌಸ್ ಫೀರ್ ಬರೆದಿರುವ ಹಾಡೊಂದರ ಚಿತ್ರೀಕರಣ ಮೈನಸ್ ಹತ್ತಕ್ಕೂ ಕಡಿಮೆ ಉಷ್ಣಾಂಶವಿರುವ ಭಾರತ-ಚೀನಾ ಗಡಿಯ ಲಾಹೌಲ್ ಸ್ಪಿಟಿ ಎಂಬ ಸ್ಥಳದಲ್ಲಿ ನಾಲ್ಕು ದಿನಗಳ ಕಾಲ 30 ಲಕ್ಷಕ್ಕೂ ಅಧಿಕ ಬಜೆಟ್ನಲ್ಲಿ ಚಿತ್ರೀಕರಿಸಲಾ ಗಿದೆ.ಕಲೈ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿರುವ ಈ ಹಾಡಿಗೆ ನಾಯಕ ಅಭಯ್ ಪುನೀತ, ನಾಯಕಿ ಸೋನಾಲ್ ಮೊಂತೆರೋ ಹೆಜ್ಜೆ ಹಾಕಿದ್ದಾರೆ.
ಸುಮಾರು ಮೂವತ್ತು ಲಕ್ಷಕ್ಕೂ ಅಧಿಕವೆಚ್ಚದಲ್ಲಿ, ಅದ್ಧೂಯಾಗಿ ಮೂಡಿ ಬಂದಿರುವ ಈ ಹಾಡಿನೊಂದಿಗೆ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ ಎನ್ನುತ್ತಾರೆ ನಿರ್ದೇಶಕರು.
ಇದನ್ನೂ ಓದಿ:ಸಂಗೊಳ್ಳಿ ರಾಯಣ್ಣಗೆ ಅಪಮಾನ: ಕಠಿಣ ಶಿಕ್ಷೆಗೆ ನಟ ದರ್ಶನ್ ಆಗ್ರಹ
ಚಿತ್ರದಲ್ಲಿ ನಾಯಕ ಅಭಯ್ ಪುನೀತ್ ಜೊತೆಗೆ ಸುಪ್ರಿಂ ಹೀರೋ ಶಶಿಕುಮಾರ್, ಸೋನಾಲ್ ಮಾಂತೆ ರೋ, ಜೊಗಿ ನಾಗರಾಜ್, ಪ್ರದೀಪ್ ತಿಪಟೂರು, ಆಶಾ ಸುಜಯ್, ಪ್ರೇಮ, ರೋಹಿಣಿ, ಸಂಗಮೇಶ್, ಡಿ.ಸಿ.ತಮ್ಮಣ್ಣ ಮುಂತಾದವರು ಈ ಚಿತ್ರದ ತಾರಾ ಬಳಗದಲ್ಲಿದ್ದಾರೆ.
ಚಿತ್ರಕ್ಕೆ ಹಿತನ್ ಹಾಸನ್ ಸಂಗೀತ ಹಾಗೂ ಧರ್ಮ ವಿಶ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ನಟರಾಜ್ ಮುದ್ದಾಲ ಛಾಯಾಗ್ರಹಣ, ಕಲೈ ನೃತ್ಯ ನಿರ್ದೇಶನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ವೆಂಕಟೇಶ್ ಯುಡಿವಿ ಅವರ ಸಂಕಲವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.